IND vs SA: ಕಿಂಗ್ ಕೊಹ್ಲಿಯ 9 ವರ್ಷಗಳ ಹಳೆಯ ದಾಖಲೆ ಮೇಲೆ ಅಭಿಷೇಕ್ ಕಣ್ಣು

Updated on: Dec 13, 2025 | 8:03 PM

Abhishek Sharma record: ಭಾರತ-ದಕ್ಷಿಣ ಆಫ್ರಿಕಾ 3ನೇ ಟಿ20 ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದ್ದು, ಸರಣಿ 1-1ರಲ್ಲಿ ಸಮಬಲಗೊಂಡಿದೆ. ಈ ಪಂದ್ಯ ಸರಣಿ ಮುನ್ನಡೆಗೆ ನಿರ್ಣಾಯಕ. ಟೀಂ ಇಂಡಿಯಾ ಬ್ಯಾಟಿಂಗ್ ಸುಧಾರಣೆ ಅಗತ್ಯವಿದೆ. ಅದರಲ್ಲೂ ಅಭಿಷೇಕ್ ಶರ್ಮಾ ಮಿಂಚಬೇಕಿದೆ. 82 ರನ್ ಗಳಿಸಿದರೆ, ವಿರಾಟ್ ಕೊಹ್ಲಿ ಅವರ 9 ವರ್ಷಗಳ ಹಳೆಯ ಟಿ20 ದಾಖಲೆಯನ್ನು ಮುರಿಯುವ ಅವಕಾಶವಿದೆ.

1 / 6
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಟಿ20 ಪಂದ್ಯ ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗ ನಡೆದಿರುವ ಮೊದಲೆರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿರುವುದರಿಂದ 3ನೇ ಪಂದ್ಯದ ಮೇಲೆ ನಿರೀಕ್ಷೆ ಹೆಚ್ಚಿದೆ. ಈ ಪಂದ್ಯವನ್ನು ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಟಿ20 ಪಂದ್ಯ ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗ ನಡೆದಿರುವ ಮೊದಲೆರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿರುವುದರಿಂದ 3ನೇ ಪಂದ್ಯದ ಮೇಲೆ ನಿರೀಕ್ಷೆ ಹೆಚ್ಚಿದೆ. ಈ ಪಂದ್ಯವನ್ನು ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

2 / 6

ಈ ಎರಡೂ ಪಂದ್ಯಗಳಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ವಿಭಾಗ ಸಪ್ಪೆ ಪ್ರದರ್ಶನ ನೀಡಿತು. ಹಾಗಾಗಿ ಮೂರನೇ ಪಂದ್ಯದಲ್ಲಿ ಬ್ಯಾಟಿಂಗ್ ವಿಭಾಗ ತನ್ನ ತಪ್ಪುಗಳನ್ನು ತಿದ್ದಿಕೊಂಡು ಕಣಕ್ಕಿಳಿಯಬೇಕಿದೆ. ಅದರಲ್ಲೂ ಭಾರತ ಟಿ20 ತಂಡದ ರನ್ ಮಷಿನ್ ಅಭಿಷೇಕ್ ಶರ್ಮಾ ಈ ಪಂದ್ಯದಲ್ಲಿ ಮಿಂಚಲೇಬೇಕಿದೆ. ಒಂದು ವೇಳೆ ಈ ಪಂದ್ಯದಲ್ಲಿ ಅಭಿಷೇಕ್ ಮಿಂಚಿದರೆ, ಕಿಂಗ್ ಕೊಹ್ಲಿಯ 9 ವರ್ಷಗಳ ಹಳೆಯ ದಾಖಲೆ ಧ್ವಂಸವಾಗಲಿದೆ.

3 / 6

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಅಭಿಷೇಕ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಮೊದಲ ಪಂದ್ಯದಲ್ಲಿ 17 ರನ್​ ಬಾರಿಸಿ ಔಟಾಗಿದ್ದ ಅಭಿಷೇಕ್, ತನ್ನ ತವರಿನಲ್ಲಿ ನಡೆದ ಎರಡನೇ ಪಂದ್ಯದಲ್ಲೂ ಕೇವಲ 17 ರನ್​ಗಳಿಗೆ ಔಟಾಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. ಹೀಗಾಗಿ ಮೂರನೇ ಪಂದ್ಯದಲ್ಲಿ ಅಭಿಷೇಕ್ ಅಬ್ಬರಿಸಲೇಬೇಕಿದೆ.

4 / 6

ಮೂರನೇ ಟಿ20 ಪಂದ್ಯದಲ್ಲಿ ಅಭಿಷೇಕ್ 82 ರನ್​ಗಳ ಇನ್ನಿಂಗ್ಸ್ ಆಡಿದರೆ, ಒಂಬತ್ತು ವರ್ಷಗಳ ಹಿಂದೆ ಅಂದರೆ 2016 ರಲ್ಲಿ ವಿರಾಟ್ ಕೊಹ್ಲಿ ನಿರ್ಮಿಸಿದ್ದ ಅದೊಂದು ದಾಖಲೆಯನ್ನು ಅಭಿಷೇಕ್ ಶರ್ಮಾ ಮುರಿಯಲಿದ್ದಾರೆ. ಅಂದರೆ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಳ್ಳುವ ಅವಕಾಶ ಅಭಿಷೇಕ್​ಗೆ ಇದೆ.

5 / 6

ವಾಸ್ತವವಾಗಿ 2016 ರಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಆಡಿದ 31 ಟಿ20 ಪಂದ್ಯಗಳಲ್ಲಿ 1,614 ರನ್ ಗಳಿಸುವ ಮೂಲಕ ಈ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದರು. ಪ್ರಸ್ತುತ ಕ್ಯಾಲೆಂಡರ್ ವರ್ಷದಲ್ಲಿ, ಅಭಿಷೇಕ್ ಶರ್ಮಾ ಆಡಿರುವ 39 ಟಿ20 ಪಂದ್ಯಗಳಲ್ಲಿ 1,533 ರನ್ ಗಳಿಸಿದ್ದಾರೆ.

6 / 6

ಈಗ, ಅಭಿಷೇಕ್ ಶರ್ಮಾಗೆ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿಯಲು ಕೇವಲ 82 ರನ್‌ಗಳ ಅಗತ್ಯವಿದೆ. ಅಭಿಷೇಕ್ ಈಗಾಗಲೇ ಈ ಪಟ್ಟಿಯಲ್ಲಿ ಸೂರ್ಯಕುಮಾರ್ ಯಾದವ್ (2022 ರಲ್ಲಿ 1503 ರನ್) ಅವರನ್ನು ಹಿಂದಿಕ್ಕಿದ್ದು, ಈಗ ಕೊಹ್ಲಿ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ.

Loading...
Unable to load recommendations.
Follow Us