ಕ್ರಿಕೆಟಿಗ ಅಭಿಷೇಕ್ ಪೊರೆಲ್​ಗೆ 14 ದಿನಗಳ ನ್ಯಾಯಾಂಗ ಬಂಧನ

Updated on: Aug 14, 2026 | 6:51 PM

Cricketer Abhishek Porel's Bail Rejected Again: ಯುವ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಜಾಮೀನು ಅರ್ಜಿ ಚಿನ್ಸುರಾ ನ್ಯಾಯಾಲಯದಲ್ಲಿ ಮತ್ತೊಮ್ಮೆ ತಿರಸ್ಕೃತಗೊಂಡಿದೆ. ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ದೈಹಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಪೊರೆಲ್, ಈಗ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಮದುವೆಯ ಭರವಸೆ ನೀಡಿ ಲೈಂಗಿಕ ಸಂಬಂಧ ಹಾಗೂ ಅದನ್ನು ರೆಕಾರ್ಡ್ ಮಾಡಿದ ಆರೋಪ ಅವರ ಮೇಲಿದೆ. ಕೋಲ್ಕತ್ತಾ ಹೈಕೋರ್ಟ್ ಆದೇಶದ ಮೇರೆಗೆ ಅವರನ್ನು ಬಂಧಿಸಲಾಗಿತ್ತು.

1 / 5
ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ದೈಹಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತು ಬಂಧನಕ್ಕೊಳಗಾಗಿರುವ ಟೀಂ ಇಂಡಿಯಾದ ಯುವ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಅವರ ಜಾಮೀನು ಅರ್ಜಿಯನ್ನು ಮತ್ತೊಮ್ಮೆ ತಿರಸ್ಕರಿಸಿರುವ ಚಿನ್ಸುರಾ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಹೀಗಾಗಿ 14 ದಿನ ಅಭಿಷೇಕ್ ಪೊರೆಲ್ ಜೈಲಿನಲ್ಲಿಯೇ ಕಳಯಬೇಕಿದೆ.

2 / 5
ಅಭಿಷೇಕ್ ಪೊರೆಲ್ ಬೆಂಗಳೂರು ಮೂಲದ ವೈದ್ಯಕೀಯ ವಿದ್ಯಾರ್ಥಿನಿಗೆ ಮದುವೆಯಾಗುವ ಭರವಸೆ ನೀಡಿ ಆಕೆಯ ಜೊತೆಗೆ ಲೈಂಗಿಕ ಸಂಬಂಧ ಹೊಂದಿದ್ದು ಮಾತ್ರವಲ್ಲದೆ, ಆ ಘಟನೆಯನ್ನು ರೆಕಾರ್ಡ್ ಮಾಡಿಕೊಂಡಿರುವ ಆರೋಪ ಹೊತ್ತಿದ್ದಾರೆ. ಹೀಗಾಗಿ ಆಗಸ್ಟ್ 11 ರಂದು ಪೊರೆಲ್ ಅವರನ್ನು ಪೊಲೀಸರು ಬಂಧಿಸಿದ್ದರು.

3 / 5
ಆರಂಭದಲ್ಲಿ ಅಭಿಷೇಕ್ ಪೊರೆಲ್ ಅವರನ್ನು ನ್ಯಾಯಾಲಯವು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿತ್ತು. ಆದರೀಗ ಚಿನ್ಸುರಾ ನ್ಯಾಯಾಲಯ ಅಭಿಷೇಕ್ ಪೊರೆಲ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

4 / 5
ಅಭಿಷೇಕ್ ಪೊರೆಲ್ ಮತ್ತು ಆರೋಪ ಮಾಡಿರುವ ವಿದ್ಯಾರ್ಥಿನಿ ಮೂರು ವರ್ಷಗಳಿಂದ ಜೊತೆಯಲ್ಲಿದ್ದರು. ಇಬ್ಬರು ಒಟ್ಟಿಗೆ ವಿದೇಶ ಪ್ರವಾಸ ಕೂಡ ಮಾಡಿದ್ದು, ಮದುವೆಯಾಗಲು ಸಹ ಯೋಜಿಸಿದ್ದರು. ಆದರೆ ಸುಮಾರು 18 ತಿಂಗಳ ಹಿಂದೆ ಇಬ್ಬರ ನಡುವೆ ಜಗಳವಾಗಿ, ಈ ಜಗಳ ಪೊಲೀಸ್ ಠಾಣೆವರೆಗೂ ತಲುಪಿತ್ತು. ಆದರೆ ಆ ಸಮಯದಲ್ಲಿ ಅಭಿಷೇಕ್​ರನ್ನು ಬಂಧಿಸಿರಲಿಲ್ಲ. ಹೀಗಾಗಿ ಯುವತಿ, ಕೋಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಆ ನಂತರ ನ್ಯಾಯಾಲಯವು ಅಭಿಷೇಕ್ ಅವರನ್ನು ತಕ್ಷಣವೇ ಬಂಧಿಸುವಂತೆ ಪೊಲೀಸರಿಗೆ ಆದೇಶಿಸಿತ್ತು.

5 / 5
23 ವರ್ಷದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಅಭಿಷೇಕ್ ದೇಶೀಯ ಕ್ರಿಕೆಟ್​ನಲ್ಲಿ ಬಂಗಾಳವನ್ನು ಪ್ರತಿನಿಧಿಸುತ್ತಿದ್ದಾರೆ. ಇದುವರೆಗೆ 32 ಪ್ರಥಮ ದರ್ಜೆ ಪಂದ್ಯಗಳನ್ನಾಡಿರುವ ಪೊರೆಲ್ 50 ಇನ್ನಿಂಗ್ಸ್‌ಗಳಲ್ಲಿ 1,408 ರನ್ ಗಳಿಸಿದ್ದಾರೆ, ಇದರಲ್ಲಿ ಒಂದು ಶತಕ ಮತ್ತು 12 ಅರ್ಧಶತಕಗಳು ಸೇರಿವೆ. ಹಾಗೆಯೇ 23 ಲಿಸ್ಟ್ ಎ ಪಂದ್ಯಗಳಲ್ಲಿ 833 ರನ್ ಮತ್ತು 61 ಟಿ20 ಪಂದ್ಯಗಳಲ್ಲಿ 1,590 ರನ್ ಗಳಿಸಿದ್ದಾರೆ. ಇದರಲ್ಲಿ 11 ಅರ್ಧಶತಕಗಳು ಸೇರಿವೆ.

Loading...
Unable to load recommendations.
Follow Us