AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

Abhishek Sharma Records: ಭಾರತ ಟಿ20 ತಂಡದ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಚುಟುಕು ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ ವೆಸ್ಟ್ ಇಂಡೀಸ್​ನ ದೈತ್ಯ ಆ್ಯಂಡ್ರೆ ರೆಸೆಲ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದು ಎಂಬುದು ವಿಶೇಷ. ಅಂದರೆ 2025 ರಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಅಭಿಷೇಕ್ ಶರ್ಮಾ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 31, 2025 | 8:01 AM

Share
ಅಭಿಷೇಕ್ ಶರ್ಮಾ (Abhishek Sharma) ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಅತ್ಯುತ್ತಮ ಸ್ಟ್ರೈಕ್ ರೇಟ್​ನೊಂದಿಗೆ. ಈ ಸ್ಟ್ರೈಕ್​ ರೇಟ್​ನೊಂದಿಗೆ ಅಭಿ ಸ್ಫೋಟಕ ದಾಂಡಿಗ ಆ್ಯಂಡ್ರೆ ರಸೆಲ್ ಅವರ ವರ್ಲ್ಡ್​ ರೆಕಾರ್ಡ್ ಅನ್ನೇ ಅಳಿಸಿ ಹಾಕಿದ್ದಾರೆ.

1 / 5
ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದು ವರ್ಷದಲ್ಲಿ 200ರ ಸ್ಟ್ರೈಕ್​​ ರೇಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ಈವರೆಗೆ ಯಾವುದೇ ಬ್ಯಾಟರ್ 200ರ ಸ್ಟ್ರೈಕ್​ ರೇಟ್​ನಲ್ಲಿ ವರ್ಷಾಂತ್ಯಗೊಳಿಸಿರಲಿಲ್ಲ.

2 / 5
2024 ರಲ್ಲಿ ವೆಸ್ಟ್ ಇಂಡೀಸ್​ನ ಸ್ಫೋಟಕ ದಾಂಡಿಗ ಆ್ಯಂಡ್ರೆ ರಸೆಲ್ 185.34 ಸ್ಟ್ರೈಕ್ ರೇಟ್​ನಲ್ಲಿ 1074 ರನ್ ಕಲೆಹಾಕಿದ್ದರು. ಈ ಮೂಲಕ ವರ್ಷವೊಂದರಲ್ಲಿ ಅತ್ಯಧಿಕ ಸ್ಟ್ರೈಕ್ ರೇಟ್​ನಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 5
ಈ ವಿಶ್ವ ದಾಖಲೆಯನ್ನು ಅಭಿಷೇಕ್ ಶರ್ಮಾ ಉಡೀಸ್ ಮಾಡಿದ್ದಾರೆ. 2025 ರಲ್ಲಿ ಅಭಿಷೇಕ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಒಟ್ಟು 1602 ರನ್ ಕಲೆಹಾಕಿದ್ದಾರೆ. ಅದು ಕೂಡ 202.01 ಸ್ಟ್ರೈಕ್ ರೇಟ್​ನಲ್ಲಿ. ಈ ಮೂಲಕ ಟಿ20 ಇತಿಹಾಸದಲ್ಲೇ ಒಂದೇ ವರ್ಷದೊಳಗೆ 200+ ಸ್ಟ್ರೈಕ್ ರೇಟ್​ನಲ್ಲಿ 1500+ ರನ್​ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಅಷ್ಟೇ ಅಲ್ಲದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 190+ ಸ್ಟ್ರೈಕ್ ರೇಟ್​ನಲ್ಲಿ 500 ಕ್ಕೂ ಅಧಿಕ ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ವರ್ಷ ಅಭಿಷೇಕ್ ಶರ್ಮಾ ಟೀಮ್ ಇಂಡಿಯಾ ಪರ ಒಟ್ಟು 859 ರನ್ ಕಲೆಹಾಕಿದ್ದಾರೆ. ಅದು ಸಹ 193.46 ಸ್ಟ್ರೈಕ್ ರೇಟ್​ನಲ್ಲಿ. ಈ ಮೂಲಕ ಟಿ20 ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲೂ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು

3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್

4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ

ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ

ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ

ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ

ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ

ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು

ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?

ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್