- TV9 Kannada Photo gallery Cricket photos India wins Asian Games cricket gold: Abhishek Sharma's fastest 50 vs Pak highlights
6,6,6,6,6,6,6.. ಪಾಕ್ ಬೌಲರ್ಗಳನ್ನು ಚೆಂಡಾಡಿ ದಾಖಲೆ ಬರೆದ ಅಭಿಷೇಕ್ ಶರ್ಮಾ..!
ಏಷ್ಯನ್ ಗೇಮ್ಸ್ ಕ್ರಿಕೆಟ್ ಚಿನ್ನದ ಪದಕ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿದ ಟೀಂ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 28 ಎಸೆತಗಳಲ್ಲಿ 61 ರನ್ ಸಿಡಿಸಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಪಾಕಿಸ್ತಾನದ ವಿರುದ್ಧ ಅತಿ ವೇಗದ ಅರ್ಧಶತಕ ಬಾರಿಸಿದ ದಾಖಲೆಯನ್ನೂ ಅಭಿಷೇಕ್ ಮುರಿದರು. ಅವರ ಸ್ಫೋಟಕ ಇನ್ನಿಂಗ್ಸ್ ಭಾರತಕ್ಕೆ ಚಿನ್ನದ ಪದಕ ಗೆಲ್ಲಲು ನೆರವಾಯಿತು.
Updated on: Oct 03, 2026 | 6:57 PM

ಪಾಕಿಸ್ತಾನ ವಿರುದ್ಧದ ಏಷ್ಯನ್ ಗೇಮ್ಸ್ ಕ್ರಿಕೆಟ್ ಚಿನ್ನದ ಪದಕ ಪಂದ್ಯವನ್ನು ಟೀಂ ಇಂಡಿಯಾ ಗೆದ್ದುಕೊಂಡಿದೆ. ಟೀಂ ಇಂಡಿಯಾದ ಈ ಗೆಲುವಿನಲ್ಲಿ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಪ್ರಮುಖ ಪಾತ್ರವಹಿಸಿದರು. ಅಭಿಷೇಕ್ ಕೇವಲ 28 ಎಸೆತಗಳಲ್ಲಿ 61 ರನ್ ಬಾರಿಸಿದರು. ಅವರ ಇನ್ನಿಂಗ್ಸ್ನಲ್ಲಿ ಏಳು ಸಿಕ್ಸರ್ ಮತ್ತು ಮೂರು ಬೌಂಡರಿಗಳು ಸೇರಿದ್ದವು(PC-PTI).

ಈ ಸ್ಫೋಟಕ ಬ್ಯಾಟಿಂಗ್ ಮೂಲಕ ಅಭಿಷೇಕ್ ಶರ್ಮಾ ಪಾಕಿಸ್ತಾನ ವಿರುದ್ಧ ಅತಿ ವೇಗದ ಅರ್ಧಶತಕ ಬಾರಿಸಿದ ದಾಖಲೆಯನ್ನು ನಿರ್ಮಿಸಿದರು. ಈ ಪಂದ್ಯದಲ್ಲಿ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅಭಿಷೇಕ್ ಪಾಕಿಸ್ತಾನ ವಿರುದ್ಧ ವೇಗದ ಅರ್ಧಶತಕ ಬಾರಿಸಿದ ಭಾರತೀಯ ಆಟಗಾರನೆನಿಸಿಕೊಂಡಿದ್ದಾರೆ. ಈ ಹಿಂದೆ ಈ ತಂಡದ ವಿರುದ್ಧ 24 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದ ಅಭಿಷೇಕ್ ತಮ್ಮದೇ ಆದ ದಾಖಲೆಯನ್ನು ಮುರಿದರು(PC-PTI).

ಸಿಂಗಲ್ ಮೂಲಕ ತಮ್ಮ ಖಾತೆಯನ್ನು ತೆರೆದ ಅಭಿಷೇಕ್ ಶರ್ಮಾ ಎರಡನೇ ಓವರ್‌ನ ಐದನೇ ಎಸೆತದಲ್ಲಿ ಇನ್ನಿಂಗ್ಸ್‌ನ ಮೊದಲ ಸಿಕ್ಸ್ ಬಾರಿಸಿದರು. ಸೈಮ್ ಅಯೂಬ್ ಎಸೆದ ಮೂರನೇ ಓವರ್‌ನಲ್ಲಿ ಒಂದು ಸಿಕ್ಸರ್ ಮತ್ತು ಎರಡು ಬೌಂಡರಿಗಳನ್ನು ಬಾರಿಸಿದರು. ನಂತರ ಅಭಿಷೇಕ್ ಅಹ್ಮದ್ ಡೇನಿಯಲ್ ಓವರ್‌ನಲ್ಲಿ ಮತ್ತೊಂದು ಸಿಕ್ಸರ್ ಬಾರಿಸಿದರು. ಇದರ ಫಲವಾಗಿ ಪವರ್‌ಪ್ಲೇನಲ್ಲಿಯೇ ಅರ್ಧಶತಕ ತಲುಪಿದರು(PC-PTI).

ಪಾಕಿಸ್ತಾನಿ ಆಟಗಾರರು ಅಭಿಷೇಕ್ ಶರ್ಮಾಗೆ ಒಂದಲ್ಲ ಎರಡಲ್ಲ, ನಾಲ್ಕು ಜೀವದಾನಗಳನ್ನು ನೀಡಿದರು. ಅರಾಫತ್ ಮಿನ್ಹಾಸ್ ಬೌಲಿಂಗ್‌ನಲ್ಲಿ ಡೀಪ್ ಮಿಡ್‌ವಿಕೆಟ್‌ನಲ್ಲಿ ಸೈಮ್ ಅಯೂಬ್ ಕ್ಯಾಚ್ ಕೈಬಿಟ್ಟರೆ, ಆ ನಂತರ ಅಬ್ರಾರ್ ಅಹ್ಮದ್ ಮತ್ತೊಂದು ಕ್ಯಾಚ್ ಕೈಬಿಟ್ಟರು. ವಿಕೆಟ್ ಕೀಪರ್ ಉಸ್ಮಾನ್ ಖಾನ್ ಕೂಡ ಕ್ಯಾಚ್ ಕೈಬಿಟ್ಟರು. ಇತ್ತ ವೇಗದ ಬೌಲರ್ ಅಹ್ಮದ್ ಡೇನಿಯಲ್ ರನ್ ಔಟ್ ಮಾಡುವ ಅವಕಾಶವನ್ನು ಕಳೆದುಕೊಂಡರು(PC-PTI).

Abhi (4)

ಇದರೊಂದಿಗೆ ಅಭಿಷೇಕ್ ಕ್ರಿಸ್ ಗೇಲ್ಗಿಂತ ಕಡಿಮೆ ಎಸೆತಗಳಲ್ಲಿ 400 ಸಿಕ್ಸ್‌ಗಳನ್ನು ಬಾರಿಸಿದ ಸಾಧನೆ ಮಾಡಿದರು. ಅಭಿಷೇಕ್ 3513 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಆಂಡ್ರೆ ರಸೆಲ್ 3027 ಎಸೆತಗಳಲ್ಲಿ 400 ಸಿಕ್ಸ್‌ಗಳನ್ನು ಬಾರಿಸಿದ್ದರು(PC-PTI).

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More



