AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಗುರು ಯುವರಾಜ್ ದಾಖಲೆ ಮುರಿದು ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

Abhishek Sharma Shatters Records: ಅಭಿಷೇಕ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿ ದಾಖಲೆ ಸೃಷ್ಟಿಸಿದ್ದಾರೆ. ಕೇವಲ 22 ಎಸೆತಗಳಲ್ಲಿ ಅರ್ಧಶತಕ ಗಳಿಸಿ, ನ್ಯೂಜಿಲೆಂಡ್ ವಿರುದ್ಧ ಅತಿ ವೇಗದ ಭಾರತೀಯರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರ ಜೊತೆಗೆ ಯುವರಾಜ್ ಸಿಂಗ್ ಅವರ T20I ಸಿಕ್ಸರ್ ದಾಖಲೆ ಮುರಿದು, 25 ಎಸೆತಗಳಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಬಾರಿಸಿದ ವಿಶ್ವ ದಾಖಲೆ ನಿರ್ಮಿಸಿ ಗಮನ ಸೆಳೆದಿದ್ದಾರೆ. ಅವರ 84 ರನ್ ಇನ್ನಿಂಗ್ಸ್ ತಂಡಕ್ಕೆ ಬಲ ನೀಡಿತು.

ಪೃಥ್ವಿಶಂಕರ
|

Updated on: Jan 21, 2026 | 8:37 PM

Share
ಟೀಂ ಇಂಡಿಯಾದ ಸ್ಫೋಟಕ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 2026 ರ ವರ್ಷವನ್ನು ಅಬ್ಬರದಿಂದ ಆರಂಭಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆರಂಭಿಕನಾಗಿ ಅಬ್ಬರದ ಇನ್ನಿಂಗ್ಸ್ ಆಡಿದ ಅಭಿಷೇಕ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟಿದಲ್ಲದೆ ಸ್ಫೋಟಕ ಅರ್ಧಶತಕವನ್ನು ಬಾರಿಸಿದ್ದಾರೆ. ಇದು ಈ ವರ್ಷದಲ್ಲಿ ಅಭಿಷೇಕ್ ಅವರ ಮೊದಲ ಅರ್ಧಶತಕವಾಗಿದೆ.

1 / 6
ನಾಗ್ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಹೊಡಿಬಡಿ ಆಟವನ್ನಾಡಿದ ಅಭಿಷೇಕ್ ಕೇವಲ 22 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳ ಸಹಿತ ಅರ್ಧಶತಕ ಬಾರಿಸಿದರು. ಇದರೊಂದಿಗೆ, ಅಭಿಷೇಕ್ ಶರ್ಮಾ ಹಲವಾರು ದಾಖಲೆಗಳನ್ನು ಮುರಿದರು.

2 / 6
ಈ ಅಬ್ಬರದ ಇನ್ನಿಂಗ್ಸ್‌ನೊಂದಿಗೆ ಅಭಿಷೇಕ್ ಶರ್ಮಾ ನ್ಯೂಜಿಲೆಂಡ್ ವಿರುದ್ಧ ಅತಿ ವೇಗದ ಟಿ20 ಅರ್ಧಶತಕ ಬಾರಿಸಿದ ಭಾರತೀಯನೆಂಬ ದಾಖಲೆಯನ್ನು ನಿರ್ಮಿಸಿದರು. ಇದರ ಜೊತೆಗೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿ ತನ್ನ ಗುರು ಯುವರಾಜ್ ಸಿಂಗ್ ಅವರ ದಾಖಲೆಯನ್ನು ಮುರಿದರು.

3 / 6
ಯುವರಾಜ್ ಸಿಂಗ್ ತಮ್ಮ ಇಡೀ ಅಂತಾರಾಷ್ಟ್ರೀಯ ಟಿ20 ವೃತ್ತಿಜೀವನದಲ್ಲಿ 73 ಸಿಕ್ಸರ್‌ಗಳನ್ನು ಬಾರಿಸಿದ್ದರು. ಆದರೆ ಈ ಪಂದ್ಯದಲ್ಲಿ ಅಭಿಷೇಕ್ ಎರಡು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಈ ದಾಖಲೆಯನ್ನು ಮೀರಿಸಿದರು. ಈ ಪಂದ್ಯದಲ್ಲಿ ಅಭಿಷೇಕ್ ಒಟ್ಟು 35 ಎಸೆತಗಳನ್ನು ಆಡಿ ಐದು ಬೌಂಡರಿಗಳು ಮತ್ತು ಎಂಟು ಸಿಕ್ಸರ್‌ಗಳನ್ನು ಒಳಗೊಂಡಂತೆ 240.00 ಸ್ಟ್ರೈಕ್ ರೇಟ್‌ನಲ್ಲಿ 84 ರನ್ ಕಲೆಹಾಕಿದರು.

4 / 6
ಈ ಅರ್ಧಶತಕದೊಂದಿಗೆ ಅಭಿಷೇಕ್ ಶರ್ಮಾ ತಮ್ಮ ಅಂತಾರಾಷ್ಟ್ರೀಯ ಟಿ20 ವೃತ್ತಿಜೀವನದಲ್ಲಿ ಎಂಟನೇ ಬಾರಿಗೆ 25 ಎಸೆತಗಳಲ್ಲಿ ಅಥವಾ ಅದಕ್ಕಿಂತ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಗಳಿಸುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಮೂಲಕ ಫಿಲ್ ಸಾಲ್ಟ್, ಸೂರ್ಯಕುಮಾರ್ ಯಾದವ್ ಮತ್ತು ಎವಿನ್ ಲೂಯಿಸ್‌ರಂತಹ ಸ್ಟಾರ್ ಬ್ಯಾಟ್ಸ್‌ಮನ್‌ಗಳನ್ನು ಹಿಂದಿಕ್ಕಿದ್ದಾರೆ.

5 / 6
ಫಿಲ್ ಸಾಲ್ಟ್, ಸೂರ್ಯಕುಮಾರ್ ಯಾದವ್ ಮತ್ತು ಎವಿನ್ ಲೂಯಿಸ್‌ ತಲಾ 25 ಎಸೆತಗಳಲ್ಲಿ ಅಥವಾ ಅದಕ್ಕಿಂತ ಕಡಿಮೆ ಎಸೆತಗಳಲ್ಲಿ ಏಳು ಬಾರಿ ಅಂತಾರಾಷ್ಟ್ರೀಯ ಟಿ20 ಅರ್ಧಶತಕ ಬಾರಿಸಿದ್ದಾರೆ. ಇದೀಗ ಅಭಿಷೇಕ್ ಶರ್ಮಾ ಈಗ ಎಲ್ಲರನ್ನೂ ಹಿಂದಿಕ್ಕಿದ್ದು, ಕೇವಲ 34 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ.

6 / 6