Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಅಭಿಷೇಕ್ ಆರ್ಭಟಕ್ಕೆ ಮುರಿದ ದಾಖಲೆಗಳೆಷ್ಟು ಗೊತ್ತಾ? ನೀವೇ ನೋಡಿ

Abhishek Sharma's Record-Breaking T20 Innings: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರು ಅದ್ಭುತ ಪ್ರದರ್ಶನ ನೀಡಿದರು. ಕೇವಲ 37 ಎಸೆತಗಳಲ್ಲಿ ಶತಕ ಸಿಡಿಸಿದ ಅಭಿ ಟಿ20 ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಸೃಷ್ಟಿಸಿದರು. ಅದರಲ್ಲಿ 13 ಸಿಕ್ಸರ್‌ಗಳನ್ನು ಬಾರಿಸಿ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದ ಅವರು 135 ರನ್ ಗಳಿಸಿ, ಭಾರತದ ಪರ ಅತಿ ಹೆಚ್ಚು ವೈಯಕ್ತಿಕ ಸ್ಕೋರ್ ದಾಖಲೆಯನ್ನೂ ಮಾಡಿದರು.

ಪೃಥ್ವಿಶಂಕರ
|

Updated on:Feb 02, 2025 | 9:53 PM

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಬಿರುಗಾಳಿ ಎಬ್ಬಿಸಿ ಕೇವಲ 37 ಎಸೆತಗಳಲ್ಲಿ 5 ಬೌಂಡರಿ ಹಾಗೂ 10 ಭರ್ಜರಿ ಸಿಕ್ಸರ್​ಗಳ ನೆರವಿನಿಂದ ಶತಕ ಪೂರೈಸಿದರು. ಈ ಮೂಲಕ ಟಿ20 ಮಾದರಿಯಲ್ಲಿ ಅನೇಕ ದಾಖಲೆಗಳನ್ನು ನಿರ್ಮಿಸಿದರು.

1 / 7
ತಮ್ಮ ಇನ್ನಿಂಗ್ಸ್​ನಲ್ಲಿ 250 ರ ಸ್ಟ್ರೈಕ್​ ರೇಟ್​ನಲ್ಲಿ ಬ್ಯಾಟ್ ಬೀಸಿದ ಅಭಿಷೇಕ್ ಶರ್ಮಾ ಕೇವಲ 37 ಎಸೆತಗಳಲ್ಲಿ ಶತಕ ಸಿಡಿಸುವುದರೊಂದಿಗೆ ಅಂತರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತಿ ವೇಗದ ಶತಕ ಸಿಡಿಸಿದ ಎರಡನೇ ಭಾರತೀಯ ಆಟಗಾರ ಎನಿಸಿಕೊಂಡರು. ಅಭಿಷೇಕ್​ಗೂ ಮುನ್ನ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿರುವ ರೋಹಿತ್ ಈ ಪಟ್ಟಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

2 / 7
ಶತಕಕ್ಕೂ ಮುನ್ನ ತಿಲಕ್ ವರ್ಮಾ ಜೊತೆ ಸ್ಫೊಟಕ ಜೊತೆಯಾಟ ಕಟ್ಟಿದ ಅಭಿಷೇಕ್ ಕೇವಲ 17 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಇದು ಟಿ20 ಕ್ರಿಕೆಟ್​ನಲ್ಲಿ ಭಾರತೀಯ ಆಟಗಾರನೊಬ್ಬ ಸಿಡಿಸಿದ ಎರಡನೇ ಅತಿ ವೇಗದ ಅರ್ಧಶತಕವಾಗಿದೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಯುವರಾಜ್ ಸಿಂಗ್ 2007 ರ ಟಿ20 ವಿಶ್ವಕಪ್​ನಲ್ಲಿ ಇದೇ ಇಂಗ್ಲೆಂಡ್ ವಿರುದ್ಧ 12 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು.

3 / 7
ಈ ಪಂದ್ಯದಲ್ಲಿ ಬರೋಬ್ಬರಿ 13 ಸಿಕ್ಸರ್‌ಗಳನ್ನು ಸಿಡಿಸಿದ ಅಭಿಷೇಕ್ ಶರ್ಮಾ, ರೋಹಿತ್ ಶರ್ಮಾ ದಾಖಲೆಯನ್ನು ಮುರಿದರು. ಟಿ20 ಪಂದ್ಯದಲ್ಲಿ ಭಾರತದ ಪರ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ರೋಹಿತ್ ಹೆಸರಿನಲ್ಲಿತ್ತು. 2017 ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅವರು ಒಂದೇ ಇನ್ನಿಂಗ್ಸ್‌ನಲ್ಲಿ 10 ಸಿಕ್ಸರ್‌ಗಳನ್ನು ಬಾರಿಸಿದ್ದರು. ಆದರೆ, ಈ ಪಂದ್ಯದಲ್ಲಿ 13 ಸಿಕ್ಸರ್‌ಗಳನ್ನು ಬಾರಿಸಿದ ಅಭಿಷೇಕ್ ಶರ್ಮಾ, ರೋಹಿತ್ ದಾಖಲೆಯನ್ನು ಮುರಿದರು.

4 / 7
ಹಾಗೆಯೇ ಈ ಪಂದ್ಯದಲ್ಲಿ 135 ರನ್​ಗಳ ಇನ್ನಿಂಗ್ಸ್ ಆಡಿದ ಅಭಿಷೇಕ್ ಟಿ20 ಪಂದ್ಯದಲ್ಲಿ ಭಾರತದ ಪರ ಅತ್ಯಧಿಕ ವೈಯಕ್ತಿಕ ಸ್ಕೋರ್ ಬಾರಿಸಿದ ದಾಖಲೆಯನ್ನು ಸೃಷ್ಟಿಸಿದರು. ಈ ವಿಷಯದಲ್ಲಿ ಅವರು ಶುಭ್​ಮನ್ ಗಿಲ್ ಅವರ ದಾಖಲೆಯನ್ನು ಮುರಿದರು. 2023 ರಲ್ಲಿ ನ್ಯೂಜಿಲೆಂಡ್ ವಿರುದ್ಧ ಶುಭಮನ್ 126 ರನ್ ಸಿಡಿಸಿದ್ದರು. ಆದರೆ ಅಭಿಷೇಕ್ 135 ರನ್ ಗಳಿಸುವ ಮೂಲಕ ಗಿಲ್ ದಾಖಲೆಯನ್ನು ಮುರಿದರು.

5 / 7
ಇನ್ನು ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರ ಅದ್ಭುತ ಇನ್ನಿಂಗ್ಸ್ ನೆರವಿನಿಂದ ಭಾರತ ಇಂಗ್ಲೆಂಡ್‌ಗೆ 248 ರನ್‌ಗಳ ಗುರಿಯನ್ನು ನೀಡಿದೆ. ಇದು ಟಿ20ಯಲ್ಲಿ ಭಾರತದ ನಾಲ್ಕನೇ ಗರಿಷ್ಠ ಮೊತ್ತವಾಗಿದೆ. ಕಳೆದ ವರ್ಷ ಹೈದರಾಬಾದ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಆರು ವಿಕೆಟ್‌ಗೆ 297 ರನ್ ಗಳಿಸಿದ್ದು, ಈ ಮಾದರಿಯಲ್ಲಿ ಭಾರತದ ಗರಿಷ್ಠ ಸ್ಕೋರ್ ಆಗಿತ್ತು.

6 / 7
ಇಂಗ್ಲೆಂಡ್ ವಿರುದ್ಧದ ಐದನೇ ಟಿ20ಯಲ್ಲಿ ಅಭಿಷೇಕ್ ಆಡುತ್ತಿದ್ದ ರೀತಿ ನೋಡಿದರೆ, ಇಂದು ತಂಡವು ಟಿ20ಯಲ್ಲಿ 300 ರನ್ ಗಳಿಸಬಹುದು ಎಂದು ಅನಿಸಿತು. ಆದರೆ, ಇನ್ನೊಂದು ತುದಿಯಲ್ಲಿ ಸತತ ವಿಕೆಟ್ ಪತನದಿಂದಾಗಿ ಅದು ಸಾಧ್ಯವಾಗಲಿಲ್ಲ. ಆದಾಗ್ಯೂ, ತಂಡವು ಮತ್ತೊಮ್ಮೆ ಟಿ20ಯಲ್ಲಿ ತನ್ನ ಪ್ರಾಬಲ್ಯವನ್ನು ಪ್ರದರ್ಶಿಸುವಲ್ಲಿ ಯಶಸ್ವಿಯಾಯಿತು.

7 / 7

Published On - 9:48 pm, Sun, 2 February 25

Follow us
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು

ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ

ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ

Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು

ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ

ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?

ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ

ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ