AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: 18 ಎಸೆತಗಳಲ್ಲಿ ಅರ್ಧಶತಕ; ಫೈನಲ್‌ನಲ್ಲಿ ವಿಶ್ವ ದಾಖಲೆ ಬರೆದ ಅಭಿಷೇಕ್ ಶರ್ಮಾ

Abhishek Sharma's T20 WC Final Blitz: ಅಭಿಷೇಕ್ ಶರ್ಮಾ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮೌನ ಮುರಿದು ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ನ್ಯೂಜಿಲೆಂಡ್ ವಿರುದ್ಧ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕದ ದಾಖಲೆ ಸೃಷ್ಟಿಸಿದರು. ಸಂಜು ಸ್ಯಾಮ್ಸನ್ ಜೊತೆಗೂಡಿ ಪವರ್‌ಪ್ಲೇನಲ್ಲಿ ವಿಶ್ವ ದಾಖಲೆಯ ಜೊತೆಯಾಟವಾಡಿ, ಭಾರತದ ಗೆಲುವಿಗೆ ಭದ್ರ ಬುನಾದಿ ಹಾಕಿದರು. ಅವರ ಈ ಪ್ರದರ್ಶನ ಇಡೀ ಟೂರ್ನಿಯ ನಿರಾಸೆಗೆ ಪೂರ್ಣವಿರಾಮ ಇಟ್ಟಿತು.

ಪೃಥ್ವಿಶಂಕರ
|

Updated on: Mar 08, 2026 | 8:35 PM

Share
ಇಡೀ ಟಿ20 ವಿಶ್ವಕಪ್​ನಲ್ಲಿ ಮೌನಕ್ಕೆ ಶರಣಾಗಿದ್ದ ಅಭಿಷೇಕ್ ಶರ್ಮಾ ಅವರ ಬ್ಯಾಟ್ ಕೊನೆಗೂ ಸದ್ದು ಮಾಡಿದೆ. ಲೀಗ್ ಹಂತದಿಂದ ಹಿಡಿದು ಫೈನಲ್​ವರೆಗೂ ಅಭಿಷೇಕ್ ಶರ್ಮಾ ಬ್ಯಾಟ್​ನಿಂದ ಸಿಡಿದಿದ್ದು, ಕೇವಲ ಒಂದೇ ಒಂದು ಅರ್ಧಶತಕ ಮಾತ್ರ. ಹೀಗಾಗಿ ಅಭಿಷೇಕ್ ಮೇಲೆ ಇಡೀ ಭಾರತದ ಅಭಿಮಾನಿಗಳು ಅಸಮಾಧಾನಗೊಂಡಿದ್ದರು. ಹೀಗಿದ್ದರೂ ಅಭಿಷೇಕ್​ಗೆ ಫೈನಲ್ ಪಂದ್ಯದಲ್ಲಿ ಆಡುವ ಅವಕಾಶ ಸಿಕ್ಕಿತು.

1 / 5
ನಾಯಕ ಹಾಗೂ ಆಯ್ಕೆ ಮಂಡಳಿಯ ನಂಬಿಕೆ ಉಳಿಸಿಕೊಳ್ಳಲು ಕೊನೆಯ ಅವಕಾಶ ಪಡೆದಿದ್ದ ಅಭಿಷೇಕ್ ಶರ್ಮಾ ಅವಶ್ಯಕ ಸಮಯದಲ್ಲಿ ಲಯ ಕಂಡುಕೊಂಡಿದ್ದಾರೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಫೈನಲ್‌ನಲ್ಲಿ ಸಂಜು ಸ್ಯಾಮ್ಸನ್​ ಜೊತೆಗೆ ಒಂದೊಳ್ಳೆ ಜೊತೆಯಾಟ ಕಟ್ಟಿದ ಅಭಿಷೇಕ್ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದರಲ್ಲಿ 3 ಸಿಕ್ಸರ್‌ಗಳು ಮತ್ತು 6 ಬೌಂಡರಿಗಳು ಸೇರಿದ್ದವು.

2 / 5
ಈ ಅರ್ಧಶತಕದ ಮೂಲಕ ಅಭಿಷೇಕ್ ಶರ್ಮಾ ಪ್ರಮುಖ ದಾಖಲೆಯನ್ನು ಸೃಷ್ಟಿಸಿದರು. ಈ ಟಿ20 ವಿಶ್ವಕಪ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಕೇವಲ 18 ಎಸೆತಗಳಲ್ಲಿ ಅರ್ಧಶತಕ ಗಳಿಸುವ ಮೂಲಕ ಅವರು ಐಡೆನ್ ಮಾರ್ಕ್ರಾಮ್ ಅವರ ದಾಖಲೆಯನ್ನು ಮುರಿದರು. ಹಾಗೆಯೇ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿವೇಗದ ಅರ್ಧಶತಕ ಸಿಡಿಸಿದ ಭಾರತದ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

3 / 5
ಟಿ20 ವಿಶ್ವಕಪ್‌ನ ಪವರ್‌ಪ್ಲೇನಲ್ಲಿ 51 ರನ್ ಬಾರಿಸಿದ ಅಭಿಷೇಕ್ ಶರ್ಮಾ ಈ ಮೂಲಕ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದರು. ರೋಹಿತ್ ಶರ್ಮಾ 2024 ರ ಟಿ20 ವಿಶ್ವಕಪ್‌ನಲ್ಲಿ ಪವರ್‌ಪ್ಲೇನಲ್ಲಿ 51 ರನ್ ಬಾರಿಸಿದ್ದರು. ಇದೀಗ ಅಭಿಷೇಕ್ ಕೂಡ ಈ ಸಾಧನೆ ಮಾಡಿದ್ದಾರೆ. 2021 ರಲ್ಲಿ, ಕೆಎಲ್ ರಾಹುಲ್ ಪವರ್‌ಪ್ಲೇಯಲ್ಲಿ 50 ರನ್ ಬಾರಿಸಿದ್ದರು. ಹಾಗೆಯೇ ಈ ಟಿ20 ವಿಶ್ವಕಪ್‌ನಲ್ಲಿ ಇಶಾನ್ ಕಿಶನ್ ಕೂಡ ಪವರ್‌ಪ್ಲೇನಲ್ಲಿ 50 ರನ್ ಕಲೆಹಾಕಿದ್ದರು.

4 / 5
ಅಭಿಷೇಕ್ ಶರ್ಮಾ ಮತ್ತು ಸಂಜು ಸ್ಯಾಮ್ಸನ್ ಟಿ20 ವಿಶ್ವಕಪ್ ಫೈನಲ್‌ನಲ್ಲಿ 98 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಈ ಮೂಲಕ ಟಿ20 ವಿಶ್ವಕಪ್ ಪವರ್‌ಪ್ಲೇನಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವ ದಾಖಲೆಯನ್ನು ನಿರ್ಮಿಸಿದರು. ಈ ಇಬ್ಬರು ಒಟ್ಟಾಗಿ ಪವರ್‌ಪ್ಲೇನಲ್ಲಿ ವಿಕೆಟ್ ಕಳೆದುಕೊಳ್ಳದೆ 92 ರನ್ ಕಲೆಹಾಕಿದರು. ಇದಕ್ಕೂ ಮೊದಲು, ವೆಸ್ಟ್ ಇಂಡೀಸ್ ಕಳೆದ ಟಿ20 ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಪವರ್‌ಪ್ಲೇನಲ್ಲಿ 92 ರನ್ ಗಳಿಸಿತ್ತು, ಆದರೆ ಒಂದು ವಿಕೆಟ್ ಕಳೆದುಕೊಂಡಿತ್ತು.

5 / 5
Follow Us
ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಬೆಂಗಳೂರಿನಲ್ಲಿ ಹೋಟೆಲ್ ಬಂದ್​!

LPG ಸಿಲಿಂಡರ್‌ ಕೊರತೆ: ಹೋಟೆಲ್ ಮುಚ್ಚುವುದೇ ಕೊನೆಯ ದಾರಿ

ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ

ಪ್ರೇಯಸಿಯೊಂದಿಗೆ ಸ್ಟೇಜ್ ಮೇಲೆ ಮಲಗಿದ ಹಾರ್ದಿಕ್ ಪಾಂಡ್ಯ

ಬ್ಯಾಡಗಿ ಮೆಣಸಿನ ರಫ್ತಿಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ

ಮದುವೆ ಮಾಡಿಕೊಂಡು ನೇರವಾಗಿ ದರ್ಶನ್ ಮನೆ ಮುಂದೆ ಬಂದ ನವ ಜೋಡಿ

ಡಿಕೆ ಶಿವಕುಮಾರ್ ಶಾಕಿಂಗ್ ಮಾತು: ಮತ್ತೆ ಜೋರಾದ ಅಧಿಕಾರ ಹಂಚಿಕೆ ಬಿಕ್ಕಟ್ಟು

‘ಬಾಸ್’ ಚಿತ್ರದಲ್ಲಿ ರೇಣುಕಾಸ್ವಾಮಿ ಸಾವಿನ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ

ಮೈದಾನದಲ್ಲಿ ಪತ್ನಿಗೆ ಲಿಪ್‌ಲಾಕ್ ಮಾಡಿದ ಕ್ರಿಕೆಟಿಗ

ದಳಪತಿ ವಿಜಯ್​​ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ