ಟೀಮ್ ಇಂಡಿಯಾಗೆ ಬಿಗ್ ಶಾಕ್: ಮುಂದಿನ ಪಂದ್ಯಕ್ಕೆ ಸ್ಫೋಟಕ ದಾಂಡಿಗ ಡೌಟ್
T20 World Cup 2026: ಟಿ20 ವಿಶ್ವಕಪ್ 2026ರ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಜೋಡಿ ಬದಲಾಗುವ ಸಾಧ್ಯತೆಯಿದೆ. ಅಂದರೆ ಸಂಜು ಸ್ಯಾಮ್ಸನ್ಗೆ ಮತ್ತೆ ಅವಕಾಶ ಸಿಗಬಹುದು.
ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್ಲಿ 29 ರನ್ಗಳ ಭರ್ಜರಿ ಜಯ ಸಾಧಿಸಿ ಶುಭಾರಂಭ ಮಾಡಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯಕ್ಕೆ ಸಜ್ಜಾಗುತ್ತಿದೆ. ಫೆಬ್ರವರಿ 12 ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಅಲಭ್ಯರಾಗುವ ಸಾಧ್ಯತೆಯಿದೆ.
1 / 5
ಹೌದು, ಟೀಮ್ ಇಂಡಿಯಾದ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಯುಎಸ್ಎ ವಿರುದ್ಧದ ಪಂದ್ಯದ ವೇಳೆ ಆರೋಗ್ಯ ಸಮಸ್ಯೆಗೆ ಈಡಾಗಿದ್ದ ಅಭಿಷೇಕ್ ಶರ್ಮಾ ಮೊದಲ ಮ್ಯಾಚ್ನಲ್ಲಿ ಫೀಲ್ಡಿಂಗ್ ಮಾಡಿರಲಿಲ್ಲ.
2 / 5
ಇದಾಗ್ಯೂ ಅವರು ನಮೀಬಿಯ ವಿರುದ್ಧದ ಪಂದ್ಯದ ವೇಳೆಗೆ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೀಗ ಅಭಿಷೇಕ್ ಶರ್ಮಾ ಅವರ ಹೊಟ್ಟೆ ನೋವಿನ ಸಮಸ್ಯೆ ಉಲ್ಭಣಗೊಂಡಿದೆ ಎಂದು ವರದಿಯಾಗಿದೆ. ಇದೇ ಕಾರಣದಿಂದಾಗಿ ಅವರು ಸೋಮವಾರ ಮತ್ತು ಮಂಗಳವಾರ ನಡೆದ ಅಭ್ಯಾಸಕ್ಕೆ ಗೈರಾಗಿದ್ದರು.
3 / 5
ಇನ್ನು ನಮೀಬಿಯ ವಿರುದ್ಧದ ಪಂದ್ಯಕ್ಕೆ ಕೇವಲ ಒಂದು ದಿನ ಮಾತ್ರ ಉಳಿದಿದ್ದು, ಅದಕ್ಕೂ ಮುನ್ನ ಅವರು ಗುಣಮುಖರಾಗುವ ಸಾಧ್ಯತೆ ಕೂಡ ಕ್ಷೀಣ ಎನ್ನಲಾಗಿದೆ. ಹೀಗಾಗಿ ಟೀಮ್ ಇಂಡಿಯಾ ಪರ ಮುಂದಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ನಮೀಬಿಯಾ ವಿರುದ್ಧ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.