ಸಿಕ್ಸರ್‌ಗಳ ಸುನಾಮಿ ಸೃಷ್ಟಿಸಿದ ಅಭಿಷೇಕ್; ಗೇಲ್ ದಾಖಲೆ ಧೂಳೀಪಟ

Updated on: Oct 27, 2026 | 7:33 PM

ನ್ಯೂಜಿಲೆಂಡ್ ವಿರುದ್ಧ ಅಭಿಷೇಕ್ ಶರ್ಮಾ ಭರ್ಜರಿ ಶತಕ ಸಿಡಿಸಿ, 11 ಸಿಕ್ಸರ್‌ಗಳನ್ನು ಬಾರಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. 10+ ಸಿಕ್ಸರ್‌ಗಳನ್ನು ಮೂರು ಬಾರಿ ಬಾರಿಸಿದ ವಿಶ್ವದ ಮೊದಲ ಆಟಗಾರ ಇವರು. ಅಲ್ಲದೆ, ಮೂರು ವೇಗದ ಟಿ20 ಶತಕಗಳು, 20 ಎಸೆತಗಳಿಗಿಂತ ಕಡಿಮೆ ಅವಧಿಯಲ್ಲಿ 9 ಬಾರಿ 50+ ರನ್, ಹಾಗೂ ವಿರಾಟ್ ಕೊಹ್ಲಿ ಅವರ 10 ಟಿ20 ಶತಕಗಳ ದಾಖಲೆಯನ್ನು ಹಿಂದಿಕ್ಕಿದ್ದಾರೆ. ವೈಭವ್ ಜೊತೆಗೂ ದಾಖಲೆಯ ಜೊತೆಯಾಟವಾಡಿದ್ದಾರೆ.

1 / 5
ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಶತಕ ಬಾರಿಸಿದರು. ಅವರ ಇನ್ನಿಂಗ್ಸ್​ನಲ್ಲಿ ಬರೋಬ್ಬರಿ 11 ಸಿಕ್ಸರ್‌ಗಳು ಸೇರಿದ್ದವು. ಅಭಿಷೇಕ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಪಂದ್ಯವೊಂದರ ಇನ್ನಿಂಗ್ಸ್‌ನಲ್ಲಿ 10ಕ್ಕಿಂತ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದು ಇದು ಮೂರನೇ ಬಾರಿ. ಈ ಮೂಲಕ ಮೂರು ಬಾರಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಈ ಹಿಂದೆ ಕ್ರಿಸ್ ಗೇಲ್ ಮತ್ತು ಆರನ್ ಫಿಂಚ್ ತಲಾ ಎರಡು ಬಾರಿ ಈ ಸಾಧನೆ ಮಾಡಿದ್ದರು(PC-PTI).

ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಶತಕ ಬಾರಿಸಿದರು. ಅವರ ಇನ್ನಿಂಗ್ಸ್​ನಲ್ಲಿ ಬರೋಬ್ಬರಿ 11 ಸಿಕ್ಸರ್‌ಗಳು ಸೇರಿದ್ದವು. ಅಭಿಷೇಕ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಪಂದ್ಯವೊಂದರ ಇನ್ನಿಂಗ್ಸ್‌ನಲ್ಲಿ 10ಕ್ಕಿಂತ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದು ಇದು ಮೂರನೇ ಬಾರಿ. ಈ ಮೂಲಕ ಮೂರು ಬಾರಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಈ ಹಿಂದೆ ಕ್ರಿಸ್ ಗೇಲ್ ಮತ್ತು ಆರನ್ ಫಿಂಚ್ ತಲಾ ಎರಡು ಬಾರಿ ಈ ಸಾಧನೆ ಮಾಡಿದ್ದರು(PC-PTI).

2 / 5

ಅಲ್ಲದೆ ಅಭಿಷೇಕ್ ಶರ್ಮಾ ಕೇವಲ 37 ಅಥವಾ ಅದಕ್ಕಿಂತ ಕಡಿಮೆ ಎಸೆತಗಳಲ್ಲಿ ಮೂರು ಅಂತಾರಾಷ್ಟ್ರೀಯ ಟಿ20 ಶತಕ ಸಿಡಿಸಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಭಿಷೇಕ್ ಅಫ್ಘಾನಿಸ್ತಾನ ವಿರುದ್ಧ 30 ಎಸೆತಗಳಲ್ಲಿ, ನ್ಯೂಜಿಲೆಂಡ್ ವಿರುದ್ಧ 35 ಎಸೆತಗಳಲ್ಲಿ ಹಾಗೂ ಇಂಗ್ಲೆಂಡ್ ವಿರುದ್ಧ 37 ಎಸೆತಗಳಲ್ಲಿ ಅವರು ಶತಕ ಪೂರೈಸಿದ್ದಾರೆ(PC-PTI).

3 / 5

ಅಭಿಷೇಕ್ ಶರ್ಮಾ ಮತ್ತು 15 ವರ್ಷದ ವೈಭವ್ ಸೂರ್ಯವಂಶಿ ಕೇವಲ 18.55 ರನ್‌ರೇಟ್‌ನಲ್ಲಿ 100ಕ್ಕೂ ಹೆಚ್ಚು ರನ್‌ಗಳ ಜೊತೆಯಾಟವಾಡಿ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ 2022ರಲ್ಲಿ 18.17 ರನ್‌ರೇಟ್‌ನಲ್ಲಿ 100ಕ್ಕೂ ಹೆಚ್ಚು ರನ್‌ಗಳ ಜೊತೆಯಾಟವಾಡಿದ್ದ ಮೊಯಿನ್ ಅಲಿ ಮತ್ತು ಜಾನಿ ಬೈರ್‌ಸ್ಟೋವ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ(PC-PTI).

4 / 5

ಅಭಿಷೇಕ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 20 ಕ್ಕಿಂತ ಕಡಿಮೆ ಎಸೆತಗಳಲ್ಲಿ ಒಂಬತ್ತು ಬಾರಿ 50+ ರನ್​ಗಳ ಇನ್ನಿಂಗ್ಸ್ ಆಡಿದ್ದಾರೆ. ಈ ಮೂಲಕ ವಿಶ್ವದಾಖಲೆ ಬರೆದಿದ್ದಾರೆ. ಯುವರಾಜ್ ಸಿಂಗ್, ಡೇವಿಡ್ ವಾರ್ನರ್, ಕಾಲಿನ್ ಮನ್ರೋ ಮತ್ತು ಫಿನ್ ಅಲೆನ್ ತಲಾ ಮೂರು ಬಾರಿ ಈ ಸಾಧನೆ ಮಾಡಿದ್ದಾರೆ(PC-PTI).

5 / 5

ಅಭಿಷೇಕ್ ಶರ್ಮಾ ಕೇವಲ 216 ಇನ್ನಿಂಗ್ಸ್‌ಗಳಲ್ಲಿ ತಮ್ಮ 11ನೇ ಅಂತಾರಾಷ್ಟ್ರೀಯ ಟಿ20 ಶತಕ ದಾಖಲಿಸಿದ್ದಾರೆ. ಈ ಮೂಲಕ 10 ಟಿ20 ಶತಕಗಳನ್ನು ಬಾರಿಸಿದ್ದ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಕೊಹ್ಲಿ ತಮ್ಮ 10ನೇ ಟಿ2 ಶತಕ ಪೂರೈಸಲು 413 ಇನ್ನಿಂಗ್ಸ್‌ಗಳನ್ನು ತೆಗೆದುಕೊಂಡಿದ್ದರು(PC-PTI).

Published On - 6:45 pm, Tue, 27 October 26

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us