ಅಭಿಷೇಕ್ ಆರ್ಭಟಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟ
IPL 2026 SHR vs PBKS: ಇಂಡಿಯನ್ ಪ್ರೀಮಿಯರ್ ಲೀಗ್ನ 49ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 235 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 202 ರನ್ಗಳಿಸಿ ಸೋಲೊಪ್ಪಿಕೊಂಡಿದೆ.
Updated on: May 07, 2026 | 7:31 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ದಾಖಲೆಗಳ ಮೇಲೆ ದಾಖಲೆ ನಿರ್ಮಾಣವಾಗುತ್ತಿದೆ. ಈ ಬಾರಿ ದಾಖಲೆ ಬರೆದಿರುವುದು ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ (Abhishek Sharma). ಅದು ಕೂಡ ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಅವರ ಭರ್ಜರಿ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ. (PC: IPL)

ಹೈದರಾಬಾದ್ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಎಸ್ಆರ್ಹೆಚ್ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಕೇವಲ 13 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 35 ರನ್ ಬಾರಿಸಿದ್ದರು. ಈ ಆಕ್ರಮಣಕಾರಿ ಆಟದೊಂದಿಗೆ ಅಭಿಷೇಕ್ ಶರ್ಮಾ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

ಅಂದರೆ ಐಪಿಎಲ್ ಇತಿಹಾಸದಲ್ಲಿ 200+ ಸ್ಟ್ರೈಕ್ ರೇಟ್ನಲ್ಲಿ ಅತೀ ಹೆಚ್ಚು ಬಾರಿ 30+ ರನ್ ಗಳಿಸಿದ ಆರಂಭಿಕ ದಾಂಡಿಗ ಎಂಬ ದಾಖಲೆ ಇದೀಘ ಅಭಿಷೇಕ್ ಶರ್ಮಾ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕೆಕೆಆರ್, ಆರ್ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. (PC: IPL)

ಕ್ರಿಸ್ ಗೇಲ್ ತಮ್ಮ ಐಪಿಎಲ್ ಕೆರಿಯರ್ನಲ್ಲಿ 200ರ ಸ್ಟ್ರೈಕ್ ರೇಟ್ನಲ್ಲಿ 13 ಬಾರಿ 30 ಕ್ಕಿಂತ ಅಧಿಕ ರನ್ ಕಲೆಹಾಕಿದ್ದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 200ರ ಸ್ಟ್ರೈಕ್ ರೇಟ್ನಲ್ಲಿ 30+ ರನ್ ಕಲೆಹಾಕಿದ ಓಪನರ್ ಎಂಬ ಭರ್ಜರಿ ದಾಖಲೆ ನಿರ್ಮಿಸಿದ್ದರು. (PC: IPL)

ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಅಭಿಷೇಕ್ ಶರ್ಮಾ ಯಶಸ್ವಿಯಾಗಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧ 13 ಎಸೆತಗಳಲ್ಲಿ 35 ರನ್ ಚಚ್ಚುವುದರೊಂದಿಗೆ ಅಭಿಷೇಕ್ ಶರ್ಮಾ 14ನೇ ಬಾರಿ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ 14 ಬಾರಿ 200+ ಸ್ಟ್ರೈಕ್ ರೇಟ್ನಲ್ಲಿ ಅತೀ ಹೆಚ್ಚು ಬಾರಿ 30+ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




