
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಆರಂಭಿಕ ಅಭಿಷೇಕ್ ಶರ್ಮಾಗೆ ಅಬ್ಬರಿಸಲು ಸಾಧ್ಯವಾಗಿಲ್ಲ. ಏಷ್ಯನ್ ಗೇಮ್ಸ್ ಫೈನಲ್ ಪಂದ್ಯದಲ್ಲಿ ಅಬ್ಬರಿಸಿದ್ದ ಅಭಿಷೇಕ್ ಅದಾದ ಬಳಿಕ ಆರಂಭವಾಗಿರುವ ವಿಂಡೀಸ್ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ದೊಡ್ಡ ಮೊತ್ತ ಕಲೆಹಾಕುವಲ್ಲಿ ಎಡವಿದ್ದಾರೆ(PC-PTI).
ಮೊದಲ ಟಿ20 ಪಂದ್ಯದಲ್ಲಿ 10 ಎಸೆತಗಳನ್ನು ಎದುರಿಸಿದ್ದ ಅಭಿಷೇಕ್ 3 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 21 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ಇಂದು ನಡೆದ ಸರಣಿಯ ಎರಡನೇ ಪಂದ್ಯದಲ್ಲೂ ಅಭಿಷೇಕ್ 12 ಎಸೆತಗಳನ್ನು ಎದುರಿಸಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 20 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು(PC-PTI).
ಅಂದರೆ ಅಭಿಷೇಕ್ ಮೊದಲೆರಡು ಪಂದ್ಯಗಳಲ್ಲಿ ಉತ್ತಮ ಆರಂಭ ಪಡೆದುಕೊಂಡಿದ್ದರೂ ಅದನ್ನು ದೊಡ್ಡ ಮೊತ್ತವನ್ನಾಗಿ ಪರಿವರ್ತಿಸುವಲ್ಲಿ ಎಡವಿದ್ದಾರೆ. ಆದಾಗ್ಯೂ ಈ ಎರಡೂ ಪಂದ್ಯಗಳಲ್ಲೂ ತಲಾ ಒಂದೊಂದು ಸಿಕ್ಸರ್‌ಗಳನ್ನು ಬಾರಿಸಿರುವ ಅಭಿಷೇಕ್ ಶರ್ಮಾ ಪ್ರಮುಖ ವಿಶ್ವ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ(PC-PTI).
ಅಭಿಷೇಕ್ ಶರ್ಮಾ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನ ಮೊದಲ ಓವರ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎಂಬ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ. ಅಭಿಷೇಕ್ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ ಮೊದಲ ಓವರ್‌ನಲ್ಲಿ 14 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈ ಮೂಲಕ ಈ ಹಿಂದೆ 13 ಸಿಕ್ಸರ್‌ಗಳನ್ನು ಬಾರಿಸಿದ್ದ ಪಾಲ್ ಸ್ಟಿರ್ಲಿಂಗ್ ಅವರ ದಾಖಲೆಯನ್ನು ಮುರಿದಿದ್ದಾರೆ(PC-PTI).
ಇನ್ನು ಈ ಪಂದ್ಯದಲ್ಲಿ ಅಭಿಷೇಕ್, ಸಂಜು ಸ್ಯಾಮ್ಸನ್ ಜೊತೆಗೂಡಿ ಮೊದಲ ವಿಕೆಟ್ಗೆ 41 ರನ್ಗಳ ಜೊತೆಯಾಟ ನೀಡಿದರು. 4 ಓವರ್ಗಳ ಅಂತ್ಯಕ್ಕೆ ಈ ಜೋಡಿ ಬೇರ್ಪಟ್ಟಿತ್ತು. ಆದಾಗ್ಯೂ ತಂಡದ ಇನ್ನಿಂಗ್ಸ್ ನಿಭಾಯಿಸಿದ ಸಂಜು ಸ್ಯಾಮ್ಸನ್ ಭರ್ಜರಿ ಅರ್ಧಶತಕ ಬಾರಿಸಿ ತಂಡವನ್ನು ಬೃಹತ್ ಸ್ಕೋರ್ನತ್ತ ಕೊಂಡೊಯ್ದಿದ್ದಾರೆ(PC-PTI).