AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NED: ಸತತ ಮೂರನೇ ಪಂದ್ಯದಲ್ಲೂ ಸೊನ್ನೆ ಸುತ್ತಿದ ಅಭಿಷೇಕ್ ಶರ್ಮಾ

Abhishek Sharma's T20 WC Nightmare: ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದಾರೆ. ಸತತ ಮೂರು ಪಂದ್ಯಗಳಲ್ಲಿ ಡಕ್ ಔಟ್ ಆಗಿ ಅನಗತ್ಯ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಕಳಪೆ ಶಾಟ್ ಆಯ್ಕೆ ಇವರ ವೈಫಲ್ಯಕ್ಕೆ ಮುಖ್ಯ ಕಾರಣ. ಈ ಪ್ರದರ್ಶನ ತಂಡಕ್ಕೆ ದೊಡ್ಡ ತಲೆನೋವು ತಂದಿದೆ. ಇತ್ತೀಚಿನ 7 ಇನ್ನಿಂಗ್ಸ್‌ಗಳಲ್ಲಿ ಅವರು 5 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

ಪೃಥ್ವಿಶಂಕರ
|

Updated on: Feb 18, 2026 | 8:24 PM

Share
ಟಿ20 ರ್ಯಾಂಕಿಂಗ್​ನಲ್ಲಿ ಪ್ರಸ್ತುತ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯಾದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾಗೆ ಅವರ ಚೊಚ್ಚಲ ಟಿ20 ವಿಶ್ವಕಪ್ ದುಃಸ್ವಪ್ನದಂತೆ ಕಾಡಲಾರಂಭಿಸಿದೆ. ಈ ಪಂದ್ಯಾವಳಿಯಲ್ಲಿ ಇದುವರೆಗೆ 3 ಪಂದ್ಯಗಳನ್ನಾಡಿರುವ ಅಭಿಷೇಕ್​ಗೆ ಖಾತೆ ತೆರೆಯಲು ಸಾಧ್ಯವಾಗಿಲ್ಲ. ಇದು ತಂಡಕ್ಕೆ ದೊಡ್ಡ ತಲೆನೋವು ನೀಡಲಾರಂಬಿಸಿದೆ.

1 / 6
ವಾಸ್ತವವಾಗಿ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಬ್ಯಾಟಿಂಗ್​ನಲ್ಲಿ ರನ್ ಮಳೆ ಹರಿಸುತ್ತಿದ್ದ ಅಭಿಷೇಕ್ ಅವರಿಂದ ಟಿ20 ವಿಶ್ವಕಪ್​ನಲ್ಲೂ ಅದೇ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ಅಭಿಷೇಕ್​ಗೆ ನಿರೀಕ್ಷೆಯನ್ನು ಪೂರೈಸುವುದರಿಲಿ, ತನ್ನ ರನ್​ ಖಾತೆಯನ್ನು ತೆರೆಯಲು ಸಾಧ್ಯವಾಗುತ್ತಿಲ್ಲ.

2 / 6
ಮೇಲೆ ಹೇಳಿದಂತೆ ತಮ್ಮ ಮೊದಲ ಟಿ20 ವಿಶ್ವಕಪ್‌ನಲ್ಲಿ ಅಭಿಷೇಕ್ ಶರ್ಮಾ ಸತತ ಮೂರು ಪಂದ್ಯಗಳಲ್ಲಿ ಮೂರು ಬಾರಿ ಡಕ್ ಔಟ್ ಆಗುವ ಮೂಲಕ ಬೇಡದ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಸತತ ಮೂರು ಪಂದ್ಯಗಳಲ್ಲಿ ಡಕ್ ಔಟ್ ಆದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಯುಎಸ್ಎ, ನಂತರ ಪಾಕಿಸ್ತಾನ ಮತ್ತು ಈಗ ನೆದರ್‌ಲ್ಯಾಂಡ್ಸ್ ವಿರುದ್ಧ ಅಭಿಷೇಕ್ ಡಕ್ ಔಟ್ ಆಗಿದ್ದಾರೆ.

3 / 6
ಒಂದು ಕಾಲದಲ್ಲಿ ಸಿಕ್ಸರ್‌ಗಳ ಸುರಿಮಳೆಗೆ ಹೆಸರುವಾಸಿಯಾಗಿದ್ದ ಅಭಿಷೇಕ್ ಶರ್ಮಾ ಈಗ ಒಂದೇ ಒಂದು ರನ್ ಗಳಿಸಲು ಪರದಾಡುತ್ತಿದ್ದಾರೆ. ಅಭಿಷೇಕ್ ಅವರ ಈ ಡಕ್ ಔಟ್ ಸರಣಿಗೆ ಕಾರಣ ಅವರ ಕಳಪೆ ಫಾರ್ಮ್​ ಅಲ್ಲ. ಬದಲಿಗೆ ಅವರ ಕಳಪೆ ಶಾಟ್ ಆಯ್ಕೆ. ಎದುರಿಸಿದ ಮೊದಲ ಎಸೆತವನ್ನೇ ಬೌಂಡರಿಗಟ್ಟುವ ಯೋಚನೆಯಲ್ಲಿ ಬ್ಯಾಟ್ ಬೀಸುವ ಅಭಿಷೇಕ್ ಸೊನ್ನಗೆ ವಿಕೆಟ್ ಒಪ್ಪಿಸುತ್ತಿದ್ದಾರೆ.

4 / 6
ಅಭಿಷೇಕ್ ಶರ್ಮಾ ಅವರ ಈ ಡಗೌಟ್ ಸರಣಿ ಟಿ20 ವಿಶ್ವಕಪ್​ಗೆ ಮಾತ್ರ ಸೀಮಿತವಾಗಿಲ್ಲ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅವರು ಎರಡು ಬಾರಿ ಶೂನ್ಯಕ್ಕೆ ಔಟಾಗಿದ್ದರು. ಇದರರ್ಥ ಕಳೆದ ಏಳು ಇನ್ನಿಂಗ್ಸ್‌ಗಳಲ್ಲಿ ಅಭಿಷೇಕ್ ಐದು ಬಾರಿ ಸೊನ್ನೆಗೆ ಔಟಾಗಿದ್ದಾರೆ. ಇದು ಹೀಗೆ ಮುಂದುವರಿದರೆ, ಇದು ಟೀಂ ಇಂಡಿಯಾವನ್ನು ಸಂಕಷ್ಟಕ್ಕೆ ಸಿಲುಕಿಸುವುದಲ್ಲದೆ, ಅಭಿಷೇಕ್‌ಗೆ ಸಮಸ್ಯೆಗಳನ್ನು ಸೃಷ್ಟಿಸುತ್ತದೆ.

5 / 6
ಅಭಿಷೇಕ್ ಶರ್ಮಾ 38 ಟಿ20 ಇನ್ನಿಂಗ್ಸ್‌ಗಳಲ್ಲಿ ಆರು ಬಾರಿ 0 ಕ್ಕೆ ಔಟಾದ ಬೇಡದ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ಈ ಮೂಲಕ 54 ಇನ್ನಿಂಗ್ಸ್‌ಗಳಲ್ಲಿ ಐದು ಬಾರಿ ಸೊನ್ನಗೆ ಔಟಾಗಿರುವ ಕೆಎಲ್ ರಾಹುಲ್ ಅವರನ್ನು ಅಭಿಷೇಕ್ ಹಿಂದಿಕ್ಕಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರೋಹಿತ್ ಶರ್ಮಾ ಇದುವರೆಗೆ ಆಡಿರುವ 124 ಟಿ20 ಇನ್ನಿಂಗ್ಸ್​ನಲ್ಲಿ 10 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

6 / 6