AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಟಿಂಗ್​ನಲ್ಲಿ ಅಲ್ಲ, ಬೌಲಿಂಗ್​ನಲ್ಲಿ ಭರ್ಜರಿ ದಾಖಲೆ ಬರೆದ ಅಭಿಷೇಕ್ ಶರ್ಮಾ

IND vs ZIM: ಝಿಂಬಾಬ್ವೆ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದೆ. ಹರಾರೆಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ 219 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಝಿಂಬಾಬ್ವೆ 17.5 ಓವರ್​ಗಳಲ್ಲಿ 129 ರನ್​ಗಳಿಸಿ ಆಲೌಟ್ ಆಗಿ 90 ರನ್​ಗಳಿಂದ ಸೋಲೊಪ್ಪಿಕೊಂಡಿತು. ಹೀಗೆ ಅಲ್ಪ ಮೊತ್ತಕ್ಕೆ ಆಲೌಟ್ ಆಗಲು ಕಾರಣ ಅಭಿಷೇಕ್ ಶರ್ಮಾ.

ಝಾಹಿರ್ ಯೂಸುಫ್
|

Updated on: Jul 26, 2026 | 9:39 AM

Share
ಝಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯದ ಮೂಲಕ ಭಾರತ ತಂಡದ ಯುವ ಆಟಗಾರ ಅಭಿಷೇಕ್ ಶರ್ಮಾ ಅಪರೂಪದ  ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಯಾವುದೇ ಆರಂಭಿಕ ದಾಂಡಿಗನಿಗೆ ಸಾಧ್ಯವಾಗದ ಸಾಧನೆ ಮಾಡುವ ಮೂಲಕ ಎಂಬುದು ವಿಶೇಷ. (PC: Getty Images)

1 / 5
ಹರಾರೆಯಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ 2.5 ಓವರ್ ಎಸೆದಿದ್ದ ಅಭಿಷೇಕ್ ಶರ್ಮಾ 17 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಈ ಮೂಲಕ ಅಂತರರಾಷ್ಟ್ರೀಯ ಪುರುಷರ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ 3 ವಿಕೆಟ್ ಪಡೆದ ಭಾರತದ ಮೊದಲ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. (PC: Getty Images)

2 / 5
ಅಭಿಷೇಕ್ ಶರ್ಮಾ ಅವರ ಈ ಸಾಧನೆ ಎಷ್ಟು ಅಪರೂಪದ್ದೆಂದರೆ, ಭಾರತದ ಟಿ20ಐ ಇತಿಹಾಸದಲ್ಲಿ ಓಪನರ್ ಆಗಿ ಕಣಕ್ಕಿಳಿದು ಕನಿಷ್ಠ 2 ವಿಕೆಟ್ ಕಬಳಿಸಿದ ಮತ್ತೊಬ್ಬ ಬ್ಯಾಟರ್ ಇಲ್ಲ. ಹೀಗಾಗಿಯೇ ಯುವ ದಾಂಡಿಗನ ಈ ದಾಖಲೆ ಮಹತ್ವ ಪಡೆದುಕೊಂಡಿದೆ. (PC: Getty Images)

3 / 5
ಇನ್ನು ಭಾರತದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದು ಅಂತರರಾಷ್ಟ್ರೀಯ ಪಂದ್ಯವೊಂದರಲ್ಲಿ 3 ವಿಕೆಟ್ ಪಡೆದ ಕೊನೆಯ ಆಟಗಾರ ಎಂದರೆ ವಿರೇಂದ್ರ ಸೆಹ್ವಾಗ್. ಅವರು 2012 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದರು. ಇದಾದ ಬಳಿಕ ಭಾರತದ ಯಾವುದೇ ಆರಂಭಿಕ ದಾಂಡಿಗ ಅಂತಾರಾಷ್ಟ್ರೀಯ ಪಂದ್ಯವೊಂದರಲ್ಲಿ 3 ವಿಕೆಟ್ ಪಡೆದಿರಲಿಲ್ಲ. (PC: Getty Images)

4 / 5
ಇದೀಗ ಬರೋಬ್ಬರಿ 14 ವರ್ಷಗಳ ಬಳಿಕ ಟೀಮ್ ಇಂಡಿಯಾ ದಾಂಡಿಗ ಅಭಿಷೇಕ್ ಶರ್ಮಾ ಟಿ20 ಪಂದ್ಯದಲ್ಲಿ 3 ವಿಕೆಟ್ ಎಗರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಭಾರತದ ಪರ ಮೂರು ವಿಕೆಟ್ ಪಡೆದ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: Getty Images)

5 / 5
Follow Us
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?

ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು

ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್

ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ

ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ

ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ

ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ

ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!

10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ