AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವರ್ಷದಲ್ಲಿ ಸಿಕ್ಸರ್‌ಗಳ ಶತಕ; ಹೊಸ ಇತಿಹಾಸ ಸೃಷ್ಟಿಸಿದ ಅಭಿಷೇಕ್ ಶರ್ಮಾ

Abhishek Sharma T20 sixes record: ಅಭಿಷೇಕ್ ಶರ್ಮಾ 2025 ರಲ್ಲಿ ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಒಂದೇ ಕ್ಯಾಲೆಂಡರ್ ವರ್ಷದಲ್ಲಿ 100ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಐಪಿಎಲ್, ಅಂತರರಾಷ್ಟ್ರೀಯ ಪಂದ್ಯಗಳು ಮತ್ತು ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಸೇರಿದಂತೆ ಕೇವಲ 36 ಇನ್ನಿಂಗ್ಸ್‌ಗಳಲ್ಲಿ 101 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಅಭಿಷೇಕ್ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದ್ದಾರೆ.

ಪೃಥ್ವಿಶಂಕರ
|

Updated on: Dec 06, 2025 | 9:41 PM

Share
2024 ರ ಐಪಿಎಲ್​ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ಸುದ್ದಿ ಮಾಡಿದ್ದ ಅಭಿಷೇಕ್ ಶರ್ಮಾ ತಮ್ಮ ಹೊಡಿಬಡಿ ಆಟದ ಮೂಲಕವೇ ವಿಶ್ವಾದ್ಯಂತ ಮನ್ನಣೆ ಪಡೆದಿದ್ದಾರೆ. ಇದರ ಫಲವಾಗಿ ಅವರಿಗೆ ಭಾರತ ಟಿ20 ತಂಡದಲ್ಲೂ ಆರಂಭಿಕನ ಸ್ಥಾನವೂ ಸಿಕ್ಕಿದೆ. ಭಾರತದಲ್ಲಿ ಮಾತ್ರವಲ್ಲದೆ ಅಭಿಷೇಕ್ ದಕ್ಷಿಣ ಆಫ್ರಿಕಾ, ಯುಎಇ ಮತ್ತು ಆಸ್ಟ್ರೇಲಿಯಾದಲ್ಲೂ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದ್ದಾರೆ.

1 / 6
ಈಗಾಗಲೇ ಸಿಡಿಲಬ್ಬರದ ಶತಕ ಮತ್ತು ವೇಗವಾಗಿ 1,000 ಟಿ20 ಅಂತರರಾಷ್ಟ್ರೀಯ ರನ್‌ ಪೂರೈಸಿದ ದಾಖಲೆಗಳನ್ನು ನಿರ್ಮಿಸಿರುವ ಅಭಿಷೇಕ್ ಈಗ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ. 2025 ರಲ್ಲಿ ಟಿ20 ಸ್ವರೂಪದಲ್ಲಿ 100 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಅಭಿಷೇಕ್ ಹೊಸ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

2 / 6
ಡಿಸೆಂಬರ್ 6 ರಂದು ಸರ್ವಿಸಸ್ ವಿರುದ್ಧದ ಸೈಯದ್ ಮುಷ್ತಾಕ್ ಟ್ರೋಫಿ ಪಂದ್ಯದಲ್ಲಿ ಪಂಜಾಬ್ ಪರ ಆರಂಭಿಕನಾಗಿ ಆಡಿದ ಅಭಿಷೇಕ್ ತಮ್ಮ ಇನ್ನಿಂಗ್ಸ್​ನಲ್ಲಿ ಮೂರು ಸಿಕ್ಸರ್‌ಗಳನ್ನು ಬಾರಿಸಿದರು. ಇದರೊಂದಿಗೆ, 2025 ರಲ್ಲಿ ಕೇವಲ 36 ಟಿ20 ಇನ್ನಿಂಗ್ಸ್‌ಗಳಲ್ಲಿ ಅಭಿಷೇಕ್ 101 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

3 / 6
ಈ ವಿಷಯದಲ್ಲಿ ಅಭಿಷೇಕ್ ತಮ್ಮದೇ ಆದ ದಾಖಲೆಯನ್ನು ಮುರಿದಿದ್ದಾರೆ. 2024 ರಲ್ಲಿ ಅವರು ಟಿ20 ಕ್ರಿಕೆಟ್‌ನಲ್ಲಿ ಒಟ್ಟು 87 ಸಿಕ್ಸರ್‌ಗಳನ್ನು ಬಾರಿಸಿದ್ದರು. ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ 2022 ರಲ್ಲಿ 85 ಸಿಕ್ಸರ್‌ಗಳನ್ನು ಬಾರಿಸಿದ್ದರು.

4 / 6
ವಿಶ್ವ ದಾಖಲೆಯ ವಿಷಯದಲ್ಲಿ, ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟ್ಸ್‌ಮನ್ ನಿಕೋಲಸ್ ಪೂರನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. 2024 ರಲ್ಲಿ ಪೂರನ್ ಟಿ20 ಕ್ರಿಕೆಟ್‌ನಲ್ಲಿ ಒಟ್ಟು 170 ಸಿಕ್ಸರ್‌ಗಳನ್ನು ಬಾರಿಸಿದ್ದರು. ಏತನ್ಮಧ್ಯೆ, ವೆಸ್ಟ್ ಇಂಡೀಸ್‌ನ ದಿಗ್ಗಜ ಕ್ರಿಸ್ ಗೇಲ್ ಒಂದು ವರ್ಷದಲ್ಲಿ 100 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಸಾಧನೆಯನ್ನು 6 ಬಾರಿ ಮಾಡಿದ್ದಾರೆ.

5 / 6
ಅಭಿಷೇಕ್ ಅವರ ಸಿಕ್ಸರ್‌ಗಳ ಬಗ್ಗೆ ಹೇಳುವುದಾದರೆ, ಈ ವರ್ಷ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 47 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಅಭಿಷೇಕ್ ಕೇವಲ 17 ಇನ್ನಿಂಗ್ಸ್‌ಗಳಲ್ಲಿ 47 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದಲ್ಲದೆ, ಐಪಿಎಲ್ 2025 ರಲ್ಲಿ, ಅವರು 14 ಇನ್ನಿಂಗ್ಸ್‌ಗಳಲ್ಲಿ 28 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಹೀಗಾಗಿ ಅಂತರರಾಷ್ಟ್ರೀಯ ಟಿ20 ಮತ್ತು ಐಪಿಎಲ್‌ನಲ್ಲಿ 75 ಸಿಕ್ಸರ್‌ಗಳನ್ನು ಬಾರಿಸಿದ್ದ ಅಭಿಷೇಕ್, ಇದೀಗ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ 26 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

6 / 6
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ