36 ಸಿಕ್ಸ್​ಗಳೊಂದಿಗೆ ಹೊಸ ದಾಖಲೆ ಬರೆದ ಅಭಿನವ್ ಮನೋಹರ್

|

Updated on: Aug 26, 2024 | 1:08 PM

Abhinav Manohar: ಅಭಿನವ್ ಮನೋಹರ್ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ. 2022 ರಿಂದ ಗುಜರಾತ್ ಟೈಟಾನ್ಸ್ ಪರ ಮಧ್ಯಮ ಕ್ರಮಾಂಕದಲ್ಲಿ 15 ಇನಿಂಗ್ಸ್ ಆಡಿರುವ ಅಭಿನವ್ 10 ಭರ್ಜರಿ ಸಿಕ್ಸ್ ಹಾಗೂ 21 ಫೋರ್​ಗಳೊಂದಿಗೆ ಒಟ್ಟು 231 ರನ್ ಕಲೆಹಾಕಿದ್ದಾರೆ. ಇದಾಗ್ಯೂ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಅಭಿನವ್ ಅವರನ್ನು ಗುಜರಾತ್ ಟೈಟಾನ್ಸ್ ತಂಡ ರಿಲೀಸ್ ಮಾಡುವ ಸಾಧ್ಯತೆಯಿದೆ.

1 / 5
ಪ್ರಸ್ತುತ ನಡೆಯುತ್ತಿರುವ ಮಹಾರಾಜ ಟಿ20 ಟೂರ್ನಿಯಲ್ಲಿ 36 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಅಭಿನವ್ ಮನೋಹರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಶಿವಮೊಗ್ಗ ಲಯನ್ಸ್ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿರುವ ಮನೋಹರ್ ಈವರಗೆ 200 ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ 36 ಸಿಕ್ಸ್​ಗಳನ್ನು ಸಿಡಿಸಿರುವುದು ವಿಶೇಷ.

2 / 5
ಈ ಮೂಲಕ ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಒಂದೇ ಸೀಸನ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆಯನ್ನು ಅಭಿನವ್ ಮನೋಹರ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಮೊಹಮ್ಮದ್ ತಾಹ ಹೆಸರಿನಲ್ಲಿತ್ತು.

3 / 5
2023ರ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಹುಬ್ಬಳ್ಳಿ ಟೈಗರ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಮೊಹಮ್ಮದ್ ತಾಹ 12 ಪಂದ್ಯಗಳಿಂದ ಒಟ್ಟು 32 ಸಿಕ್ಸ್ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಅಭಿನವ್ ಮನೋಹರ್ ಯಶಸ್ವಿಯಾಗಿದ್ದಾರೆ.

4 / 5
ಶಿವಮೊಗ್ಗ ಲಯನ್ಸ್ ಪರ 8 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಅಭಿನವ್ ಮನೋಹರ್ ಒಟ್ಟು 36 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆಯನ್ನು ಅಭಿನವ್ ತಮ್ಮದಾಗಿಸಿಕೊಂಡಿದ್ದಾರೆ.

5 / 5
ಇನ್ನು ಈ ಬಾರಿಯ ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಭಿನವ್ ಮನೋಹರ್ ಅಗ್ರಸ್ಥಾನದಲ್ಲಿದ್ದಾರೆ. ಈವರೆಗೆ 8 ಇನಿಂಗ್ಸ್​ಗಳನ್ನಾಡಿರುವ ಅಭಿನವ್ 4 ಅರ್ಧಶತಕಗಳೊಂದಿಗೆ ಒಟ್ಟು 372	 ರನ್ ಕಲೆಹಾಕಿದ್ದಾರೆ. ಇದೇ ವೇಳೆ ಅವರು 8 ಫೋರ್ ಹಾಗೂ 36 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ವಿಶೇಷ ಎಂದರೆ 8 ಪಂದ್ಯಗಳಿಂದ ಅಭಿನವ್ ಬ್ಯಾಟ್​ನಿಂದ ಮೂಡಿಬಂದಿರುವುದು ಕೇವಲ 8 ಫೋರ್​ಗಳು ಮಾತ್ರ. ಇದೇ ವೇಳೆ ಅವರು 36 ಸಿಕ್ಸ್​​ಗಳನ್ನು ಸಿಡಿಸಿದ್ದಾರೆ. ಅಂದರೆ ಸಿಕ್ಸರ್​ಗಳ ಮೂಲಕವೇ ಸ್ಪೋಟಕ ಇನಿಂಗ್ಸ್ ಆಡುವಲ್ಲಿ ಅಭಿನವ್ ಮನೋಹರ್ ಯಶಸ್ವಿಯಾಗಿದ್ದಾರೆ.