- TV9 Kannada Photo gallery Cricket photos Abhishek Sharma Smashes World Record: Fastest to 100 T20I Sixes in India vs England
IND vs ENG: ಕಡಿಮೆ ಎಸೆತಗಳಲ್ಲಿ 100 ಸಿಕ್ಸರ್; ವಿಶ್ವದಾಖಲೆ ಬರೆದ ಅಭಿಷೇಕ್ ಶರ್ಮಾ
Abhishek Sharma Smashes World Record: ಅಭಿಷೇಕ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್‌ನಿಂದ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅಂತರರಾಷ್ಟ್ರೀಯ ಟಿ20ಯಲ್ಲಿ ಕೇವಲ 785 ಎಸೆತಗಳಲ್ಲಿ 100 ಸಿಕ್ಸರ್‌ಗಳನ್ನು ಸಿಡಿಸಿ ಈ ಸಾಧನೆ ಮಾಡಿದ ಅತಿ ವೇಗದ ಆಟಗಾರರಾಗಿದ್ದಾರೆ. ಇವರು ವೆಸ್ಟ್ ಇಂಡೀಸ್‌ನ ಎವಿನ್ ಲೂಯಿಸ್ ಮತ್ತು ನ್ಯೂಜಿಲೆಂಡ್‌ನ ಫಿನ್ ಅಲೆನ್ ಅವರನ್ನು ಹಿಂದಿಕ್ಕಿ, 100 ಸಿಕ್ಸರ್ ಬಾರಿಸಿದ ಐದನೇ ಭಾರತೀಯ ಬ್ಯಾಟ್ಸ್‌ಮನ್ ಆಗಿದ್ದಾರೆ.
Updated on: Jul 01, 2026 | 11:19 PM

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 4 ಭರ್ಜರಿ ಸಿಕ್ಸರ್‌ಗಳನ್ನು ಬಾರಿಸಿದ ಅಭಿಷೇಕ್ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಸಿಕ್ಸರ್‌ಗಳ ಶತಕ ಪೂರೈಸಿದರು (PC-BCCI).

ಈ ಪಂದ್ಯದಲ್ಲಿ 24 ಎಸೆತಗಳನ್ನು ಎದುರಿಸಿದ ಅಭಿಷೇಕ್ 6 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಹಿತ 59 ರನ್ ಬಾರಿಸಿ ಔಟಾದರು. ತಮ್ಮ ಇನ್ನಿಂಗ್ಸ್ನಲ್ಲಿ 4 ಸಿಕ್ಸರ್‌ಗಳನ್ನು ಬಾರಿಸಿದ ಅಭಿಷೇಕ್, ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ (ಪೂರ್ಣ ಸದಸ್ಯ ತಂಡಗಳಲ್ಲಿ) ಕಡಿಮೆ ಎಸೆತಗಳಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ (PC-BCCI).

ಈ ಸಾಧನೆಯ ಮೂಲಕ ಅಭಿಷೇಕ್, ವೆಸ್ಟ್ ಇಂಡೀಸ್‌ನ ಎವಿನ್ ಲೂಯಿಸ್ ಮತ್ತು ನ್ಯೂಜಿಲೆಂಡ್‌ನ ಫಿನ್ ಅಲೆನ್‌ರಂತಹ ಬ್ಯಾಟ್ಸ್‌ಮನ್‌ಗಳನ್ನು ಹಿಂದಿಕ್ಕಿದ್ದಾರೆ. ಅಭಿಷೇಕ್ ಕೇವಲ 785 ಎಸೆತಗಳಲ್ಲಿ 100 ಸಿಕ್ಸರ್‌ಗಳ ಗಡಿ ದಾಟಿದರೆ, ಲೂಯಿಸ್ 789 ಎಸೆತಗಳು ಹಾಗೂ ಫಿನ್ ಅಲೆನ್ 871 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು (PC-PTI).

ಅಭಿಷೇಕ್ ಹೊರತಾಗಿ ಈ ಪಟ್ಟಿಯಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿರುವ ಸೂರ್ಯಕುಮಾರ್ 1007 ಎಸೆತಗಳಲ್ಲಿ 100 ಸಿಕ್ಸರ್‌ಗಳ ಗಡಿ ದಾಟಿದ್ದರು. ಉಳಿದಂತೆ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಟಿಮ್ ಡೇವಿಡ್ (931) ಇದ್ದರೆ, ಐದನೇ ಸ್ಥಾನದಲ್ಲಿ ನ್ಯೂಜಿಲೆಂಡ್‌ನ ಕಾಲಿನ್ ಮುನ್ರೊ (963) ಇದ್ದಾರೆ (PC-PTI).

ಇದರ ಜೊತೆಗೆ ಅಭಿಷೇಕ್ ಶರ್ಮಾ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 100 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಐದನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾರತೀಯ ಬ್ಯಾಟ್ಸ್‌ಮನ್‌ಗಳಲ್ಲಿ, ರೋಹಿತ್ ಶರ್ಮಾ (205), ಸೂರ್ಯಕುಮಾರ್ ಯಾದವ್ (179), ಹಾರ್ದಿಕ್ ಪಾಂಡ್ಯ (126) ಮತ್ತು ವಿರಾಟ್ ಕೊಹ್ಲಿ (124) ಈ ಸಾಧನೆಯನ್ನು ಅವರಿಗಿಂತ ಮೊದಲು ಮಾಡಿದ್ದಾರೆ (PC-PTI).




