AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: 0,0,0,0,0,0.. 14 ಪಂದ್ಯಗಳಲ್ಲಿ 6 ಸೊನ್ನೆ ಸುತ್ತಿದ ಅಭಿಷೇಕ್ ಶರ್ಮಾ

Abhishek Sharma's IPL 2026 Nightmare: 2024ರ ಐಪಿಎಲ್​ನಲ್ಲಿ ಮಿಂಚಿದ್ದ ಅಭಿಷೇಕ್ ಶರ್ಮಾ 2026ರಲ್ಲಿ ಕಳಪೆ ಫಾರ್ಮ್ ಎದುರಿಸುತ್ತಿದ್ದಾರೆ. ಸತತವಾಗಿ ಶೂನ್ಯಕ್ಕೆ ಔಟಾಗುತ್ತಿದ್ದು, ಟಿ20 ವಿಶ್ವಕಪ್ ಹಾಗೂ ಐಪಿಎಲ್ 2026ರಲ್ಲಿ ರನ್ ಬರ ಎದುರಾಗಿದೆ. 75 ದಿನಗಳಲ್ಲಿ 14 ಪಂದ್ಯಗಳಲ್ಲಿ 6 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿರುವುದು ಸನ್​ರೈಸರ್ಸ್​ ಹೈದರಾಬಾದ್​ಗೆ ಚಿಂತೆ ತಂದಿದೆ. ತಂಡದ ಯಶಸ್ಸಿಗೆ ಅವರ ಫಾರ್ಮ್ ಸುಧಾರಣೆ ಅಗತ್ಯ.

ಪೃಥ್ವಿಶಂಕರ
|

Updated on: Apr 06, 2026 | 8:08 PM

Share
2024 ರ ಐಪಿಎಲ್​ನಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಸಂಚಲನ ಮೂಡಿಸಿದ ಅಭಿಷೇಕ್ ಶರ್ಮಾ, ಸುಮಾರು ಒಂದೂವರೆ ವರ್ಷಗಳ ಕಾಲ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದೇ ರೀತಿಯ ಸಂಚಲನ ಸೃಷ್ಟಿಸುವುದನ್ನು ಮುಂದುವರೆಸಿದ್ದರು. ಆದಾಗ್ಯೂ, 2026 ರ ವರ್ಷ ಅವರಿಗೆ ಇದುವರೆಗೆ ಉತ್ತಮವಾಗಿಲ್ಲ. ಒಂದೆಡೆ ರನ್ ಬರ ಎದುರಿಸುತ್ತಿರುವ ಅಭಿಷೇಕ್​ಗೆ ಖಾತೆ ತೆರೆಯುತ್ತಿರುವುದು ಕೂಡ ಕಷ್ಟವಾಗಿದೆ.

1 / 5
2026 ರ ಟಿ20 ವಿಶ್ವಕಪ್‌ನಲ್ಲಿ ಸತತ ಮೂರು ಬಾರಿ ಶೂನ್ಯಕ್ಕೆ ಔಟಾಗಿ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸುವ ಕೆಲಸ ಮಾಡಿದ್ದ ಅಭಿಷೇಕ್ ಶರ್ಮಾ ಇದೀಗ ಐಪಿಎಲ್‌ನಲ್ಲಿಯೂ ಸಹ ಸೊನ್ನೆ ಸುತ್ತುವ ಕೆಲಸವನ್ನು ಮುಂದುವರೆಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲ ಓವರ್‌ನಲ್ಲಿಯೇ ಅವರು ಮೊಹಮ್ಮದ್ ಶಮಿಗೆ ವಿಕೆಟ್ ಒಪ್ಪಿಸಿದರು.

2 / 5
2026 ರಲ್ಲಿ ಅಭಿಷೇಕ್ ಶರ್ಮಾ ಖಾತೆ ತೆರೆಯಲು ವಿಫಲರಾಗಿರುವುದು ಇದು ಆರನೇ ಬಾರಿ. ಜನವರಿ 21 ರಿಂದ ಏಪ್ರಿಲ್ 5 ರವರೆಗೆ ನಡೆದ ಟಿ20 ಸರಣಿಯಲ್ಲಿ ಅಭಿಷೇಕ್ ಒಟ್ಟು 75 ದಿನಗಳಲ್ಲಿ 14 ಟಿ 20 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು ಆರು ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲೂ ಅಭಿಷೇಕ್ ಎರಡು ಬಾರಿ ಖಾತೆ ತೆರೆಯಲು ವಿಫಲರಾಗಿದ್ದರು.

3 / 5
ಅಭಿಷೇಕ್ ಐಪಿಎಲ್ 2026 ರಲ್ಲಿ ಇದುವರೆಗೆ ಕೇವಲ ಮೂರು ಪಂದ್ಯಗಳನ್ನು ಆಡಿದ್ದಾರೆ. ಆದರೆ ಆ ಮೂರು ಇನ್ನಿಂಗ್ಸ್‌ಗಳಲ್ಲಿ ಅವರು 18 ರ ಸರಾಸರಿಯಲ್ಲಿ ಕೇವಲ 55 ರನ್ ಗಳಿಸಿದ್ದಾರೆ. ಇದಕ್ಕೂ ಮೊದಲು ಅವರು ಕೆಕೆಆರ್ ವಿರುದ್ಧ 48 ಮತ್ತು ಆರ್‌ಸಿಬಿ ವಿರುದ್ಧ ಕೇವಲ 7 ರನ್ ಗಳಿಸಿದ್ದರು.

4 / 5
ಇದೀಗ ಏಪ್ರಿಲ್ 11 ರ ಶನಿವಾರದಂದು ಸನ್​ರೈಸರ್ಸ್​ ಹೈದರಾಬಾದ್ ತಂಡ ತನ್ನ ನಾಲ್ಕನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಲೀಗ್​ನಲ್ಲಿ ಮೂರು ಪಂದ್ಯಗಳನ್ನಾಡಿರುವ ಸನ್​ರೈಸರ್ಸ್​ ಒಂದು ಪಂದ್ಯವನ್ನು ಗೆದ್ದು ಎರಡು ಪಂದ್ಯಗಳಲ್ಲಿ ಸೋತಿದೆ. ಹೀಗಾಗಿ ಮುಂದಿನ ಸುತ್ತಿಗೆ ಅರ್ಹತೆ ಪಡೆಯುವ ದೃಷ್ಟಿಯಿಂದ ಸನ್​ರೈಸರ್ಸ್​ ತಂಡ ಉಳಿದ ಪಂದ್ಯಗಳನ್ನು ಗೆಲ್ಲಲೇಬೇಕಿದೆ. ಹಾಗಾಗಬೇಕಿದ್ದರೆ, ಅಭಿಷೇಕ್ ತಂಡದ ಪರ ಅಬ್ಬರಿಸಬೇಕಿದೆ.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ

ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ

ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ

ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ

ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ

ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ

ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ

ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ