ಟೀಮ್ ಇಂಡಿಯಾಗೆ ಬಿಗ್ ಶಾಕ್: ಮುಂದಿನ ಪಂದ್ಯಕ್ಕೆ ಸ್ಫೋಟಕ ದಾಂಡಿಗ ಡೌಟ್

Updated on: Feb 11, 2026 | 8:01 AM

T20 World Cup 2026: ಟಿ20 ವಿಶ್ವಕಪ್ 2026ರ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಜೋಡಿ ಬದಲಾಗುವ ಸಾಧ್ಯತೆಯಿದೆ. ಅಂದರೆ ಸಂಜು ಸ್ಯಾಮ್ಸನ್​​ಗೆ ಮತ್ತೆ ಅವಕಾಶ ಸಿಗಬಹುದು.

1 / 5
ಯುಎಸ್​ಎ ವಿರುದ್ಧದ ಮೊದಲ ಪಂದ್ಯದಲ್ಲಿ 29 ರನ್​ಗಳ ಭರ್ಜರಿ ಜಯ ಸಾಧಿಸಿ ಶುಭಾರಂಭ ಮಾಡಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯಕ್ಕೆ ಸಜ್ಜಾಗುತ್ತಿದೆ. ಫೆಬ್ರವರಿ 12 ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಅಲಭ್ಯರಾಗುವ ಸಾಧ್ಯತೆಯಿದೆ.

2 / 5
ಹೌದು, ಟೀಮ್ ಇಂಡಿಯಾದ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಯುಎಸ್​ಎ ವಿರುದ್ಧದ ಪಂದ್ಯದ ವೇಳೆ ಆರೋಗ್ಯ ಸಮಸ್ಯೆಗೆ ಈಡಾಗಿದ್ದ ಅಭಿಷೇಕ್ ಶರ್ಮಾ ಮೊದಲ ಮ್ಯಾಚ್​ನಲ್ಲಿ ಫೀಲ್ಡಿಂಗ್ ಮಾಡಿರಲಿಲ್ಲ. 

3 / 5
ಇದಾಗ್ಯೂ ಅವರು ನಮೀಬಿಯ ವಿರುದ್ಧದ ಪಂದ್ಯದ ವೇಳೆಗೆ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೀಗ ಅಭಿಷೇಕ್ ಶರ್ಮಾ ಅವರ ಹೊಟ್ಟೆ ನೋವಿನ ಸಮಸ್ಯೆ ಉಲ್ಭಣಗೊಂಡಿದೆ ಎಂದು ವರದಿಯಾಗಿದೆ. ಇದೇ ಕಾರಣದಿಂದಾಗಿ ಅವರು ಸೋಮವಾರ ಮತ್ತು ಮಂಗಳವಾರ ನಡೆದ ಅಭ್ಯಾಸಕ್ಕೆ ಗೈರಾಗಿದ್ದರು.

4 / 5
ಇನ್ನು ನಮೀಬಿಯ ವಿರುದ್ಧದ ಪಂದ್ಯಕ್ಕೆ ಕೇವಲ ಒಂದು ದಿನ ಮಾತ್ರ ಉಳಿದಿದ್ದು, ಅದಕ್ಕೂ ಮುನ್ನ ಅವರು ಗುಣಮುಖರಾಗುವ ಸಾಧ್ಯತೆ ಕೂಡ ಕ್ಷೀಣ ಎನ್ನಲಾಗಿದೆ. ಹೀಗಾಗಿ ಟೀಮ್ ಇಂಡಿಯಾ ಪರ ಮುಂದಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ನಮೀಬಿಯಾ ವಿರುದ್ಧ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

5 / 5
ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Published On - 8:00 am, Wed, 11 February 26

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us