- TV9 Kannada Kannada News Photos Cricket Photos Abhishek Sharma breaks Virat Kohli’s T20 Century record
ಅಭಿಷೇಕ್ ಆರ್ಭಟಕ್ಕೆ ಕಿಂಗ್ ಕೊಹ್ಲಿಯ ದಾಖಲೆಯೇ ಉಡೀಸ್!
ವೆಲ್ಲಿಂಗ್ಟನ್ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ 38 ಎಸೆತಗಳಲ್ಲಿ 11 ಸಿಕ್ಸರ್ ಹಾಗೂ 9 ಫೋರ್ಗಳೊಂದಿಗೆ 113 ರನ್ ಚಚ್ಚಿದ್ದರು. ಈ ಭರ್ಜರಿ ಶತಕದೊಂದಿಗೆ ಅಭಿಷೇಕ್ ಶರ್ಮಾ, ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿದಿದ್ದಾರೆ.
Updated on: Oct 28, 2026 | 8:16 AM

ಟಿ20 ಕ್ರಿಕೆಟ್ನಲ್ಲಿ ಅಭಿಷೇಕ್ ಶರ್ಮಾ ಆರ್ಭಟ ಮುಂದುವರೆದಿದೆ. ಈ ಆರ್ಭಟದೊಂದಿಗೆ ಈ ಬಾರಿ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ದಾಖಲೆಯನ್ನೇ ಉಡೀಸ್ ಮಾಡಿದ್ದಾರೆ. ಅದು ಸಹ ಟಿ20 ಕ್ರಿಕೆಟ್ನಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. (PC: BCCI)

ಹೌದು, ನ್ಯೂಝಿಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಬಾರಿಸಿದ ಭರ್ಜರಿ ಸೆಂಚುರಿಯೊಂದಿಗೆ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. (PC: BCCI)

ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಟಿ20 ಕ್ರಿಕೆಟ್ನಲ್ಲಿ 413 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 10 ಶತಕ ಸಿಡಿಸಿದ್ದಾರೆ. ಈ ಮೂಲಕ ಚುಟುಕು ಮಾದರಿಯಲ್ಲಿ ಅತ್ಯಧಿಕ ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದರು. (PC: BCCI)

ಇದೀಗ ಈ ದಾಖಲೆಯನ್ನು ಅಭಿಷೇಕ್ ಶರ್ಮಾ ಅಳಿಸಿ ಹಾಕಿದ್ದಾರೆ. ಚುಟುಕು ಕ್ರಿಕೆಟ್ನಲ್ಲಿ ಈವರೆಗೆ ಕೇವಲ 215 ಇನಿಂಗ್ಸ್ ಆಡಿರುವ ಅಭಿಷೇಕ್ ಶರ್ಮಾ ಒಟ್ಟು 11 ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಶತಕ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: BCCI)

ಇನ್ನು ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಶತಕ ಸಿಡಿಸಿದ ವಿಶ್ವ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಚುಟುಕು ಕ್ರಿಕೆಟ್ನಲ್ಲಿ 455 ಇನಿಂಗ್ಸ್ ಆಡಿರುವ ಗೇಲ್ ಒಟ್ಟು 22 ಶತಕ ಬಾರಿಸಿದ್ದಾರೆ. ಈ ಮೂಲಕ ಟಿ20 ಇತಿಹಾಸದಲ್ಲೇ ಅತೀ ಹೆಚ್ಚು ಸೆಂಚುರಿ ಸಿಡಿಸಿದ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಇದೀಗ 215 ಇನಿಂಗ್ಸ್ಗಳಲ್ಲೇ 11 ಶತಕ ಸಿಡಿಸಿರುವ ಅಭಿಷೇಕ್ ಮುಂದೊಂದು ದಿನ ಕ್ರಿಸ್ ಗೇಲ್ ವಿಶ್ವ ದಾಖಲೆಯನ್ನೇ ಉಡೀಸ್ ಮಾಡಿದರೂ ಅಚ್ಚರಿಪಡಬೇಕಿಲ್ಲ. (PC: Gettyimages)

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



