
ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆಯೊಂದನ್ನು ಅಭಿಷೇಕ್ ಶರ್ಮಾ ನಿರ್ಮಿಸಿದ್ದಾರೆ. ಅದು ಕೂಡ ಒಂದೇ ಒಂದು ಡಾಟ್ ಬಾಲ್ ಇಲ್ಲದೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಒಂದೇ ಒಂದು ಎಸೆತವನ್ನೂ ಬಿಟ್ಟಿರಲಿಲ್ಲ.

ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಒಟ್ಟು 20 ಎಸೆತಗಳನ್ನು ಎದುರಿಸಿದ್ದರು. ಈ ಇಪ್ಪತ್ತು ಎಸೆತಗಳಲ್ಲೂ ರನ್ಗಳಿಸುವ ಮೂಲಕ ಇದೀಗ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಮೂಲಕ ಇಂತಹದೊಂದು ಇನಿಂಗ್ಸ್ ಆಡಿದ ಐಸಿಸಿ ಪೂರ್ಣ ಸದಸ್ಯ ರಾಷ್ಟ್ರದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ಒಟ್ಟು 20 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ ಮೊದಲ 14 ಎಸೆತಗಳಲ್ಲಿ ಕ್ರಮವಾಗಿ 6,1,4,2,4,6,4,2,6,1,4,1,4,6,1,4,6,4,1,1 ರನ್ ಕಲೆಹಾಕಿದ್ದರು. ಈ ಮೂಲಕ ಕೇವಲ ಹದಿನಾಲ್ಕು ಬಾಲ್ಗಳಲ್ಲಿ ಅರ್ಧಶತಕ ಪೂರೈಸಿ ದಾಖಲೆ ನಿರ್ಮಿಸಿದ್ದರು.

ಅರ್ಧಶತಕದ ಬಳಿಕ 6 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ 1,4,6,4,1,1 ರನ್ ಕಲೆಹಾಕಿದ್ದಾರೆ. ಈ ಮೂಲಕ 20 ಎಸೆತಗಳಲ್ಲಿ ಅಜೇಯ 68 ರನ್ ಸಿಡಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಒಂದು ಡಾಟ್ ಬಾಲ್ ಆಡದೇ ಗರಿಷ್ಠ ವೈಯುಕ್ತಿ ಸ್ಕೋರ್ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆ ಅಭಿಷೇಕ್ ಶರ್ಮಾ ಪಾಲಾಯಿತು.

ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ 340 ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿದ ಅಭಿಷೇಕ್ ಶರ್ಮಾ ಅಜೇಯ 68 ರನ್ ಗಳಿಸಿದ್ದರು. ಈ ಮೂಲಕ 300 ಕ್ಕಿಂತ ಅಧಿಕ ಸ್ಟ್ರೈಕ್ ರೇಟ್ನಲ್ಲಿ ಇನಿಂಗ್ಸ್ 50+ ಸ್ಕೋರ್ಗಳಿಸಿ ಅಜೇಯರಾಗಿ ಉಳಿದ ಬ್ಯಾಟರ್ಗಳ ಪಟ್ಟಿಯಲ್ಲೂ ಅಭಿಷೇಕ್ ಶರ್ಮಾ ಸ್ಥಾನ ಪಡೆದಿದ್ದಾರೆ. ಒಟ್ಟಿನಲ್ಲಿ ಟಿ20 ಕ್ರಿಕೆಟ್ನಲ್ಲಿ ತನ್ನ ಆರ್ಭಟ ಮುಂದುವರೆಸಿರುವ ಅಭಿಷೇಕ್ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿದ್ದು, ಮುಂಬರುವ ಟಿ20 ವಿಶ್ವಕಪ್ನಲ್ಲೂ ಯುವ ದಾಂಡಿಗನ ಕಡೆಯಿಂದ ಭರ್ಜರಿ ರೆಕಾರ್ಡ್ಗಳನ್ನು ನಿರೀಕ್ಷಿಸಬಹುದು.
Published On - 2:09 pm, Mon, 26 January 26