AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಆ್ಯಡಂ ಝಂಪಾ ‘ಶತಕ’

Adam Zampa Record: ಆಸ್ಟ್ರೇಲಿಯಾ ತಂಡದ ಲೆಗ್ ಸ್ಪಿನ್ನರ್ ಆ್ಯಡಂ ಝಂಪಾ ಟಿ20 ಕ್ರಿಕೆಟ್​ನಲ್ಲಿ ವಿಶೇಷ ಮೈಲುಗಲ್ಲು ಮುಟ್ಟಿದ್ದಾರೆ. ಈ ಮೈಲುಗಲ್ಲು ಮುಟ್ಟುವುದರೊಂದಿಗೆ ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ ಮೊದಲ ಬೌಲರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ನಾಲ್ಕನೇ ಆಸ್ಟ್ರೇಲಿಯನ್ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on:Jul 29, 2025 | 8:55 AM

Share
ಆಸ್ಟ್ರೇಲಿಯಾ ಪರ ಟಿ20 ಕ್ರಿಕೆಟ್​ನಲ್ಲಿ ನಾಲ್ವರು ಮಾತ್ರ 100 ಪಂದ್ಯಗಳನ್ನಾಡಿದ್ದಾರೆ. ಈ ನಾಲ್ವರಲ್ಲಿ ಕೊನೆಯವರು ಆ್ಯಡಂ ಝಂಪಾ. ಸೇಂಟ್ ಕಿಟ್ಸ್​ನ ವಾರ್ನರ್​ ಪಾರ್ಕ್​ ಮೈದಾನದಲ್ಲಿ ನಡೆದ ವೆಸ್ಟ್​ ಇಂಡೀಸ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಝಂಪಾ 100 ಟಿ20 ಪಂದ್ಯಗಳನ್ನಾಡಿದ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

1 / 5
ಇದರೊಂದಿಗೆ ಆಸ್ಟ್ರೇಲಿಯಾ ಪರ 100 ಟಿ20 ಪಂದ್ಯಗಳನ್ನಾಡಿದ ಮೊದಲ ಬೌಲರ್ ಎಂಬ ಹೆಗ್ಗಳಿಕೆಯನ್ನು ಆ್ಯಡಂ ಝಂಪಾ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಆಸೀಸ್ ಪರ ಈ ಸಾಧನೆ ಮಾಡಿದವರೆಲ್ಲರೂ ಬ್ಯಾಟರ್​ಗಳು ಎಂಬುದು ವಿಶೇಷ. ಇದೀಗ ಇದೇ ಮೊದಲ ಬಾರಿಗೆ ಬೌಲರ್​ರೊಬ್ಬರು ನೂರು ಪಂದ್ಯಗಳ ಮೈಲುಗಲ್ಲು ಮುಟ್ಟಿದ್ದಾರೆ.

2 / 5
ಇದಕ್ಕೂ ಮುನ್ನ ಆಸ್ಟ್ರೇಲಿಯಾ ಪರ 100 ಪಂದ್ಯಗಳನ್ನಾಡಿದ್ದು ಗ್ಲೆನ್ ಮ್ಯಾಕ್ಸ್​ವೆಲ್, ಆರೋನ್ ಫಿಂಚ್ ಹಾಗೂ ಡೇವಿಡ್ ವಾರ್ನರ್. ಫಿಂಚ್ 103 ಪಂದ್ಯಗಳಲ್ಲಿ ಕಾಣಿಸಿಕೊಂಡರೆ, ವಾರ್ನರ್ ಆಸೀಸ್ ಪರ 110 ಟಿ20 ಪಂದ್ಯಗಳನ್ನಾಡಿದ್ದರು. ಇನ್ನು 121 ಪಂದ್ಯಗಳೊಂದಿಗೆ ಗ್ಲೆನ್ ಮ್ಯಾಕ್ಸ್​ವೆಲ್ ಆಸ್ಟ್ರೇಲಿಯಾ ಪರ ಅತ್ಯಧಿಕ ಟಿ20 ಮ್ಯಾಚ್ ಆಡಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇದೀಗ ಈ ಪಟ್ಟಿಯಲ್ಲಿ ಝಂಪಾ 4ನೇ ಸ್ಥಾನ ಅಲಂಕರಿಸಿದ್ದಾರೆ.

3 / 5
ಆಸ್ಟ್ರೇಲಿಯಾ ಪರ ಈವರೆಗೆ 100 ಟಿ20 ಪಂದ್ಯಗಳನ್ನಾಡಿರುವ ಝಂಪಾ 99 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 2171 ಎಸೆತಗಳನ್ನು ಎಸೆದಿರುವ ಅವರು 125 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದ್ದಾರೆ.

4 / 5
ಇನ್ನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ವಿಶ್ವ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಹಿಟ್​ಮ್ಯಾನ್ ಭಾರತದ ಪರ 159 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಈ ದಾಖಲೆ ನಿರ್ಮಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಐರ್ಲೆಂಡ್​ನ ಪೌಲ್ ಸ್ಟೀರ್ಲಿಂಗ್ 151 ಪಂದ್ಯಗಳೊಂದಿಗೆ 2ನೇ ಸ್ಥಾನದಲ್ಲಿದ್ದು, ಇನ್ನು 9 ಪಂದ್ಯಗಳನ್ನಾಡಿದರೆ ರೋಹಿತ್ ಶರ್ಮಾ ಅವರ ವಿಶ್ವ ದಾಖಲೆಯನ್ನು ಮುರಿಯಬಹುದು.

5 / 5

Published On - 8:54 am, Tue, 29 July 25

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ

ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ

ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು

‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್