- Kannada News Photo gallery Cricket photos Afghanistan Highest target chased vs Pakistan in World Cups
ಪಾಕಿಸ್ತಾನವನ್ನು ಬಗ್ಗು ಬಡಿದು ಭಾರತದ ದಾಖಲೆ ಮುರಿದ ಅಫ್ಘಾನಿಸ್ತಾನ್
ICC World Cup 2023: 283 ರನ್ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 49 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 286 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ವಿಶ್ವಕಪ್ನಲ್ಲಿ ಪಾಕ್ ವಿರುದ್ಧ ಅತ್ಯಧಿಕ ಮೊತ್ತ ಚೇಸ್ ಮಾಡಿ ಜಯ ಸಾಧಿಸಿದ ತಂಡವೆಂಬ ದಾಖಲೆಯನ್ನು ಅಫ್ಘಾನ್ ಪಡೆ ತನ್ನದಾಗಿಸಿಕೊಂಡಿತು.
Updated on: Oct 24, 2023 | 10:03 PM

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್ನ 22ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಅಫ್ಘಾನಿಸ್ತಾನ್ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 282 ರನ್ ಕಲೆಹಾಕಿತು.

283 ರನ್ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 49 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 286 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ವಿಶ್ವಕಪ್ನಲ್ಲಿ ಪಾಕ್ ವಿರುದ್ಧ ಅತ್ಯಧಿಕ ಮೊತ್ತ ಚೇಸ್ ಮಾಡಿ ಜಯ ಸಾಧಿಸಿದ ತಂಡವೆಂಬ ದಾಖಲೆಯನ್ನು ಅಫ್ಘಾನ್ ಪಡೆ ತನ್ನದಾಗಿಸಿಕೊಂಡಿತು.

ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾ ಹೆಸರಿನಲ್ಲಿತ್ತು. 2003 ರಲ್ಲಿ ನಡೆದ ಏಕದಿನ ವಿಶ್ವಕಪ್ನಲ್ಲಿ ಪಾಕಿಸ್ತಾನ್ ನೀಡಿದ 274 ರನ್ಗಳನ್ನು ಚೇಸ್ ಮಾಡಿ ಭಾರತ ತಂಡವು ಇತಿಹಾಸ ನಿರ್ಮಿಸಿತ್ತು.

ಇದೀಗ ಪಾಕಿಸ್ತಾನ್ ವಿರುದ್ಧ 283 ರನ್ಗಳ ಗುರಿಯನ್ನು ಬೆನ್ನತ್ತುವ ಮೂಲಕ ಅಫ್ಘಾನಿಸ್ತಾನ್ ತಂಡದ ಭಾರತ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

ಇಲ್ಲಿ ಮತ್ತೊಂದು ವಿಶೇಷ ಎಂದರೆ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಪಾಕಿಸ್ತಾನ್ ತಂಡವು 275+ ರನ್ಗಳಿಸಿ ಒಮ್ಮೆಯೂ ಸೋತಿರಲಿಲ್ಲ. ಆದರೆ ಈ ಬಾರಿ ಪಾಕ್ ಪಡೆಯನ್ನು ಬಗ್ಗು ಬಡಿದು ಹೊಸ ಇತಿಹಾಸ ನಿರ್ಮಿಸುವಲ್ಲಿ ಅಫ್ಘಾನಿಸ್ತಾನ್ ಯಶಸ್ವಿಯಾಗಿರುವುದು ವಿಶೇಷ.



















