ಅಭಿಷೇಕ್ ಆರ್ಭಟಕ್ಕೆ ಕಿಂಗ್ ಕೊಹ್ಲಿಯ ದಾಖಲೆಯೇ ಉಡೀಸ್!

Updated on: Oct 28, 2026 | 8:16 AM

ವೆಲ್ಲಿಂಗ್ಟನ್​ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ 38 ಎಸೆತಗಳಲ್ಲಿ 11 ಸಿಕ್ಸರ್ ಹಾಗೂ 9 ಫೋರ್​ಗಳೊಂದಿಗೆ 113 ರನ್ ಚಚ್ಚಿದ್ದರು. ಈ ಭರ್ಜರಿ ಶತಕದೊಂದಿಗೆ ಅಭಿಷೇಕ್ ಶರ್ಮಾ, ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿದಿದ್ದಾರೆ.

1 / 5
ಟಿ20 ಕ್ರಿಕೆಟ್​ನಲ್ಲಿ ಅಭಿಷೇಕ್ ಶರ್ಮಾ ಆರ್ಭಟ ಮುಂದುವರೆದಿದೆ. ಈ ಆರ್ಭಟದೊಂದಿಗೆ ಈ ಬಾರಿ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ದಾಖಲೆಯನ್ನೇ ಉಡೀಸ್ ಮಾಡಿದ್ದಾರೆ. ಅದು ಸಹ ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. (PC: BCCI)

ಟಿ20 ಕ್ರಿಕೆಟ್​ನಲ್ಲಿ ಅಭಿಷೇಕ್ ಶರ್ಮಾ ಆರ್ಭಟ ಮುಂದುವರೆದಿದೆ. ಈ ಆರ್ಭಟದೊಂದಿಗೆ ಈ ಬಾರಿ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ದಾಖಲೆಯನ್ನೇ ಉಡೀಸ್ ಮಾಡಿದ್ದಾರೆ. ಅದು ಸಹ ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. (PC: BCCI)

2 / 5

ಹೌದು, ನ್ಯೂಝಿಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಬಾರಿಸಿದ ಭರ್ಜರಿ ಸೆಂಚುರಿಯೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. (PC: BCCI)

3 / 5

ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಟಿ20 ಕ್ರಿಕೆಟ್​ನಲ್ಲಿ 413 ಇನಿಂಗ್ಸ್​ ಆಡಿರುವ ಕಿಂಗ್ ಕೊಹ್ಲಿ 10 ಶತಕ ಸಿಡಿಸಿದ್ದಾರೆ. ಈ ಮೂಲಕ ಚುಟುಕು ಮಾದರಿಯಲ್ಲಿ ಅತ್ಯಧಿಕ ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದರು. (PC: BCCI)

4 / 5

ಇದೀಗ ಈ ದಾಖಲೆಯನ್ನು ಅಭಿಷೇಕ್ ಶರ್ಮಾ ಅಳಿಸಿ ಹಾಕಿದ್ದಾರೆ. ಚುಟುಕು ಕ್ರಿಕೆಟ್​ನಲ್ಲಿ ಈವರೆಗೆ ಕೇವಲ 215 ಇನಿಂಗ್ಸ್ ಆಡಿರುವ ಅಭಿಷೇಕ್ ಶರ್ಮಾ ಒಟ್ಟು 11 ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಶತಕ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: BCCI)

5 / 5

ಇನ್ನು ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಶತಕ ಸಿಡಿಸಿದ ವಿಶ್ವ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಚುಟುಕು ಕ್ರಿಕೆಟ್​​ನಲ್ಲಿ 455  ಇನಿಂಗ್ಸ್ ಆಡಿರುವ ಗೇಲ್ ಒಟ್ಟು 22 ಶತಕ ಬಾರಿಸಿದ್ದಾರೆ. ಈ ಮೂಲಕ ಟಿ20 ಇತಿಹಾಸದಲ್ಲೇ ಅತೀ ಹೆಚ್ಚು ಸೆಂಚುರಿ ಸಿಡಿಸಿದ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಇದೀಗ 215 ಇನಿಂಗ್ಸ್​ಗಳಲ್ಲೇ 11 ಶತಕ ಸಿಡಿಸಿರುವ ಅಭಿಷೇಕ್ ಮುಂದೊಂದು ದಿನ ಕ್ರಿಸ್ ಗೇಲ್ ವಿಶ್ವ ದಾಖಲೆಯನ್ನೇ ಉಡೀಸ್ ಮಾಡಿದರೂ ಅಚ್ಚರಿಪಡಬೇಕಿಲ್ಲ. (PC: Gettyimages)

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us