Abhishek Sharma: ಧೋನಿಯ ಅನಗತ್ಯ ದಾಖಲೆ ಸರಿಗಟ್ಟಿದ ಅಭಿಷೇಕ್ ಶರ್ಮಾ

|

Updated on: Jul 07, 2024 | 12:25 PM

Zimbabwe vs India: ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡ 115 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದರು. ಅಲ್ಲದೆ ಭಾರತ ತಂಡವು 19.5 ಓವರ್​ಗಳಲ್ಲಿ 102 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮೊದಲ ಪಂದ್ಯದಲ್ಲಿ 13 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

1 / 5
ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕ ಅಭಿಷೇಕ್ ಶರ್ಮಾ (Abhishek Sharma) ಟೀಮ್ ಇಂಡಿಯಾ ಪರ ಪಾದರ್ಪಣೆ ಮಾಡಿದ್ದಾರೆ. ಈ ಪಾದರ್ಪಣೆ ಪಂದ್ಯದಲ್ಲೇ ಅನಗತ್ಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಸಹ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಹೆಸರಿನಲ್ಲಿದ್ದ ಬೇಡದ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

2 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ 20 ಓವರ್​ಗಳಲ್ಲಿ 115 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಲು ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ಚೊಚ್ಚಲ ಟಿ20 ಪಂದ್ಯದಲ್ಲೇ ಶೂನ್ಯಕ್ಕೆ ಔಟಾದ ಭಾರತದ 4ನೇ ಬ್ಯಾಟರ್ ಎನಿಸಿಕೊಂಡರು.

3 / 5
ಇಂತಹದೊಂದು ಅನಗತ್ಯ ದಾಖಲೆ ಬರೆದ ಮೊದಲ ಭಾರತೀಯ ಮಹೇಂದ್ರ ಸಿಂಗ್ ಧೋನಿ. 2006 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಪಾದರ್ಪಣೆ ಮಾಡಿದ್ದ ಧೋನಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಈ ಮೂಲಕ ಚೊಚ್ಚಲ ಟಿ20 ಪಂದ್ಯದಲ್ಲಿ ಸೊನ್ನೆ ಸುತ್ತಿದ ಮೊದಲ ಟೀಮ್ ಇಂಡಿಯಾ ಆಟಗಾರ ಎನಿಸಿಕೊಂಡರು.

4 / 5
ಇದಾದ ಬಳಿಕ 2016 ರಲ್ಲಿ ಝಿಂಬಾಬ್ವೆ ವಿರುದ್ಧದ ಟಿ20 ಪಂದ್ಯದಲ್ಲಿ ಪಾದರ್ಪಣೆ ಮಾಡಿದ ಕೆಎಲ್ ರಾಹುಲ್ ಸೊನ್ನೆ ಸುತ್ತಿದ್ದರು. ಆ ಬಳಿಕ 2021 ರಲ್ಲಿ ಶ್ರೀಲಂಕಾ ವಿರುದ್ಧ ಚೊಚ್ಚಲ ಅವಕಾಶ ಪಡೆದ ಪೃಥ್ವಿ ಶಾ ಕೂಡ ಶೂನ್ಯಕ್ಕೆ ಔಟಾಗಿದ್ದರು. ಇದೀಗ ಈ ಪಟ್ಟಿಗೆ ಅಭಿಷೇಕ್ ಶರ್ಮಾ ಕೂಡ ಸೇರ್ಪಡೆಯಾಗಿದ್ದಾರೆ.

5 / 5
ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ 4 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ, ಬ್ರಿಯಾನ್ ಬೆನೆಟ್ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಇದರೊಂದಿಗೆ ಚೊಚ್ಚಲ ಟಿ20 ಪಂದ್ಯದಲ್ಲಿ ಸೊನ್ನೆಗೆ ಔಟಾದ ಅನಗತ್ಯ ದಾಖಲೆ ಅಭಿಷೇಕ್ ಶರ್ಮಾ ಹೆಸರಿಗೆ ಸೇರ್ಪಡೆಯಾಯಿತು.