AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಐರ್ಲೆಂಡ್ ವಿರುದ್ಧ ಅತಿ ವೇಗದ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ

Abhishek Sharma fastest T20 fifty: ಐರ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ 19 ಎಸೆತಗಳಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿ ದಾಖಲೆ ನಿರ್ಮಿಸಿದರು. ಐರ್ಲೆಂಡ್‌ನಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ನಿಂದ ಇದು ವೇಗದ ಟಿ20 ಅರ್ಧಶತಕ. 183 ರನ್‌ಗಳ ದೊಡ್ಡ ಗುರಿ ಬೆನ್ನತ್ತಿದ ಭಾರತಕ್ಕೆ ಸಂಜು ಸ್ಯಾಮ್ಸನ್, ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರಂತಹ ಪ್ರಮುಖ ಬ್ಯಾಟ್ಸ್‌ಮನ್‌ಗಳು ಬೇಗನೆ ಔಟಾದರೂ, ಅಭಿಷೇಕ್ ಏಕಾಂಗಿಯಾಗಿ ಹೋರಾಡಿ ತಂಡಕ್ಕೆ ಆಸರೆಯಾದರು.

ಪೃಥ್ವಿಶಂಕರ
|

Updated on: Jun 26, 2026 | 9:06 PM

Share
ಐರ್ಲೆಂಡ್‌ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಇದರೊಂದಿಗೆ, ಅಭಿಷೇಕ್ ಶರ್ಮಾ ಐರ್ಲೆಂಡ್‌ನಲ್ಲಿ ಅತಿ ವೇಗದ ಟಿ20 ಅರ್ಧಶತಕ ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ನಿರ್ಮಿಸಿದರು (PC-PTI).

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಐರ್ಲೆಂಡ್, ಭಾರತದ ವಿರುದ್ಧ 183 ರನ್​ಗಳ ಬೃಹತ್ ಗುರಿಯನ್ನು  ನಿಗದಿಪಡಿಸಿತು. ಆದಾಗ್ಯೂ ಈ ಗುರಿ ಬೆನ್ನಟ್ಟಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಅನುಭವಿ ಸಂಜು ಸ್ಯಾಮ್ಸನ್ ಕೇವಲ 5 ರನ್​ಗಳಿಗೆ ಔಟಾದರು. ಆ ಬಳಿಕ ಬಂದವರು ಕೂಡ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲಿಲ್ಲ (PC-PTI).

2 / 5
ಸಂಜು ಸ್ಯಾಮ್ಸನ್ ಬಳಿಕ ಬಂದ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರಂತಹ ಬ್ಯಾಟ್ಸ್‌ಮನ್‌ಗಳು ಕೂಡ ಹೆಚ್ಚು ಹೊತ್ತು ಕ್ರಿಸ್​ನಲ್ಲಿ ನಿಲ್ಲಲಿಲ್ಲ. ಆದರೆ ಸತತ ವಿಕೆಟ್​ಗಳ ಪತನದ ನಡುವೆಯೂ ಎಂದಿನಂತೆ ತಮ್ಮ ಬ್ಯಾಟಿಂಗ್‌ ಮುಂದುವರೆಸಿದ ಅಭಿಷೇಕ್ ಶರ್ಮಾ ಭರ್ಜರಿ ಅರ್ಧಶತಕವನ್ನು ಬಾರಿಸಿದರು. ತಮ್ಮ ಇನ್ನಿಂಗ್ಸ್‌ನಲ್ಲಿ ಎರಡು ಸಿಕ್ಸರ್‌ಗಳು ಮತ್ತು ಏಳು ಬೌಂಡರಿಗಳನ್ನು ಬಾರಿಸಿದ ಅಭಿಷೇಕ್​ಗೆ ಇದು 11 ನೇ ಅರ್ಧಶತಕವಾಗಿತ್ತು (PC-PTI).

3 / 5
ಅಭಿಷೇಕ್ ಶರ್ಮಾ ಮೊದಲ ಓವರ್‌ನಿಂದಲೇ ಐರಿಶ್ ಬೌಲರ್‌ಗಳ ಮೇಲೆ ಒತ್ತಡ ಹೇರಿದರು. ಎದುರಿಸಿದ ಎರಡನೇ ಎಸೆತದಲ್ಲಿ ಸಿಕ್ಸರ್ ಬಾರಿಸಿದ ಅಭಿಷೇಕ್, ಅದರ ನಂತರದ ಎಸೆತದಲ್ಲಿ ಬೌಂಡರಿ ಬಾರಿಸಿದರು. ಎರಡನೇ ಓವರ್‌ನಲ್ಲಿ, ಜೈ ಮುಂಧ್ರಾ ಎಸೆತದಲ್ಲಿ ಶರ್ಮಾ ಅದ್ಭುತ ಸಿಕ್ಸರ್ ಬಾರಿಸಿದರು (PC-PTI).

4 / 5
ಲಿಯಾಮ್ ಮೆಕಾರ್ಥಿ ಎಸೆದ ಓವರ್‌ನಲ್ಲಿ, ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಮಾಡಿ ಐದು ಎಸೆತಗಳಲ್ಲಿ ನಾಲ್ಕು ಬೌಂಡರಿಗಳನ್ನು ಬಾರಿಸಿದರು. ಆದಾಗ್ಯೂ, ಅರ್ಧಶತಕವನ್ನು ತಲುಪಿದ ಕೂಡಲೇ, ಅಭಿಷೇಕ್ ಶರ್ಮಾ 20 ಎಸೆತಗಳಲ್ಲಿ ಐವತ್ತು ರನ್ ಗಳಿಸಿ ವಿಕೆಟ್ ಕಳೆದುಕೊಂಡರು. ಅವರನ್ನು ಲಿಯಾಮ್ ಮೆಕಾರ್ಥಿ ಔಟ್ ಮಾಡಿದರು (PC-PTI).

5 / 5
Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ

ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ

‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ

ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ

ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ

ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ

ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ

ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ