AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಶರ್ಮಾ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

Abhishek Sharma's World Record: ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 238 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ 20 ಓವರ್‌ಗಳಲ್ಲಿ 190 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಷೇಕ್ ಶರ್ಮಾ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 22, 2026 | 7:32 AM

Share
ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ಅಭಿಷೇಕ್ ಶರ್ಮಾ (Abhishek Sharma) ಆರ್ಭಟಿಸಿದ್ದಾರೆ. ಈ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್ ಆಗಿದೆ. ಹೀಗೆ ಉಡೀಸ್ ಆಗಿರುವುದು ಕೆರಿಬಿಯನ್ ದೈತ್ಯ ಆ್ಯಂಡ್ರೆ ರಸೆಲ್ ಬರೆದಿಟ್ಟಿದ್ದ ವಿಶ್ವ ದಾಖಲೆ ಎಂಬುದು ವಿಶೇಷ.

1 / 5
ನಾಗಪುರದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ೨೦ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸ್ಫೋಟಕ ಬ್ಯಾಟಿಂಗ್‌ನೊಂದಿಗೆ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಅಲ್ಲದೆ ಕೇವಲ 35 ಎಸೆತಗಳಲ್ಲಿ 8 ಸಿಕ್ಸ್, 5 ಫೋರ್ ಗಳೊಂದಿಗೆ 84 ರನ್ ಚಚ್ಚಿದ್ದರು.

2 / 5
ಈ 84 ರನ್ ಗಳೊಂದಿಗೆ ಅಭಿಷೇಕ್ ಶರ್ಮಾ ಟಿ೨೦ ಕ್ರಿಕೆಟ್‌ನಲ್ಲಿ 5000 ರನ್ ಪೂರೈಸಿದ್ದಾರೆ. ಅದು ಕೂಡ ಅತೀ ವೇಗವಾಗಿ. ಅಂದರೆ ಟಿ೨೦ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಡಿಮೆ ಎಸೆತಗಳಲ್ಲಿ 5 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆ ಅಭಿಷೇಕ್ ಶರ್ಮಾ ಪಾಲಾಗಿದೆ.

3 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ವೆಸ್ಟ್ ಇಂಡೀಸ್‌ನ ಆ್ಯಂಡ್ರೆ ರಸೆಲ್ ಹೆಸರಿನಲ್ಲಿತ್ತು. ರಸೆಲ್ ಕೇವಲ 2942 ಎಸೆತಗಳಲ್ಲಿ 5000 ರನ್ ಪೂರೈಸಿದ್ದರು. ಈ ಮೂಲಕ 3 ಸಾವಿರಕ್ಕಿಂತ ಕಡಿಮೆ ಎಸೆತಗಳಲ್ಲಿ 5 ರನ್ ಪೂರೈಸಿದ ವಿಶ್ವದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದರು.

4 / 5
ಇದೀಗ ಈ ದಾಖಲೆಯನ್ನು ಅಭಿಷೇಕ್ ಶರ್ಮಾ ಧೂಳೀಪಟ ಮಾಡಿದ್ದಾರೆ. ಅಭಿ ಕೇವಲ 2898 ಎಸೆತಗಳಲ್ಲಿ 5000 ರನ್ ಪೂರೈಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟಿ೨೦ ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ 5 ರನ್ ಪೂರೈಸಿದ ವಿಶ್ವ ದಾಖಲೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

5 / 5