AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್ ಪಡೆಯ ನಾಗಾಲೋಟಕ್ಕೆ ಪಾಕ್ ದಾಖಲೆ ಉಡೀಸ್

T20I Records: ಟಿ20 ಕ್ರಿಕೆಟ್​ನಲ್ಲಿ ಒಂದೇ ಮೈದಾನದಲ್ಲಿ ಅತ್ಯಧಿಕ ಗೆಲುವು ದಾಖಲಿಸಿದ ವಿಶೇಷ ವಿಶ್ವ ದಾಖಲೆ ಬಾಂಗ್ಲಾದೇಶ್ ತಂಡದ ಹೆಸರಿನಲ್ಲಿದೆ. ಈ ದಾಖಲೆ ಮುರಿಯುವತ್ತ ಇದೀಗ ಅಫ್ಘಾನಿಸ್ತಾನ್ ತಂಡ ದಾಪುಗಾಲಿಟ್ಟಿದೆ. ಅದು ಕೂಡ ಪಾಕಿಸ್ತಾನ್ ತಂಡದ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Sep 06, 2025 | 11:54 AM

Share
ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಯುಎಇ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 20 ಓವರ್​ಗಳಲ್ಲಿ 170 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಯುಎಇ ತಂಡ 20 ಓವರ್​ಗಳಲ್ಲಿ 166 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

1 / 7
ಈ ಮೂಲಕ ಅಪ್ಘಾನಿಸ್ತಾನ್ ತಂಡವು 4 ರನ್​ಗಳ ರೋಚಕ ಜಯ ಸಾಧಿಸಿದೆ. ಈ ರೋಚಕ ಗೆಲುವಿನೊಂದಿಗೆ ಅಫ್ಘಾನ್ ಪಡೆ ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದರು. ಅದು ಸಹ ಒಂದೇ ಮೈದಾನದಲ್ಲಿ 20 ಗೆಲುವು ದಾಖಲಿಸುವ ಮೂಲಕ ಎಂಬುದು ವಿಶೇಷ.

2 / 7
ಈ ಹಿಂದೆ ಶಾರ್ಜಾ ಮೈದಾನದಲ್ಲಿ ಅತ್ಯಧಿಕ ಗೆಲುವು ದಾಖಲಿಸಿದ ದಾಖಲೆ ಪಾಕಿಸ್ತಾನ್ ತಂಡದ ಹೆಸರಿನಲ್ಲಿತ್ತು. ಪಾಕ್ ಪಡೆಯು ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಡಿದ 32 ಪಂದ್ಯಗಳಲ್ಲಿ 18 ಗೆಲುವು ದಾಖಲಿಸಿ ಈ ವಿಶೇಷ ದಾಖಲೆ ನಿರ್ಮಿಸಿತ್ತು. ಆದರೆ ಈ ಬಾರಿಯ ತ್ರಿಕೋನ ಸರಣಿಯ ಮೂಲಕ ಪಾಕ್ ದಾಖಲೆ ಮುರಿಯುವಲ್ಲಿ ಅಫ್ಘಾನಿಸ್ತಾನ್ ಯಶಸ್ವಿಯಾಗಿದೆ.

3 / 7
ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಟಿ20 ಪಂದ್ಯದಲ್ಲಿ 18 ರನ್​ಗಳ ಜಯ ಸಾಧಿಸಿದ್ದ ಅಫ್ಘಾನಿಸ್ತಾನ್ ತಂಡವು ಇದೀಗ ಯುಎಇ ವಿರುದ್ಧ 4 ರನ್​ಗಳ ರೋಚಕ ಗೆಲುವು ದಾಖಲಿಸಿದೆ. ಈ ಗೆಲುವುಗಳೊಂದಿಗೆ ಶಾರ್ಜಾ ಮೈದಾನದಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಜಯ ಸಾಧಿಸಿದ ತಂಡ ಎನಿಸಿಕೊಂಡಿದೆ.

4 / 7
ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ಅಫ್ಘಾನಿಸ್ತಾನ್ ತಂಡವು ಈವರೆಗೆ 29 ಪಂದ್ಯಗಳನ್ನಾಡಿದ್ದಾರೆ. ಇಪ್ಪತ್ತೊಂಬತ್ತು ಮ್ಯಾಚ್​​​ಗಳಲ್ಲಿ 20 ಪಂದ್ಯಗಳಲ್ಲಿ ಅಫ್ಘಾನ್ ಪಡೆ ಜಯ ಸಾಧಿಸಿದೆ. ಈ ಮೂಲಕ ಪಾಕ್ ತಂಡದ ಹೆಸರಿನಲ್ಲಿದ್ದ ದಾಖಲೆ ಮುರಿದು ಅಫ್ಘಾನಿಸ್ತಾನ್ ತಂಡ ಶಾರ್ಜಾದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

5 / 7
ಇನ್ನು ಟಿ20 ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಮೈದಾನದಲ್ಲಿ ಅತ್ಯಧಿಕ ಗೆಲುವು ದಾಖಲಿಸಿದ ವಿಶ್ವ ದಾಖಲೆ ಬಾಂಗ್ಲಾದೇಶ್ ತಂಡದ ಹೆಸರಿನಲ್ಲಿದೆ. ಬಾಂಗ್ಲಾದೇಶ್ ತಂಡವು ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ಆಡಿದ 48 ಪಂದ್ಯಗಳಲ್ಲಿ 24 ಗೆಲುವು ದಾಖಲಿಸಿ ಈ ದಾಖಲೆ ಬರೆದಿದೆ.

6 / 7
ಇದೀಗ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ 20 ಗೆಲುವು ದಾಖಲಿಸುವ ಮೂಲಕ ಅಫ್ಘಾನಿಸ್ತಾನ್ ತಂಡ ಒಂದೇ ಮೈದಾನದಲ್ಲಿ ಅತೀ ಹೆಚ್ಚು ವಿಜಯ ಸಾಧಿಸಿದ ವಿಶ್ವದ 2ನೇ ತಂಡ ಎನಿಸಿಕೊಂಡಿದೆ. ಈ ಮೂಲಕ ಅಫ್ಘಾನ್ ಪಡೆ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸುವತ್ತ ಹೊರಟಿದೆ.

7 / 7
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು

ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ

ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು

ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ

ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್

ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು

ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ

ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ

ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು

ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ