AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರುಗಾಳಿ ಬ್ಯಾಟಿಂಗ್… ಹೊಸ ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

Abhishek Sharma's Record: ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್​ಗಳ ಸೋಲನುಭವಿಸಿದೆ. ಈ ಸೋಲಿನ ನಡುವೆಯೂ ಭಾರತ ತಂಡದ ಯುವ ಎಡಗೈ ದಾಂಡಿಗ ಅಭಿಷೇಕ್ ಶರ್ಮಾ ಭರ್ಜರಿ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ಅತ್ಯುತ್ತಮ ಸ್ಟ್ರೈಕ್ ರೇಟ್​​ನೊಂದಿಗೆ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Nov 01, 2025 | 7:23 AM

Share
ಟಿ20 ಕ್ರಿಕೆಟ್​ನಲ್ಲಿ ಅಭಿಷೇಕ್ ಶರ್ಮಾ (Abhishek Sharma) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ತನ್ನ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಎಂಬುದು ವಿಶೇಷ. ಮೆಲ್ಬೋರ್ನ್​​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.

1 / 5
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ 37 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 68 ರನ್​ ಚಚ್ಚಿದ್ದರು. ಈ ಸ್ಫೋಟಕ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತೀ ಹೆಚ್ಚು ಸ್ಟ್ರೈಕ್ ರೇಟ್ ಹೊಂದಿರುವ ಬ್ಯಾಟ್ಸ್​​ಮನ್ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಸ್ಟ್ರೈಕ್ ರೇಟ್ ಹೊಂದಿದ ದಾಖಲೆ ಸಾಹಿಲ್ ಚೌಹನ್ ಹೆಸರಿನಲ್ಲಿತ್ತು. ಎಸ್ಟೋನಿಯಾ ದೇಶದ ಪರ ಈವರೆಗೆ 21 ಇನಿಂಗ್ಸ್ ಆಡಿರುವ ಸಾಹಿಲ್ 184.23 ರ ಸ್ಟ್ರೈಕ್ ರೇಟ್​​ನಲ್ಲಿ 479 ರನ್ ಕಲೆಹಾಕಿದ್ದಾರೆ. ಇದೀಗ ಸಾಹಿಲ್ ಬರೆದಿದ್ದ ವಿಶ್ವ ದಾಖಲೆಯನ್ನು ಅಭಿಷೇಕ್ ಶರ್ಮಾ ಮುರಿದಿದ್ದಾರೆ.

3 / 5
ಟೀಮ್ ಇಂಡಿಯಾ ಪರ ಈವರೆಗೆ 25 ಟಿ20 ಇನಿಂಗ್ಸ್ ಆಡಿರುವ ಅಭಿಷೇಕ್ ಶರ್ಮಾ 193.38 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿ ಒಟ್ಟು 936 ರನ್​ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸ್ಟ್ರೈಕ್ ರೇಟ್ ಹೊಂದಿರುವ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 5
ಅಷ್ಟೇ ಅಲ್ಲದೆ ಆಸ್ಟ್ರೇಲಿಯಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅತೀ ವೇಗದ ಅರ್ಧಶತಕ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೂಡ ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಎಂಸಿಜಿ ಮೈದಾನದಲ್ಲಿ ಕೇವಲ 23 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ಈ ದಾಖಲೆಯನ್ನು ನಿರ್ಮಿಸಿದ್ದಾರೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು

‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ

ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು

ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?

ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ

ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ

ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್