AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕಡಿಮೆ ಎಸೆತಗಳಲ್ಲಿ 100 ಸಿಕ್ಸರ್‌; ವಿಶ್ವದಾಖಲೆ ಬರೆದ ಅಭಿಷೇಕ್ ಶರ್ಮಾ

Abhishek Sharma Smashes World Record: ಅಭಿಷೇಕ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್‌ನಿಂದ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅಂತರರಾಷ್ಟ್ರೀಯ ಟಿ20ಯಲ್ಲಿ ಕೇವಲ 785 ಎಸೆತಗಳಲ್ಲಿ 100 ಸಿಕ್ಸರ್‌ಗಳನ್ನು ಸಿಡಿಸಿ ಈ ಸಾಧನೆ ಮಾಡಿದ ಅತಿ ವೇಗದ ಆಟಗಾರರಾಗಿದ್ದಾರೆ. ಇವರು ವೆಸ್ಟ್ ಇಂಡೀಸ್‌ನ ಎವಿನ್ ಲೂಯಿಸ್ ಮತ್ತು ನ್ಯೂಜಿಲೆಂಡ್‌ನ ಫಿನ್ ಅಲೆನ್ ಅವರನ್ನು ಹಿಂದಿಕ್ಕಿ, 100 ಸಿಕ್ಸರ್ ಬಾರಿಸಿದ ಐದನೇ ಭಾರತೀಯ ಬ್ಯಾಟ್ಸ್‌ಮನ್ ಆಗಿದ್ದಾರೆ.

ಪೃಥ್ವಿಶಂಕರ
|

Updated on: Jul 01, 2026 | 11:19 PM

Share
ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ತಮ್ಮ ಸ್ಫೋಟಕ ಬ್ಯಾಟಿಂಗ್‌ ಮೂಲಕ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 4 ಭರ್ಜರಿ ಸಿಕ್ಸರ್‌ಗಳನ್ನು ಬಾರಿಸಿದ ಅಭಿಷೇಕ್ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಸಿಕ್ಸರ್‌ಗಳ ಶತಕ ಪೂರೈಸಿದರು (PC-BCCI).

1 / 5
ಈ ಪಂದ್ಯದಲ್ಲಿ 24 ಎಸೆತಗಳನ್ನು ಎದುರಿಸಿದ ಅಭಿಷೇಕ್ 6 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಹಿತ 59 ರನ್ ಬಾರಿಸಿ ಔಟಾದರು. ತಮ್ಮ ಇನ್ನಿಂಗ್ಸ್​ನಲ್ಲಿ 4 ಸಿಕ್ಸರ್‌ಗಳನ್ನು ಬಾರಿಸಿದ ಅಭಿಷೇಕ್, ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ (ಪೂರ್ಣ ಸದಸ್ಯ ತಂಡಗಳಲ್ಲಿ) ಕಡಿಮೆ ಎಸೆತಗಳಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ (PC-BCCI).

2 / 5
ಈ ಸಾಧನೆಯ ಮೂಲಕ ಅಭಿಷೇಕ್, ವೆಸ್ಟ್ ಇಂಡೀಸ್‌ನ ಎವಿನ್ ಲೂಯಿಸ್ ಮತ್ತು ನ್ಯೂಜಿಲೆಂಡ್‌ನ ಫಿನ್ ಅಲೆನ್‌ರಂತಹ ಬ್ಯಾಟ್ಸ್‌ಮನ್‌ಗಳನ್ನು ಹಿಂದಿಕ್ಕಿದ್ದಾರೆ. ಅಭಿಷೇಕ್ ಕೇವಲ 785 ಎಸೆತಗಳಲ್ಲಿ 100 ಸಿಕ್ಸರ್‌ಗಳ ಗಡಿ ದಾಟಿದರೆ, ಲೂಯಿಸ್ 789 ಎಸೆತಗಳು ಹಾಗೂ ಫಿನ್ ಅಲೆನ್ 871 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು (PC-PTI).

3 / 5
ಅಭಿಷೇಕ್ ಹೊರತಾಗಿ ಈ ಪಟ್ಟಿಯಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿರುವ ಸೂರ್ಯಕುಮಾರ್ 1007 ಎಸೆತಗಳಲ್ಲಿ 100 ಸಿಕ್ಸರ್‌ಗಳ ಗಡಿ ದಾಟಿದ್ದರು. ಉಳಿದಂತೆ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ  ಆಸ್ಟ್ರೇಲಿಯಾದ ಟಿಮ್ ಡೇವಿಡ್ (931) ಇದ್ದರೆ, ಐದನೇ ಸ್ಥಾನದಲ್ಲಿ ನ್ಯೂಜಿಲೆಂಡ್‌ನ ಕಾಲಿನ್ ಮುನ್ರೊ (963) ಇದ್ದಾರೆ (PC-PTI).

4 / 5
ಇದರ ಜೊತೆಗೆ ಅಭಿಷೇಕ್ ಶರ್ಮಾ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 100 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಐದನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾರತೀಯ ಬ್ಯಾಟ್ಸ್‌ಮನ್‌ಗಳಲ್ಲಿ, ರೋಹಿತ್ ಶರ್ಮಾ (205), ಸೂರ್ಯಕುಮಾರ್ ಯಾದವ್ (179), ಹಾರ್ದಿಕ್ ಪಾಂಡ್ಯ (126) ಮತ್ತು ವಿರಾಟ್ ಕೊಹ್ಲಿ (124) ಈ ಸಾಧನೆಯನ್ನು ಅವರಿಗಿಂತ ಮೊದಲು ಮಾಡಿದ್ದಾರೆ (PC-PTI).

5 / 5
Follow Us
ಅಸ್ಸಾಂ ಪ್ರವಾಹದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು

ಭಾರತಕ್ಕೆ ಜಪಾನ್ ದೇಶದ ಪ್ರಧಾನಿಯ ಮೊದಲ ಭೇಟಿ
ಭಾರತಕ್ಕೆ ಜಪಾನ್ ದೇಶದ ಪ್ರಧಾನಿಯ ಮೊದಲ ಭೇಟಿ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ

ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ

ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ

ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್

ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್

ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು