Abhishek Sharma: ಧೋನಿಯ ಅನಗತ್ಯ ದಾಖಲೆ ಸರಿಗಟ್ಟಿದ ಅಭಿಷೇಕ್ ಶರ್ಮಾ
Zimbabwe vs India: ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡ 115 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದರು. ಅಲ್ಲದೆ ಭಾರತ ತಂಡವು 19.5 ಓವರ್ಗಳಲ್ಲಿ 102 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮೊದಲ ಪಂದ್ಯದಲ್ಲಿ 13 ರನ್ಗಳಿಂದ ಸೋಲೊಪ್ಪಿಕೊಂಡಿದೆ.