AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಅತಿ ಕಡಿಮೆ ಎಸೆತಗಳಲ್ಲಿ ಸಾವಿರ ರನ್; ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

Abhishek Sharma T20 record: ಅಭಿಷೇಕ್ ಶರ್ಮಾ ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 1,000 ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಆಗಿದ್ದಾರೆ. 528 ಎಸೆತಗಳಲ್ಲಿ ಈ ಸಾಧನೆ ಮಾಡಿದ ಅವರು ಟಿಮ್ ಡೇವಿಡ್ ಅವರನ್ನು ಹಿಂದಿಕ್ಕಿದರು. ಆದರೆ ವಿರಾಟ್ ಕೊಹ್ಲಿಗಿಂತ ಒಂದು ಇನ್ನಿಂಗ್ಸ್ ಹೆಚ್ಚಿಗೆ ಆಡಿದರು. ಈ ಅದ್ಭುತ ಸಾಧನೆ ಭಾರತಕ್ಕೆ ಹೆಮ್ಮೆ ತಂದಿದೆ.

ಪೃಥ್ವಿಶಂಕರ
|

Updated on: Nov 08, 2025 | 3:52 PM

Share
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 11 ರನ್ ಕಲೆಹಾಕುವ ಮೂಲಕ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 1,000 ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

1 / 5
ಈ ಮೂಲಕ ಅಭಿಷೇಕ್ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಟಿಮ್ ಡೇವಿಡ್ ಅವರನ್ನು ಹಿಂದಿಕ್ಕಿದ್ದಾರೆ. ಆದಾಗ್ಯೂ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿಯುವಲ್ಲಿ ಅಭಿಷೇಕ್ ವಿಫಲರಾದರು. ಇದರ ಜೊತೆಗೆ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತಿ ವೇಗವಾಗಿ 1,000 ರನ್ ಪೂರೈಸಿದ ವಿಶ್ವದ ಐದನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

2 / 5
ಅಭಿಷೇಕ್ ಶರ್ಮಾ 528 ಎಸೆತಗಳಲ್ಲಿ 1000 ಅಂತರರಾಷ್ಟ್ರೀಯ ಟಿ20 ರನ್ ಪೂರೈಸಿದರು. ಇದೀಗ ಈ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಾರಿರುವ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಟಿಮ್ ಡೇವಿಡ್ 569 ಎಸೆತಗಳಲ್ಲಿ 1000 ರನ್ ಪೂರೈಸಿದ್ದರು. ಮೂರನೇ ಸ್ಥಾನದಲ್ಲಿರುವ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ 573 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ.

3 / 5
ಅಭಿಷೇಕ್ ಶರ್ಮಾ ಕೇವಲ 28 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದು, ಈ ಸಾಧನೆ ಮಾಡಿದ ಭಾರತೀಯರಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 27 ಇನ್ನಿಂಗ್ಸ್‌ಗಳಲ್ಲಿ 1,000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಕೆಎಲ್ ರಾಹುಲ್ 29 ಇನ್ನಿಂಗ್ಸ್‌ಗಳಲ್ಲಿ 1,000 ರನ್‌ ಕಲೆಹಾಕುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.

4 / 5
ಹಾಗೆಯೇ ಭಾರತ ಟಿ20ತಂಡದ ನಾಯಕ ಸೂರ್ಯಕುಮಾರ್ ಯಾದವ್ 31 ಇನ್ನಿಂಗ್ಸ್‌ಗಳಲ್ಲಿ 1,000 ರನ್‌ಗಳನ್ನು ಪೂರೈಸಿದ್ದು ನಾಲ್ಕನೇ ಸ್ಥಾನದಲ್ಲಿದ್ದಾರೆ. ಮಾಜಿ ನಾಯಕ ರೋಹಿತ್ ಶರ್ಮಾ 40 ಇನ್ನಿಂಗ್ಸ್‌ಗಳಲ್ಲಿ 1,000 ರನ್‌ಗಳನ್ನು ಪೂರೈಸಿದ್ದರು.

5 / 5