ಆರುಗಳಿಂದಲೇ ಇನ್ನಿಂಗ್ಸ್ ಆರಂಭ; ಇತಿಹಾಸ ನಿರ್ಮಿಸಿದ ಅಭಿಷೇಕ್ ಶರ್ಮಾ..!

Updated on: Oct 22, 2026 | 7:05 PM

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಆರಂಭಿಕ ಅಭಿಷೇಕ್ ಶರ್ಮಾ 12 ಎಸೆತಗಳಲ್ಲಿ 29 ರನ್ ಗಳಿಸಿ ಮಿಂಚಿದರು. ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಮೊದಲ ಎಸೆತದಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ವಿಶ್ವ ದಾಖಲೆ ಮತ್ತು ಪವರ್‌ಪ್ಲೇನಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ರೋಹಿತ್ ಶರ್ಮಾ ದಾಖಲೆಯನ್ನು ಮುರಿದರು. ಅವರ ಸ್ಫೋಟಕ ಬ್ಯಾಟಿಂಗ್ ಭಾರತದ ಗೆಲುವಿಗೆ ಭದ್ರ ಬುನಾದಿ ಹಾಕಿತು.

1 / 5
ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ ಕೊನೆಯ ಓವರ್​ನಲ್ಲಿ ಗೆದ್ದುಕೊಂಡಿತು.  226 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಭಾರತ ತಂಡದ ಗೆಲುವಿನಲ್ಲಿ ಆರಂಭಿಕ ಅಭಿಷೇಕ್ ಶರ್ಮಾ ಪ್ರಮುಖ ಪಾತ್ರವಹಿಸಿದರು. ಈ ಪಂದ್ಯದಲ್ಲಿ 29 ರನ್​ಗಳ ಇನ್ನಿಂಗ್ಸ್ ಆಡಿದ ಅಭಿಷೇಕ್ ತಮ್ಮ ಇನ್ನಿಂಗ್ಸ್​ನಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್‌ಗಳನ್ನು ಬಾರಿಸಿದರು(PC-PTI).

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ ಕೊನೆಯ ಓವರ್​ನಲ್ಲಿ ಗೆದ್ದುಕೊಂಡಿತು. 226 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಭಾರತ ತಂಡದ ಗೆಲುವಿನಲ್ಲಿ ಆರಂಭಿಕ ಅಭಿಷೇಕ್ ಶರ್ಮಾ ಪ್ರಮುಖ ಪಾತ್ರವಹಿಸಿದರು. ಈ ಪಂದ್ಯದಲ್ಲಿ 29 ರನ್​ಗಳ ಇನ್ನಿಂಗ್ಸ್ ಆಡಿದ ಅಭಿಷೇಕ್ ತಮ್ಮ ಇನ್ನಿಂಗ್ಸ್​ನಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್‌ಗಳನ್ನು ಬಾರಿಸಿದರು(PC-PTI).

2 / 5

ತಮ್ಮ ಇನ್ನಿಂಗ್ಸ್​ನಲ್ಲಿ 3 ಸಿಕ್ಸರ್‌ಗಳನ್ನು ಬಾರಿಸಿದ ಅಭಿಷೇಕ್ ಈ ಮೂಲಕ ಶಫೀಕುಲ್ಲಾ ಶಿನ್ವಾರಿ ಅವರ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. ವಾಸ್ತವವಾಗಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಮೊದಲ ಎಸೆತದಲ್ಲೇ ಅತಿ ಹೆಚ್ಚು ಬಾರಿ ಸಿಕ್ಸರ್ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಅಭಿಷೇಕ್ ಪಾತ್ರರಾಗಿದ್ದಾರೆ(PC-PTI).

3 / 5

ಈ ಮೊದಲು ಅಭಿಷೇಕ್ ಶರ್ಮಾ ಮತ್ತು ಶಫೀಕುಲ್ಲಾ ಶಿನ್ವಾರಿ ತಲಾ 6 ಬಾರಿ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದರು. ಇದೀಗ 7ನೇ ಬಾರಿ ಈ ಸಾಧನೆ ಮಾಡುವ ಮೂಲಕ ಅಭಿಷೇಕ್ ಏಕೈಕ ದಾಖಲೆಯ ಒಡೆಯರಾಗಿದ್ದಾರೆ. ಸೂರ್ಯಕುಮಾರ್ ಯಾದವ್ 5 ಸಿಕ್ಸರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ(PC-PTI).

4 / 5

ಇದರ ಜೊತೆಗೆ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನ ಪವರ್‌ಪ್ಲೇನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಅಭಿಷೇಕ್ ಪಾತ್ರರಾಗಿದ್ದಾರೆ. ಅಭಿಷೇಕ್ ಪವರ್‌ಪ್ಲೇಗಳಲ್ಲಿ ಇದುವರೆಗೆ ಒಟ್ಟು 99 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈ ಮೂಲಕ 98 ಸಿಕ್ಸರ್‌ಗಳನ್ನು ಬಾರಿಸಿದ್ದ ರೋಹಿತ್ ಶರ್ಮಾ ಅವರನ್ನು ಎರಡನೇ ಸ್ಥಾನಕ್ಕೆ ತಳಿದ್ದಾರೆ(PC-PTI).

5 / 5

ಮೇಲೆ ಹೇಳಿದಂತೆ ಅಭಿಷೇಕ್ ಶರ್ಮಾ ಕೇವಲ 12 ಎಸೆತಗಳಲ್ಲಿ 29 ರನ್ ಸಿಡಿಸಿ ಔಟಾದರು. ಆದರೆ ಅಷ್ಟರಲ್ಲೇ ಭಾರತಕ್ಕೆ ಭರ್ಜರಿ ಆರಂಭ ಸಿಕ್ಕಿತ್ತು. ಮತ್ತೊಂದು ತುದಿಯಲ್ಲಿ ಸಂಜು ಸ್ಯಾಮ್ಸನ್ ಕೂಡ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 93 ರನ್‌ಗಳ ಅಮೂಲ್ಯ ಜೊತೆಯಾಟವಾಡಿ ಭಾರತದ ಗೆಲುವಿಗೆ ಭದ್ರ ಬುನಾದಿ ಹಾಕಿತು(PC-PTI).

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us