ಬ್ಯಾಟಿಂಗ್ನಲ್ಲಿ ಅಲ್ಲ, ಬೌಲಿಂಗ್ನಲ್ಲಿ ಭರ್ಜರಿ ದಾಖಲೆ ಬರೆದ ಅಭಿಷೇಕ್ ಶರ್ಮಾ
IND vs ZIM: ಝಿಂಬಾಬ್ವೆ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದೆ. ಹರಾರೆಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್ಗಳಲ್ಲಿ 219 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಝಿಂಬಾಬ್ವೆ 17.5 ಓವರ್ಗಳಲ್ಲಿ 129 ರನ್ಗಳಿಸಿ ಆಲೌಟ್ ಆಗಿ 90 ರನ್ಗಳಿಂದ ಸೋಲೊಪ್ಪಿಕೊಂಡಿತು. ಹೀಗೆ ಅಲ್ಪ ಮೊತ್ತಕ್ಕೆ ಆಲೌಟ್ ಆಗಲು ಕಾರಣ ಅಭಿಷೇಕ್ ಶರ್ಮಾ.
Updated on: Jul 26, 2026 | 9:39 AM

ಝಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯದ ಮೂಲಕ ಭಾರತ ತಂಡದ ಯುವ ಆಟಗಾರ ಅಭಿಷೇಕ್ ಶರ್ಮಾ ಅಪರೂಪದ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಯಾವುದೇ ಆರಂಭಿಕ ದಾಂಡಿಗನಿಗೆ ಸಾಧ್ಯವಾಗದ ಸಾಧನೆ ಮಾಡುವ ಮೂಲಕ ಎಂಬುದು ವಿಶೇಷ. (PC: Getty Images)

ಹರಾರೆಯಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ 2.5 ಓವರ್ ಎಸೆದಿದ್ದ ಅಭಿಷೇಕ್ ಶರ್ಮಾ 17 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಈ ಮೂಲಕ ಅಂತರರಾಷ್ಟ್ರೀಯ ಪುರುಷರ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ 3 ವಿಕೆಟ್ ಪಡೆದ ಭಾರತದ ಮೊದಲ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. (PC: Getty Images)

ಅಭಿಷೇಕ್ ಶರ್ಮಾ ಅವರ ಈ ಸಾಧನೆ ಎಷ್ಟು ಅಪರೂಪದ್ದೆಂದರೆ, ಭಾರತದ ಟಿ20ಐ ಇತಿಹಾಸದಲ್ಲಿ ಓಪನರ್ ಆಗಿ ಕಣಕ್ಕಿಳಿದು ಕನಿಷ್ಠ 2 ವಿಕೆಟ್ ಕಬಳಿಸಿದ ಮತ್ತೊಬ್ಬ ಬ್ಯಾಟರ್ ಇಲ್ಲ. ಹೀಗಾಗಿಯೇ ಯುವ ದಾಂಡಿಗನ ಈ ದಾಖಲೆ ಮಹತ್ವ ಪಡೆದುಕೊಂಡಿದೆ. (PC: Getty Images)

ಇನ್ನು ಭಾರತದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದು ಅಂತರರಾಷ್ಟ್ರೀಯ ಪಂದ್ಯವೊಂದರಲ್ಲಿ 3 ವಿಕೆಟ್ ಪಡೆದ ಕೊನೆಯ ಆಟಗಾರ ಎಂದರೆ ವಿರೇಂದ್ರ ಸೆಹ್ವಾಗ್. ಅವರು 2012 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದರು. ಇದಾದ ಬಳಿಕ ಭಾರತದ ಯಾವುದೇ ಆರಂಭಿಕ ದಾಂಡಿಗ ಅಂತಾರಾಷ್ಟ್ರೀಯ ಪಂದ್ಯವೊಂದರಲ್ಲಿ 3 ವಿಕೆಟ್ ಪಡೆದಿರಲಿಲ್ಲ. (PC: Getty Images)

ಇದೀಗ ಬರೋಬ್ಬರಿ 14 ವರ್ಷಗಳ ಬಳಿಕ ಟೀಮ್ ಇಂಡಿಯಾ ದಾಂಡಿಗ ಅಭಿಷೇಕ್ ಶರ್ಮಾ ಟಿ20 ಪಂದ್ಯದಲ್ಲಿ 3 ವಿಕೆಟ್ ಎಗರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಭಾರತದ ಪರ ಮೂರು ವಿಕೆಟ್ ಪಡೆದ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: Getty Images)




