Test Cricket Records: ಟೆಸ್ಟ್​ನಲ್ಲಿ ಮೊದಲ ಎಸೆತದಲ್ಲೇ ವಿಕೆಟ್: ದಾಖಲೆ ಬರೆದ ಅಫ್ಘಾನ್ ಬೌಲರ್

| Updated By: ಝಾಹಿರ್ ಯೂಸುಫ್

Updated on: Jun 15, 2023 | 5:23 PM

Nijat Masood: ಬಾಂಗ್ಲಾದೇಶ್ ವಿರುದ್ಧದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ನಿಜಾತ್ ಮಸೂದ್ 79 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

1 / 7
ಮಿರ್​ಪುರ್​ನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ಹಾಗೂ ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯದಲ್ಲಿ ಅಪರೂಪದ ದಾಖಲೆಯೊಂದು ನಿರ್ಮಾಣವಾಗಿದೆ. ಇಂತಹದೊಂದು ವಿಶೇಷ ದಾಖಲೆ ಬರೆದಿದ್ದು ಅಫ್ಘಾನಿಸ್ತಾನ್ ವೇಗಿ ನಿಜಾತ್ ಮಸೂದ್.

2 / 7
ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ್ ಮೊದಲ ಓವರ್​ನಲ್ಲಿ 6 ರನ್​ ಕಲೆಹಾಕಿತು. ಇತ್ತ ರಶೀದ್ ಖಾನ್ ಅನುಪಸ್ಥಿತಿಯಲ್ಲಿ ತಂಡದಲ್ಲಿ ಸ್ಥಾನ ಪಡೆದ ಯುವ ವೇಗಿ ನಿಜಾತ್ ಮಸೂದ್ 2ನೇ ಓವರ್ ಎಸೆಯಲು ಬಂದರು.

3 / 7
ಅಲ್ಲ ಪಾದರ್ಪಣಾ ಪಂದ್ಯದ ಮೊದಲ ಎಸೆತದಲ್ಲೇ ಝಾಕಿರ್ ಹಸನ್ ವಿಕೆಟ್ ಪಡೆಯುವ ಮೂಲಕ ಹೊಸ ಇತಿಹಾಸ ನಿರ್ಮಿಸಿದರು. ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ಅಫ್ಘಾನಿಸ್ತಾನದ ಮೊದಲ ಬೌಲರ್ ಎಂಬ ದಾಖಲೆ ನಿಜಾತ್ ಮಸೂದ್ ಪಾಲಾಗಿದೆ.

4 / 7
ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 7ನೇ ಬೌಲರ್​ ಎನಿಸಿಕೊಂಡಿದ್ದಾರೆ. ಇನ್ನು ಈ ಸಾಧನೆ ಮಾಡಿದ ವಿಶ್ವದ ಮೊದಲ ಬೌಲರ್ ರಿಚರ್ಡ್ ಇಲ್ಲಿಂಗ್ವರ್ತ್. 1991 ರಲ್ಲಿ ಇಂಗ್ಲೆಂಡ್ ಬೌಲರ್ ರಿಚರ್ಡ್ ಪಾದರ್ಪಣಾ ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್ ಉರುಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

5 / 7
ಇನ್ನು ಭಾರತದ ಬೌಲರ್ ಕೂಡ ಈ ಸಾಧನೆ ಮಾಡಿದ್ದಾರೆ. 1997 ರಲ್ಲಿ ಶ್ರೀಲಂಕಾ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ ಪಾದರ್ಪಣೆ ಮಾಡಿದ್ದ ನೀಲೇಶ್ ಕುಲಕರ್ಣಿ ಆರಂಭಿಕ ಆಟಗಾರ ಮರ್ವಾನ್ ಅಟಪಟ್ಟುವನ್ನು ತಮ್ಮ ಮೊದಲ ಎಸೆತದಲ್ಲಿ ಔಟ್ ಮಾಡಿದ್ದರು.

6 / 7
ಹಾಗೆಯೇ ಟೆಸ್ಟ್​ ಕ್ರಿಕೆಟ್​ನಲ್ಲಿ ಕೊನೆಯ ಬಾರಿ ಈ ಸಾಧನೆ ಮೂಡಿಬಂದಿದ್ದು 2016 ರಲ್ಲಿ. ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಹಾರ್ಡಸ್ ವಿಲೋನ್ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದ ಮೊದಲ ಎಸೆತದಲ್ಲೇ ಇಂಗ್ಲೆಂಡ್​ನ ಅಲೆಸ್ಟರ್ ಕುಕ್ ಅವರನ್ನು ಔಟ್ ಮಾಡಿ ದಾಖಲೆ ಬರೆದಿದ್ದರು.

7 / 7
ಇದೀಗ 7 ವರ್ಷಗಳ ನಂತರ ಅಫ್ಘಾನ್ ವೇಗಿ ನಿಜಾತ್ ಮಸೂದ್ ಟೆಸ್ಟ್ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ್ದಾರೆ. ಅಲ್ಲದೆ ಬಾಂಗ್ಲಾದೇಶ್ ವಿರುದ್ಧದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 79 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

Published On - 5:23 pm, Thu, 15 June 23