
ಚುಟುಕು ಕ್ರಿಕೆಟ್ನಲ್ಲಿ ಅಭಿಷೇಕ್ ಶರ್ಮಾ (Abhishek Sharma) ಆರ್ಭಟ ಮುಂದುವರೆದಿದೆ. ಅದು ಕೂಡ ಸಿಡಿಲಬ್ಬರದೊಂದಿಗೆ. ಹೀಗೆ ಅಬ್ಬರಿಸುವ ಮೂಲಕ ಅಭಿಷೇಕ್ ಶರ್ಮಾ ಈ ವರ್ಷ ಟಿ20 ಕ್ರಿಕೆಟ್ನಲ್ಲಿ ನೂರಕ್ಕೂ ಅಧಿಕ ಸಿಕ್ಸ್ ಸಿಡಿಸಿದ್ದಾರೆ. ಇದರಲ್ಲಿ 50 ಕ್ಕಿಂತ ಹೆಚ್ಚು ಸಿಕ್ಸ್ ಮೂಡಿಬಂದಿರುವುದು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಎಂಬುದು ವಿಶೇಷ.

ಸೌತ್ ಆಫ್ರಿಕಾ ವಿರುದ್ಧದ ಮೂರು ಟಿ20 ಪಂದ್ಯಗಳಲ್ಲಿ ಅಭಿಷೇಕ್ ಶರ್ಮಾ ಬಾರಿಸಿದ ಒಟ್ಟು ಸಿಕ್ಸರ್ಗಳ ಸಂಖ್ಯೆ 6 ಸಿಕ್ಸ್ ಸಿಡಿಸಿದ್ದಾರೆ. ಈ ಆರು ಸಿಕ್ಸರ್ಗಳೊಂದಿಗೆ ಅಭಿ ಈ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 50 ಸಿಕ್ಸ್ಗಳನ್ನು ಪೂರೈಸಿದ್ದಾರೆ. ಈ ಮೂಲಕ ಒಂದೇ ವರ್ಷದೊಳಗೆ ಸಿಕ್ಸರ್ಗಳ ಅರ್ಧಶತಕ ಪೂರೈಸಿದ ವಿಶ್ವದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೀಯಾದ 30 ವರ್ಷದ ಕರನ್ಬೀರ್ ಸಿಂಗ್ ಹೆಸರಿನಲ್ಲಿತ್ತು. 2025 ರಲ್ಲಿ 32 ಪಂದ್ಯಗಳನ್ನಾಡಿರುವ ಕರನ್ಬೀರ್ ಸಿಂಗ್ 50 ಕ್ಕಿಂತ ಹೆಚ್ಚು ಸಿಕ್ಸ್ ಸಿಡಿಸಿ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಅಭಿಷೇಕ್ ಶರ್ಮಾ ಅಳಿಸಿ ಹಾಕಿದ್ದಾರೆ.

ಈ ವರ್ಷ 20 ಟಿ20 ಪಂದ್ಯಗಳನ್ನಾಡಿರುವ 25 ವರ್ಷದ ಅಭಿಷೇಕ್ ಶರ್ಮಾ ಒಟ್ಟು 53 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಒಂದು ಕ್ಯಾಲೆಂಡರ್ ವರ್ಷದೊಳಗೆ ಸಿಕ್ಸರ್ಗಳ ಅರ್ಧಶತಕ ಪೂರೈಸಿದ ವಿಶ್ವದ ಅತ್ಯಂತ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

ಹಾಗೆಯೇ ಒಂದೇ ವರ್ಷದೊಳಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 50 ಕ್ಕಿಂತ ಹೆಚ್ಚು ಸಿಕ್ಸ್ ಸಿಡಿಸಿದ ಭಾರತದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ 2022 ರಲ್ಲಿ ಸೂರ್ಯಕುಮಾರ್ ಯಾದವ್ 68 ಸಿಕ್ಸ್ ಬಾರಿಸಿದ್ದರು. ಇದೀಗ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಅಭಿಷೇಕ್ ಶರ್ಮಾ ಒಟ್ಟು 53 ಸಿಕ್ಸ್ ಸಿಡಿಸಿದ್ದಾರೆ.