AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: 2 ಕ್ಯಾಚ್ ಡ್ರಾಪ್, 10 ರನ್​ಗೆ ಔಟ್; ಅಪ್ರಯೋಜಕ ಅಭಿಷೇಕ್ ಶರ್ಮಾ

Abhishek Sharma's T20 World Cup Nightmare: ಟಿ20 ವಿಶ್ವಕಪ್‌ನಲ್ಲಿ ಅಭಿಷೇಕ್ ಶರ್ಮಾ ಫಾರ್ಮ್ ಕಳೆದುಕೊಂಡಿದ್ದಾರೆ. ವಿಂಡೀಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಎರಡು ಸುಲಭ ಕ್ಯಾಚ್‌ಗಳನ್ನು ಕೈಚೆಲ್ಲಿ, ಬ್ಯಾಟಿಂಗ್‌ನಲ್ಲೂ ಕೇವಲ 10 ರನ್ ಗಳಿಸಿದರು. ಅವರ ಕಳಪೆ ಫೀಲ್ಡಿಂಗ್‌ನಿಂದ ವಿಂಡೀಸ್ ಬೃಹತ್ ಮೊತ್ತ ಪೇರಿಸಲು ನೆರವಾಯಿತು. ಅಭಿಷೇಕ್ ವೈಫಲ್ಯ ಭಾರತದ ಸೆಮಿಫೈನಲ್ ಕನಸಿಗೆ ದೊಡ್ಡ ಪೆಟ್ಟು ನೀಡಿದೆ.

ಪೃಥ್ವಿಶಂಕರ
|

Updated on: Mar 01, 2026 | 9:49 PM

Share
ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಟಿ20 ಕ್ರಿಕೆಟ್​ನಲ್ಲಿ ರನ್​ಗಳ ಮಳೆ ಹರಿಸಿದ್ದ ಟೀಂ ಇಂಡಿಯಾದ ಅಭಿಷೇಕ್ ಶರ್ಮಾ ಟಿ20 ವಿಶ್ವಕಪ್ ಆರಂಭವಾದ ಬಳಿಕ ರನ್ ಬರ ಎದುರಿಸುತ್ತಿದ್ದಾರೆ. ಪ್ರತಿ ಪಂದ್ಯದಲ್ಲೂ ಬ್ಯಾಟಿಂಗ್ ಮರೆತವರಂತೆ ವರ್ತಿಸುತ್ತಿರುವ ಅಭಿಷೇಕ್ ಟೀಂ ಇಂಡಿಯಾವನ್ನು ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದಾರೆ. ಇಂದು ನಡೆದ ವಿಂಡೀಸ್ ವಿರುದ್ಧದ ಪಂದ್ಯದಲ್ಲೂ ಅಭಿಷೇಕ್ ಅದೇ ಕೆಲಸ ಮಾಡಿದರು.

1 / 6
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ಸೂಪರ್ 8 ಸುತ್ತಿನ ಕೊನೆಯ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸೆಮಿಫೈನಲ್ ಟಿಕೆಟ್ ಸಿಗಲಿದೆ. ಹೀಗಾಗಿ ಟೀಂ ಇಂಡಿಯಾ ಸೆಮಿಫೈನಲ್​ಗೇರಬೇಕೆಂದರೆ ಈ ಪಂದ್ಯವನ್ನು ಗೆಲ್ಲಲೇಬೇಕಿದೆ. ಅದಕ್ಕೆ ಪೂರಕವಾಗಿ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

2 / 6
ಆದರೆ ತಂಡದ ಕಳಪೆ ಫಿಲ್ಡಿಂಗ್ ಕಾರಣದಿಂದಾಗಿ ತಂಡಕ್ಕೆ ವಿಕೆಟ್ ಪಡೆಯುವ ಹಲವು ಅವಕಾಶಗಳು ಕೈತಪ್ಪಿದವು. ಅದರಲ್ಲೂ ಎರಡು ಸುಲಭವಾದ ಕ್ಯಾಚ್​ಗಳನ್ನು ಕೈಚೆಲ್ಲಿದ ಅಭಿಷೇಕ್ ಶರ್ಮಾ ಟೀಂ ಇಂಡಿಯಾ ಪಾಲಿಗೆ ಅಕ್ಷರಶಃ ವಿಲನ್ ಆದರು. ಅಭಿಷೇಕ್ ಕ್ಯಾಚ್ ಬಿಟ್ಟ ಈ ಎರಡು ಕ್ಯಾಚ್​ಗಳಿಂದ ವಿಂಡೀಸ್ ಪಡೆ ಭರ್ಜರಿ ಲಾಭ ಪಡೆಯಿತು.

3 / 6
ವಿಂಡೀಸ್ ಪರ ಆರಂಭಿಕನಾಗಿ ಬಂದಿದ್ದ ರೋಸ್ಟನ್ ಚೇಸ್ 14 ರನ್ ಗಳಿಸಿ ಆಡುತ್ತಿದ್ದಾಗ ಐದನೇ ಓವರ್​ನಲ್ಲಿ ವಿಕೆಟ್ ಪಡೆಯುವ ಅವಕಾಶ ನೀಡಿದ್ದರು. ಆದರೆ ಅಭಿಷೇಕ್ ಶರ್ಮಾ ಅತಿ ಸುಲಭವಾದ ಕ್ಯಾಚ್​ ಅನ್ನು ಕೈಬಿಟ್ಟರು. ಇದರ ಲಾಭ ಪಡೆದ ಚೇಸ್ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟಿದ್ದಲ್ಲದೆ 25 ಎಸೆತಗಳಲ್ಲಿ 160 ಸ್ಟ್ರೈಕ್ ರೇಟ್‌ನಲ್ಲಿ ಐದು ಬೌಂಡರಿ ಮತ್ತು ಒಂದು ಸಿಕ್ಸರ್ ಸೇರಿದಂತೆ 40 ರನ್ ಬಾರಿಸಿದರು.

4 / 6
19ನೇ ಓವರ್​ನಲ್ಲೂ ಅಭಿಷೇಕ್ ಶರ್ಮಾ ಮತ್ತೊಂದು ಕ್ಯಾಚ್ ಕೈಚೆಲ್ಲಿದರು. ಅರ್ಷದೀಪ್ ಬೌಲ್ ಮಾಡಿದ ಈ ಓವರ್​ಬಲ್ಲಿ ಪೊವೆಲ್ ನೀಡಿದ ಸರಳ ಕ್ಯಾಚ್ ಅನ್ನು ಅಭಿಷೇಕ್ ಹಿಡಿಯುವಲ್ಲಿ ವಿಫಲರಾದರು. ಇದರ ಲಾಭ ಪಡೆದ ವಿಂಡೀಸ್ ಪಡೆ ತಂಡದ ಮೊತ್ತವನ್ನು 195 ರನ್​ಗಳ ಬೃಹತ್ ಮೊತ್ತಕ್ಕೆ ಕೊಂಡೊಯ್ಯಿತು. ಈ ಪಂದ್ಯದಲ್ಲಿ ಅಭಿಷೇಕ್ ಮಾತ್ರವಲ್ಲದೆ ಉಳಿದವರು ಕೂಡ ಅತ್ಯಂತ ಕಳಪೆ ಫಿಲ್ಡಿಂಗ್ ಮಾಡಿದರು.

5 / 6
ಕಳಪೆ ಫಿಲ್ಡಿಂಗ್ ನಂತರ ಅಭಿಷೇಕ್ ಶರ್ಮಾ ಬ್ಯಾಟಿಂಗ್​ನಲ್ಲಾದರೂ ಒಂದೊಳ್ಳೆ ಇನ್ನಿಂಗ್ಸ್ ಆಡಬಹುದು ಎಂಬ ನಿರೀಕ್ಷೆ ಇತ್ತು. ಅದರಂತೆ ಬೌಂಡರಿ ಬಾರಿಸುವ ಮೂಲಕ ತಮ್ಮ ಖಾತೆಯನ್ನು ತೆರೆದರು. ಆದರೆ ಸಿಕ್ಸರ್ ಬಾರಿಸುವ ಯತ್ನದಲ್ಲಿ ಕ್ಯಾಚ್ ನೀಡಿ ಔಟಾದರು. ಈ ಪಂದ್ಯದಲ್ಲಿ ಅಭಿಷೇಕ್ 11 ಎಸೆತಗಳಲ್ಲಿ 2 ಬೌಂಡರಿ ಸಹಿತ 10 ರನ್ ಬಾರಿಸಿ ಔಟಾದರು.

6 / 6
Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ

‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ

ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ

‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು

ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ

ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ

ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ

ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?

ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್