AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Sharma: ಗುರುವಿನ ದಾಖಲೆಯನ್ನೇ ಮುರಿದ ಶಿಷ್ಯ

Abhishek Sharma - Yuvraj Singh: ಅಭಿಷೇಕ್ ಶರ್ಮಾ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಗರಡಿ ಹುಡುಗ. ಪಂಜಾಬ್ ಮೂಲದ ಅಭಿಷೇಕ್​ಗೆ ಯುವಿ ವಿಶೇಷ ತರಬೇತಿ ನೀಡಿದ್ದರು. ಅಲ್ಲದೆ ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನದೊಂದಿಗೆ ಮಿಂಚಿದ್ದ ಅಭಿಷೇಕ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಯುವರಾಜ್ ಸಿಂಗ್ ಅವರಿಗೆ ಧನ್ಯವಾದ ಅರ್ಪಿಸಿದ್ದರು. ಇದೀಗ ತನ್ನ ಗುರುವಿನ ದಾಖಲೆಯನ್ನೇ ಮುರಿದು ಅಭಿಷೇಕ್ ಎಲ್ಲರ ಗಮನ ಸೆಳೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 08, 2024 | 8:31 AM

Share
ಹರಾರೆಯಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ಭರ್ಜರಿ ಶತಕ ಸಿಡಿಸಿ ಹಲವು ದಾಖಲೆ ಬರೆದಿದ್ದಾರೆ. ಈ ದಾಖಲೆಗಳ ನಡುವೆ ಯುವರಾಜ್ ಸಿಂಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಅಭಿಷೇಕ್ ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 6
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಹೊಡಿಬಡಿ ಆಟಕ್ಕೆ ಒತ್ತು ನೀಡಿದ್ದ ಯುವ ಎಡಗೈ ದಾಂಡಿಗ ಝಿಂಬಾಬ್ವೆ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 46 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಸ್ಪೋಟಕ ಶತಕ ಮೂಡಿಬಂತು.

2 / 6
ವಿಶೇಷ ಎಂದರೆ ಅಭಿಷೇಕ್ ಶರ್ಮಾ ತಮ್ಮ 100 ರನ್​ಗಳಲ್ಲಿ 65 ರನ್​ ಸಿಡಿಸಿರುವುದು ಸ್ಪಿನ್ನರ್​ಗಳ ವಿರುದ್ಧ. ಅಂದರೆ ಸ್ಪಿನ್ ಬೌಲರ್​ಗಳನ್ನೇ ಟಾರ್ಗೆಟ್ ಮಾಡಿದ್ದ ಅಭಿಷೇಕ್ 28 ಎಸೆತಗಳಲ್ಲಿ 65 ರನ್​ ಕಲೆಹಾಕಿದ್ದರು. ಈ ಮೂಲಕ ಯುವರಾಜ್ ಸಿಂಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು.

3 / 6
ಇದಕ್ಕೂ ಮುನ್ನ ಟಿ20 ಇನಿಂಗ್ಸ್​ನಲ್ಲಿ ಸ್ಪಿನ್ನರ್​ಗಳ ವಿರುದ್ಧ ಅತ್ಯಧಿಕ ರನ್ ಬಾರಿಸಿದ ದಾಖಲೆ ಯುವರಾಜ್ ಸಿಂಗ್ ಹೆಸರಿನಲ್ಲಿತ್ತು. 2012 ರಲ್ಲಿ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಸ್ಪಿನ್ನರ್​ಗಳ ವಿರುದ್ಧ ಯುವರಾಜ್ ಸಿಂಗ್ 57 ರನ್ ಸಿಡಿಸಿ ಈ ವಿಶೇಷ ದಾಖಲೆ ನಿರ್ಮಿಸಿದ್ದರು.

4 / 6
ಇದೀಗ 12 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ ಅಭಿಷೇಕ್ ಶರ್ಮಾ ಯಶಸ್ವಿಯಾಗಿದ್ದಾರೆ. ಅದು ಕೂಡ ತಮ್ಮ ಗುರು ಯುವರಾಜ್ ಸಿಂಗ್ ಅವರ ದಾಖಲೆಯನ್ನೇ ಮುರಿಯುವ ಮೂಲಕ ಎಂಬುದು ವಿಶೇಷ.

5 / 6
ಇನ್ನು ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಬ್ಯಾಕ್ ಟು ಬ್ಯಾಕ್ ಮೂರು ಸಿಕ್ಸ್ ಸಿಡಿಸಿ ಶತಕ ಪೂರೈಸಿದ್ದರು. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲಿ 82 ರನ್​ಗಳ ಬಳಿಕ ಹ್ಯಾಟ್ರಿಕ್ ಸಿಕ್ಸ್​ ಸಿಡಿಸಿ ಶತಕ ಪೂರೈಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

6 / 6
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ

ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ