AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಶರ್ಮಾ ಅಬ್ಬರಕ್ಕೆ ಹೊಸ ವಿಶ್ವ ದಾಖಲೆ ಸೃಷ್ಟಿ

Abhishek Sharma Records: ಏಷ್ಯಾಕಪ್ ಟೂರ್ನಿಯಲ್ಲಿ ಸತತ ಮೂರು ಅರ್ಧಶತಕ ಸಿಡಿಸುವ ಮೂಲಕ ಅಭಿಷೇಕ್ ಶರ್ಮಾ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದರಲ್ಲೂ ಕಳೆದ 7 ಇನಿಂಗ್ಸ್ ​ಗಳಲ್ಲೂ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಯುವ ದಾಂಡಿಗನ ಹೆಸರಿಗೆ ವಿಶೇಷ ವಿಶ್ವ ದಾಖಲೆಯೊಂದು ಸೇರ್ಪಡೆಯಾಗಿದೆ.

ಝಾಹಿರ್ ಯೂಸುಫ್
|

Updated on:Sep 27, 2025 | 8:26 AM

Share
ಟಿ20 ಕ್ರಿಕೆಟ್​ನಲ್ಲಿ ಯಂಗ್ ಗನ್ ಅಭಿಷೇಕ್ ಶರ್ಮಾ (Abhishek Sharma) ಆರ್ಭಟ ಮುಂದುವರೆದಿದೆ. ಈ ಆರ್ಭಟದೊಂದಿಗೆ ಯುವ ದಾಂಡಿಗ ವಿಶೇಷ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಅದು ಸಹ ಸತತ 30+ ರನ್​ ಕಲೆಹಾಕುವ ಮೂಲಕ ಎಂಬುದೇ ವಿಶೇಷ. ಅಂದರೆ ಕಳೆದ 7 ಪಂದ್ಯಗಳಲ್ಲೂ ಅಭಿಷೇಕ್ 30 ಕ್ಕಿಂತ ಕಡಿಮೆ ರನ್​ ಗಳಿಸಿಲ್ಲ.

1 / 6
ಏಷ್ಯಾಕಪ್​ ಟೂರ್ನಿಗೂ ಮುನ್ನ ಅಭಿಷೇಕ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ 137 ರನ್ ಬಾರಿಸಿ ಅಬ್ಬರಿಸಿದ್ದರು. ಈ ಭರ್ಜರಿ ಶತಕದ ಬಳಿಕ ಇದೀಗ ಏಷ್ಯಾಕಪ್​ನಲ್ಲಿ 30, 31, 38, 74, 75 ಹಾಗೂ 61 ರನ್​ಗಳನ್ನು ಕಲೆಹಾಕಿದ್ದಾರೆ. 

2 / 6
ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಸತತವಾಗಿ ಅತೀ ಹೆಚ್ಚು ಬಾರಿ 30+ ರನ್​ ಕಲೆಹಾಕಿದ ವಿಶ್ವದ ಮೊದಲ ಎಡಗೈ ದಾಂಡಿಗ ಹಾಗೂ ಅತ್ಯಂತ ಕಿರಿಯ ಬ್ಯಾಟರ್ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಏಷ್ಯಾಕಪ್ ಇತಿಹಾಸದಲ್ಲೇ 300+ ರನ್​ ಗಳಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

3 / 6
ಇದಕ್ಕೂ ಮುನ್ನ ಅಭಿಷೇಕ್ ಶರ್ಮಾ ಅತೀ ಕಡಿಮೆ ಇನಿಂಗ್ಸ್​ಗಳ ಮೂಲಕ 50 ಸಿಕ್ಸ್ ಪೂರೈಸಿದ ವಿಶ್ವ ದಾಖಲೆ ನಿರ್ಮಿಸಿದ್ದರು. ವೆಸ್ಟ್ ಇಂಡೀಸ್ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಎವಿನ್ ಲೂಯಿಸ್ (366 ಎಸೆತಗಳು) ಹೆಸರಿನಲ್ಲಿದ್ದ ಈ ದಾಖಲೆಯನ್ನು ಅಭಿಷೇಕ್ ಕೇವಲ 331 ಎಸೆತಗಳಲ್ಲಿ ಅಳಿಸಿ ಹಾಕಿದ್ದರು.

4 / 6
ಅಲ್ಲದೆ ಏಷ್ಯಾಕಪ್ ಟೂರ್ನಿಯೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ದಾಖಲೆಯನ್ನು ಕೂಡ ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಈ ಮೊದಲು ಈ ಭರ್ಜರಿ ದಾಖಲೆ ಶ್ರೀಲಂಕಾದ ಸನತ್ ಜಯಸೂರ್ಯ (14) ಹೆಸರಿನಲ್ಲಿತ್ತು. ಆದರೆ ಈ ಬಾರಿಯ ಟೂರ್ನಿಯಲ್ಲಿ ಅಭಿಷೇಕ್ ಶರ್ಮಾ 19 ಸಿಕ್ಸ್ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 6
ಒಟ್ಟಿನಲ್ಲಿ ಅಭಿಷೇಕ್ ಶರ್ಮಾ ಆರ್ಭಟದೊಂದಿಗೆ ಏಷ್ಯಾಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಸತತ 6 ಪಂದ್ಯಗಳನ್ನು ಗೆದ್ದು ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಸೆಪ್ಟೆಂಬರ್ 28 ರಂದು ನಡೆಯಲಿರುವ ಅಂತಿಮ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲೂ ಅಬ್ಬರಿಸುವ ಮೂಲಕ ಅಭಿಷೇಕ್ ಭಾರತ ತಂಡಕ್ಕೆ ಚಾಂಪಿಯನ್ ಪಟ್ಟ ತಂದುಕೊಡುವ ವಿಶ್ವಾಸದಲ್ಲಿದ್ದಾರೆ.

6 / 6

Published On - 8:26 am, Sat, 27 September 25