- TV9 Kannada Kannada News Photos Cricket Photos Abhishek Sharma Scripts World Record for Fastest 2,000 Runs in T20Is
1,024 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಅಭಿಷೇಕ್ ಶರ್ಮಾ
ಟಿ20 ಕ್ರಿಕೆಟ್ನಲ್ಲಿ ಅಭೀಷೇಕ್ ಶರ್ಮಾ ಅಬ್ಬರ ಮುಂದುವರೆದಿದೆ. ಈ ಅಬ್ಬರದೊಂದಿಗೆ ಈ ಬಾರಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಅದು ಸಹ ಕೇವಲ 1,024 ಎಸೆತಗಳಲ್ಲಿ ಎಂಬುದು ವಿಶೇಷ. ಈ ಮೂಲಕ ಭಾರತ ತಂಡದ ಮಾಜಿ ನಾಯಕನ ಹೆಸರಿನಲ್ಲಿದ್ದ ವರ್ಲ್ಡ್ ರೆಕಾರ್ಡ್ ಅನ್ನು ಅಭಿಷೇಕ್ ಶರ್ಮಾ ಅಳಿಸಿ ಹಾಕಿದ್ದಾರೆ.
Updated on: Oct 12, 2026 | 8:38 AM

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ್ದು ಮತ್ಯಾರೂ ಅಲ್ಲ, ಭಾರತದ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ. ಅದು ಸಹ ಟೀಮ್ ಇಂಡಿಯಾದ ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: Gettyimages)

ಇಂದೋರ್ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತದ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಕೇವಲ 30 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 6 ಫೋರ್ಗಳೊಂದಿಗೆ 69 ರನ್ ಬಾರಿಸಿದ್ದರು. ಈ 69 ರನ್ಗಳೊಂದಿಗೆ ಅಭಿ ಟಿ20 ಕ್ರಿಕೆಟ್ನಲ್ಲಿ 2000 ರನ್ ಪೂರೈಸಿದ್ದಾರೆ. (PC: Gettyimages)

ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 2000 ರನ್ ಪೂರೈಸಿದ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಭಾರತ ತಂಡದ ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿತ್ತು. (PC: Gettyimages)

ಸೂರ್ಯಕುಮಾರ್ ಯಾದವ್ ಕೇವಲ 1,164 ಎಸೆತಗಳಲ್ಲಿ 2000 ರನ್ ಪೂರೈಸಿದ್ದರು. ಈ ಮೂಲಕ ಆಸ್ಟ್ರೇಲಿಯಾದ ಆರೋನ್ ಫಿಂಚ್ (1164 ಎಸೆತಗಳು) ಹೆಸರಿನಲ್ಲಿದ್ದ ಕಡಿಮೆ ಕಡಿಮೆ ಎಸೆತಗಳಲ್ಲಿ 2000 ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ತಮ್ಮದಾಗಿಸಿಕೊಂಡಿದ್ದರು. (PC: Gettyimages)

ಇದೀಗ ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಅಭಿಷೇಕ್ ಶರ್ಮಾ ಮುರಿದಿದ್ದಾರೆ. ಕೇವಲ 1,024 ಎಸೆತಗಳಲ್ಲಿ 2000 ರನ್ ಕಲೆಹಾಕುವ ಮೂಲಕ ಅಭಿಷೇಕ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 2 ಸಾವಿರ ರನ್ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: Gettyimages)

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



