
ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026 ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ಎ ತಂಡದ ವಿರುದ್ಧ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಪಾಕಿಸ್ತಾನ ಎ ತಂಡ ನೀಡಿದ 314 ರನ್ಗಳ ಗುರಿ ಬೆನ್ನಟ್ಟಿದ ಭಾರತ ಎ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಕೇವಲ 26 ರನ್ಗಳಾಗುವಷ್ಟರಲ್ಲಿ ತಂಡ ಎರಡು ಪ್ರಮುಖ ವಿಕೆಟ್ಗಳನ್ನು ಕಳೆದುಕೊಂಡಿತು. ಈ ಸಂಕಷ್ಟದ ಸಮಯದಲ್ಲಿ ಕ್ರೀಸ್ಗೆ ಅಂಟಿಕೊಂಡ ಅಭಿಷೇಕ್ ಶರ್ಮಾ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದರು(PC-BCCI x).
ಒತ್ತಡದ ನಡುವೆಯೂ ತಾಳ್ಮೆ ಕಳೆದುಕೊಳ್ಳದ ಅಭಿಷೇಕ್ ಶರ್ಮಾ, ಪಾಕಿಸ್ತಾನದ ಬೌಲರ್ಗಳ ಬೆಂಡೆತ್ತಿದರು. ಕೇವಲ 42 ಎಸೆತಗಳಲ್ಲಿ 70 ರನ್ ಸಿಡಿಸಿ ಅಬ್ಬರಿಸಿದರು. ಈ ಸ್ಫೋಟಕ ಇನ್ನಿಂಗ್ಸ್ನಲ್ಲಿ 6 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್ಗಳನ್ನು ಸಿಡಿಸುವ ಮೂಲಕ ಎದುರಾಳಿ ಬೌಲರ್ಗಳನ್ನು ಕಂಗೆಡಿಸಿದರು(PC-BCCI x).
ಎಂಟನೇ ಓವರ್ನಲ್ಲಿ ಇಮ್ರಾನ್ ರಾಂಧಾವ ಬೌಲಿಂಗ್ನಲ್ಲಿ ಅಭಿಷೇಕ್ ಶರ್ಮಾ ಅಕ್ಷರಶಃ ಅಬ್ಬರಿಸಿದರು. ಈ ಒಂದೇ ಓವರ್ನಲ್ಲಿ ಬರೋಬ್ಬರಿ 24 ರನ್ ಚಚ್ಚಿದರು. ಮೊದಲ ಎಸೆತವನ್ನು ಬಿಟ್ಟ ಅಭಿಷೇಕ್, ಬಳಿಕ ಮಿಡ್ ಆಫ್ ಹಾಗೂ ಕವರ್ ದಿಕ್ಕಿನಲ್ಲಿ ಸತತ ಎರಡು ಬೌಂಡರಿ ಬಾರಿಸಿದರು. ನಂತರ ಪಾಯಿಂಟ್ ಹಾಗೂ ಎಕ್ಸ್ಟ್ರಾ ಕವರ್ ಮೇಲಿಂದ ಎರಡು ಭರ್ಜರಿ ಸಿಕ್ಸರ್ ಸಿಡಿಸಿದರು. ಆ ಬಳಿಕ ಮತ್ತೊಂದು ಬೌಂಡರಿ ಬಾರಿಸಿ ಎದುರಾಳಿ ತಂಡಕ್ಕೆ ನಡುಕ ಹುಟ್ಟಿಸಿದರು(PC-BCCI x).
ಆರಂಭದಲ್ಲೇ ಎರಡು ವಿಕೆಟ್ ಕಳೆದುಕೊಂಡಿದ್ದ ಭಾರತ ಎ ತಂಡಕ್ಕೆ ಅಭಿಷೇಕ್ ಶರ್ಮಾ ಅವರ ಈ ಸಿಡಿಲಬ್ಬರದ ಬ್ಯಾಟಿಂಗ್ ದೊಡ್ಡ ಆಸರೆಯಾಯಿತು. ತಂಡವನ್ನು ಸಂಕಷ್ಟದಿಂದ ಪಾರು ಮಾಡಲು ಅವರು ಪ್ರಯತ್ನಿಸಿದರು. ಆದರೆ, ದೊಡ್ಡ ಹೊಡೆತಕ್ಕೆ ಕೈಹಾಕಿದ ಸಂದರ್ಭದಲ್ಲಿ ಹಸನ್ ನವಾಜ್ ಬೌಲಿಂಗ್ನಲ್ಲಿ ವಿಕೆಟ್ ಒಪ್ಪಿಸಿ ಪೆವಿಲಿಯನ್ಗೆ ಮರಳಿದರು(PC-BCCI x).
ಈ ಟೂರ್ನಿಯಲ್ಲಿ ಅಭಿಷೇಕ್ ಶರ್ಮಾ ಅವರಿಗೆ ಆರಂಭ ಅಷ್ಟೇನೂ ಉತ್ತಮವಾಗಿರಲಿಲ್ಲ. ಇದಕ್ಕೂ ಮೊದಲು ನೇಪಾಳ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 9 ರನ್ ಗಳಿಸಿ ಔಟಾಗಿದ್ದರು. ಆದರೆ, ಪಾಕಿಸ್ತಾನ ಎ ತಂಡದ ವಿರುದ್ಧದ ಮಹತ್ವದ ಪಂದ್ಯದಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಭರ್ಜರಿ ಕಮ್ಬ್ಯಾಕ್ ಮಾಡಿದ್ದಾರೆ(PC-BCCI x).
ಅಭಿಷೇಕ್ ಶರ್ಮಾ ಸದ್ಯ ಭಾರತ ತಂಡದ ಪರ ಟಿ20 ಮಾದರಿಯಲ್ಲಿ ಮಾತ್ರ ಆಡುತ್ತಿದ್ದಾರೆ. ಹೀಗಾಗಿ ಏಕದಿನ ಮಾದರಿಯಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026 ಟೂರ್ನಿ ಅವರಿಗೆ ತುಂಬಾ ಮಹತ್ವದ್ದಾಗಿದೆ. ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಏಕದಿನ ಕ್ರಿಕೆಟ್ನಲ್ಲೂ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಅಭಿಷೇಕ್ಗೆ ಉತ್ತಮ ಅವಕಾಶ ಸಿಕ್ಕಿದೆ(PC-BCCI x).