AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರಂಭದಲ್ಲೇ ಆರು.. ವಿಶ್ವ ದಾಖಲೆ ಮುರಿದ ಅಭಿಷೇಕ್ ಶರ್ಮಾ..!

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಅಭಿಷೇಕ್ ಶರ್ಮಾ ದೊಡ್ಡ ಮೊತ್ತ ಗಳಿಸಲು ವಿಫಲರಾದರೂ, ಪ್ರಮುಖ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನ ಮೊದಲ ಓವರ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು (14) ಬಾರಿಸಿದ ಆಟಗಾರರಾಗಿ ಪಾಲ್ ಸ್ಟಿರ್ಲಿಂಗ್ ಅವರ ದಾಖಲೆ ಮುರಿದರು. ಇದು ಅವರ ಅಂತರರಾಷ್ಟ್ರೀಯ ವೃತ್ತಿಜೀವನದ ಗಮನಾರ್ಹ ಸಾಧನೆಯಾಗಿದೆ. ಸರಣಿಯಲ್ಲಿ ಅವರ ಪ್ರದರ್ಶನ ಮಿಶ್ರಣವಾಗಿದೆ.

ಪೃಥ್ವಿಶಂಕರ
|

Updated on: Oct 09, 2026 | 8:16 PM

Share
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಆರಂಭಿಕ ಅಭಿಷೇಕ್ ಶರ್ಮಾಗೆ ಅಬ್ಬರಿಸಲು ಸಾಧ್ಯವಾಗಿಲ್ಲ. ಏಷ್ಯನ್ ಗೇಮ್ಸ್ ಫೈನಲ್ ಪಂದ್ಯದಲ್ಲಿ ಅಬ್ಬರಿಸಿದ್ದ ಅಭಿಷೇಕ್ ಅದಾದ ಬಳಿಕ ಆರಂಭವಾಗಿರುವ ವಿಂಡೀಸ್ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ದೊಡ್ಡ ಮೊತ್ತ ಕಲೆಹಾಕುವಲ್ಲಿ ಎಡವಿದ್ದಾರೆ(PC-PTI).

1 / 5
ಮೊದಲ ಟಿ20 ಪಂದ್ಯದಲ್ಲಿ 10 ಎಸೆತಗಳನ್ನು ಎದುರಿಸಿದ್ದ ಅಭಿಷೇಕ್ 3 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 21 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ಇಂದು ನಡೆದ ಸರಣಿಯ ಎರಡನೇ ಪಂದ್ಯದಲ್ಲೂ ಅಭಿಷೇಕ್ 12 ಎಸೆತಗಳನ್ನು ಎದುರಿಸಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 20 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು(PC-PTI).

2 / 5
ಅಂದರೆ ಅಭಿಷೇಕ್ ಮೊದಲೆರಡು ಪಂದ್ಯಗಳಲ್ಲಿ ಉತ್ತಮ ಆರಂಭ ಪಡೆದುಕೊಂಡಿದ್ದರೂ ಅದನ್ನು ದೊಡ್ಡ ಮೊತ್ತವನ್ನಾಗಿ ಪರಿವರ್ತಿಸುವಲ್ಲಿ ಎಡವಿದ್ದಾರೆ. ಆದಾಗ್ಯೂ ಈ ಎರಡೂ ಪಂದ್ಯಗಳಲ್ಲೂ ತಲಾ ಒಂದೊಂದು ಸಿಕ್ಸರ್​ಗಳನ್ನು ಬಾರಿಸಿರುವ ಅಭಿಷೇಕ್ ಶರ್ಮಾ ಪ್ರಮುಖ ವಿಶ್ವ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ(PC-PTI).

3 / 5
ಅಭಿಷೇಕ್ ಶರ್ಮಾ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನ ಮೊದಲ ಓವರ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎಂಬ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ. ಅಭಿಷೇಕ್ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ ಮೊದಲ ಓವರ್‌ನಲ್ಲಿ 14 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈ ಮೂಲಕ ಈ ಹಿಂದೆ 13 ಸಿಕ್ಸರ್‌ಗಳನ್ನು ಬಾರಿಸಿದ್ದ ಪಾಲ್ ಸ್ಟಿರ್ಲಿಂಗ್ ಅವರ ದಾಖಲೆಯನ್ನು ಮುರಿದಿದ್ದಾರೆ(PC-PTI).

4 / 5
ಇನ್ನು ಈ ಪಂದ್ಯದಲ್ಲಿ ಅಭಿಷೇಕ್, ಸಂಜು ಸ್ಯಾಮ್ಸನ್ ಜೊತೆಗೂಡಿ ಮೊದಲ ವಿಕೆಟ್​ಗೆ 41 ರನ್​ಗಳ ಜೊತೆಯಾಟ ನೀಡಿದರು. 4 ಓವರ್​ಗಳ ಅಂತ್ಯಕ್ಕೆ ಈ ಜೋಡಿ ಬೇರ್ಪಟ್ಟಿತ್ತು. ಆದಾಗ್ಯೂ ತಂಡದ ಇನ್ನಿಂಗ್ಸ್ ನಿಭಾಯಿಸಿದ ಸಂಜು ಸ್ಯಾಮ್ಸನ್ ಭರ್ಜರಿ ಅರ್ಧಶತಕ ಬಾರಿಸಿ ತಂಡವನ್ನು ಬೃಹತ್ ಸ್ಕೋರ್​ನತ್ತ ಕೊಂಡೊಯ್ದಿದ್ದಾರೆ(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ

‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?

ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!

ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು

ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’

KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?

KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್

ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?

ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ

ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ