AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಜಿಂಬಾಬ್ವೆ ವಿರುದ್ಧ ಸತತ 2ನೇ ಪಂದ್ಯದಲ್ಲೂ ಮುಗ್ಗರಿಸಿದ ಅಭಿಷೇಕ್

Abhishek Sharma's Struggles Raise Concerns: ಭಾರತ-ಜಿಂಬಾಬ್ವೆ 2ನೇ T20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕಳಪೆ ಫಾರ್ಮ್ ಮುಂದುವರಿದಿದೆ. ಕೇವಲ 8 ರನ್ ಗಳಿಸಿ ಔಟಾದ ಇವರು, ಕಳೆದ ಐದು ಇನ್ನಿಂಗ್ಸ್‌ಗಳಲ್ಲಿ ಹೇಳಿಕೊಳ್ಳುವ ಪ್ರದರ್ಶನ ನೀಡಿಲ್ಲ. ಸತತ ವೈಫಲ್ಯದಿಂದಾಗಿ ಮೂರನೇ ಪಂದ್ಯಕ್ಕೆ ಇವರ ಸ್ಥಾನಕ್ಕೆ ಪ್ರಭ್‌ಸಿಮ್ರಾನ್ ಸಿಂಗ್‌ಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಇದು ತಂಡಕ್ಕೆ ಆತಂಕ ತಂದಿದೆ.

ಪೃಥ್ವಿಶಂಕರ
|

Updated on:Jul 25, 2026 | 4:55 PM

Share
ಭಾರತ ಮತ್ತು ಜಿಂಬಾಬ್ವೆ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಇಂದು ಜುಲೈ 25 ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಆರಂಭಿಸಿದ ಭಾರತ ತಂಡಕ್ಕೆ ಮತ್ತೊಮ್ಮೆ ಕಳಪೆ ಆರಂಭ ಸಿಕ್ಕಿದೆ(PC-PTI).

1 / 5
ಟೀಂ ಇಂಡಿಯಾ ಪರ ಎಂದಿನಂತೆ ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ಇನ್ನಿಂಗ್ಸ್ ಆರಂಭಿಸಿದರು. ಅದರಂತೆ ಮೊದಲ ಓವರ್​ನಲ್ಲಿ ಅಭಿಷೇಕ್ ಶರ್ಮಾ ಎರಡು ಬೌಂಡರಿಗಳನ್ನು ಬಾರಿಸುವ ಮೂಲಕ ಉತ್ತಮ ಆರಂಭವನ್ನು ಪಡೆದುಕೊಂಡರು. ಆದರೆ ಎರಡನೇ ಓವರ್​ನಲ್ಲೇ ಅಭಿಷೇಕ್ ಅವರ ಇನ್ನಿಂಗ್ಸ್ ಅಂತ್ಯವಾಯಿತು(PC-PTI).

2 / 5
ಬ್ಲೆಸ್ಸಿಂಗ್ ಮುಜರಬಾನಿ ಬೌಲ್ ಮಾಡಿದ ಎರಡನೇ ಓವರ್​ನ ಐದನೇ ಎಸೆತದಲ್ಲಿ ಅಭಿಷೇಕ್ ಪಾಯಿಂಟ್​ನಲ್ಲಿ ನಿಂತಿದ್ದ ಫಿಲ್ಡರ್​ಗೆ ಕ್ಯಾಚಿತ್ತು ನಿರ್ಗಮಿಸಿದರು. ಇದರೊಂದಿಗೆ ಅಭಿಷೇಕ್ ಅವರ ಕಳಪೆ ಫಾರ್ಮ್ ಜಿಂಬಾಬ್ವೆ ವಿರುದ್ಧವೂ ಮುಂದುವರೆದಿದೆ. ಮೊದಲ ಪಂದ್ಯದಲ್ಲಿ ಕೇವಲ 1 ರನ್​ಗೆ ಔಟಾಗಿದ್ದ ಅಭಿಷೇಕ್ 2ನೇ ಪಂದ್ಯದಲ್ಲಿ 8 ರನ್​ಗಳಿಗೆ ಸುಸ್ತಾದರು(PC-PTI).

3 / 5
ಕೊನೆಯ ಐದು ಇನ್ನಿಂಗ್ಸ್​ಗಳಲ್ಲಿ ಅಭಿಷೇಕ್ ಅವರ ಬ್ಯಾಟ್​ನಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿಬಂದಿಲ್ಲ. ಜಿಂಬಾಬ್ವೆ ವಿರುದ್ಧದ ಸರಣಿಗೂ ಮುನ್ನ ಇಂಗ್ಲೆಂಡ್​ನಲ್ಲಿ ನಡೆದ ಸರಣಿಯ ಕೊನೆಯ ಮೂರು ಪಂದ್ಯಗಳಲ್ಲಿ ಅಭಿಷೇಕ್ ಅವರ ಪ್ರದರ್ಶನ ಕಳಪೆಯಾಗಿತ್ತು. ಅಭಿಷೇಕ್ ಅವರ ಕಳೆದ ಐದು ಇನ್ನಿಂಗ್ಸ್​ಗಳ ಪ್ರದರ್ಶನವನ್ನು ನೋಡುವುದಾದರೆ.. ಕ್ರಮವಾಗಿ 8,1,3,16,10 ರನ್​ಗಳನ್ನು ಕಲೆಹಾಕಿದ್ದಾರೆ(PC-PTI).

4 / 5
ಇಂಗ್ಲೆಂಡ್‌ ವಿರುದ್ಧದ ಮೊದಲ ಪಂದ್ಯದಲ್ಲಿ ಅಭಿಷೇಕ್ 59 ರನ್​ಗಳ ಇನ್ನಿಂಗ್ಸ್ ಆಡಿದ್ದನ್ನು ಬಿಟ್ಟರೆ, ಅವರ ಬ್ಯಾಟ್​ ಮೌನಕ್ಕೆ ಶರಣಾಗಿದೆ. ಮೊದಲೆರಡು ಪಂದ್ಯಗಳಲ್ಲಿ ಮುಗ್ಗರಿಸಿರುವ ಅಭಿಷೇಕ್​ ಅವರನ್ನು ಮೂರನೇ ಪಂದ್ಯದಿಂದ ಹೊರಗಿಡುವ ಸಾಧ್ಯತೆಗಳಿದ್ದು ಅವರ ಬದಲಿಗೆ ಪ್ರಭ್​ಸಿಮ್ರಾನ್​ಗೆ ಅವಕಾಶ ನೀಡಬಹುದು(PC-PTI).

5 / 5

Published On - 4:55 pm, Sat, 25 July 26

Follow Us
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತನಕ ಹೋರಾಡಿದ ಸಿಜೆಪಿಯ ಮುಂದಿನ ನಡೆ ಏನು?

ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ 'ಜಿರಲೆ

ಕರ್ನಾಟಕ ಬಿಜೆಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ, ಕಾರಣವೇನು?

ಖಾಸಗಿ ಶಾಲೆಗಳು ಹಳ್ಳಿ ಶಾಲೆಗಳನ್ನು ದತ್ತು ಪಡೆಯುವಂತೆ ಸಿಎಂ ಕರೆ

ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ!

'ಪೇಪರ್ ಲೀಕ್' ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾ ಬಿಹಾರದಲ್ಲಿ ಬಂಧನ

ದೇಶವಿರೋಧಿಗಳ ಕೈಗೊಂಬೆಯಾಗದಿರಿ:ಯುವಜನತೆಗೆ ಕರೆನೀಡಿದ ರವಿಶಂಕರ್ ಗುರೂಜಿ

ನೀಟ್ ಪ್ರತಿಭಟನೆಯಲ್ಲಿ ಅಪರಾಧ ಹಿನ್ನೆಲೆಯುಳ್ಳವರು ಭಾಗಿಯಾಗಿರೋದು ಪತ್ತೆ

8ನೇ ಶತಮಾನದ ಅಪರೂಪದ 'ಹುಲಿ ವೀರಗಲ್ಲು' ಶಾಸನ ಪತ್ತೆ