Team India: ಏಕದಿನ ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಫುಲ್ ಬ್ಯುಸಿ: ಇಲ್ಲಿದೆ ವೇಳಾಪಟ್ಟಿ
TV9 Web | Updated By: ಝಾಹಿರ್ ಯೂಸುಫ್
Updated on:
Jul 04, 2023 | 3:06 PM
Team India Schedule: ಮುಂದಿನ ವರ್ಷ ಡಿಸೆಂಬರ್ ತಿಂಗಳವರೆಗೆ ಹಲವು ತಂಡಗಳೊಂದಿಗೆ ದ್ವಿಪಕ್ಷೀಯ ಸರಣಿಗಳಲ್ಲಿ ನಿರತವಾಗಲಿದೆ. ಅದರಂತೆ ಟೀಮ್ ಇಂಡಿಯಾದ ಮುಂದಿನ ವರ್ಷದ ವೇಳಾಪಟ್ಟಿ ಈ ಕೆಳಗಿನಂತಿದೆ.
1 / 9
Team India Schedule: ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಆಡಲಿದೆ. ಅಲ್ಲದೆ ಮುಂದಿನ ವರ್ಷ ಡಿಸೆಂಬರ್ ತಿಂಗಳವರೆಗೆ ಹಲವು ತಂಡಗಳೊಂದಿಗೆ ದ್ವಿಪಕ್ಷೀಯ ಸರಣಿಗಳಲ್ಲಿ ನಿರತವಾಗಲಿದೆ. ಅದರಂತೆ ಟೀಮ್ ಇಂಡಿಯಾದ ಮುಂದಿನ ವರ್ಷದ ವೇಳಾಪಟ್ಟಿ ಹೀಗಿದೆ.
2 / 9
IND vs AUS: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯ ನಂತರ ಟೀಮ್ ಇಂಡಿಯಾ ನವೆಂಬರ್-ಡಿಸೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ T20 ಸರಣಿಯನ್ನು ಆಡಲಿದೆ. ಈ ಸರಣಿ ಭಾರತದಲ್ಲಿ ನಡೆಯಲಿರುವುದು ವಿಶೇಷ.
3 / 9
SA vs IND: ಭಾರತವು ಡಿಸೆಂಬರ್-ಜನವರಿಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿದೆ. ಈ ವೇಳೆ 2 ಟೆಸ್ಟ್, 3 ಏಕದಿನ ಹಾಗೂ 3 ಟಿ20 ಪಂದ್ಯಗಳಲ್ಲಿ ಆತಿಥೇಯ ತಂಡವನ್ನು ಟೀಮ್ ಇಂಡಿಯಾ ಎದುರಿಸಲಿದೆ.
4 / 9
IND vs ENG: ಭಾರತ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿ ಆಡಲು ಇಂಗ್ಲೆಂಡ್ ಜನವರಿ-ಮಾರ್ಚ್‌ನಲ್ಲಿ ಭಾರತಕ್ಕೆ ಬರಲಿದೆ.
5 / 9
ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾ ಜೂನ್ ತಿಂಗಳಲ್ಲಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2024 ಟೂರ್ನಿಯಲ್ಲಿ ಕಣಕ್ಕಿಳಿಯಲಿದೆ.
6 / 9
SL vs IND: ಟೀಮ್ ಇಂಡಿಯಾ ಜುಲೈನಲ್ಲಿ 3 ಏಕದಿನ ಮತ್ತು 3 ಟಿ20 ಪಂದ್ಯಗಳಿಗಾಗಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ.
7 / 9
IND vs BAN: ಟೀಮ್ ಇಂಡಿಯಾ ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದು, ಆತಿಥೇಯ ತಂಡದ ವಿರುದ್ಧ 2 ಟೆಸ್ಟ್ ಮತ್ತು 3 ಟಿ20 ಪಂದ್ಯಗಳನ್ನು ಆಡಲಿದೆ.
8 / 9
NZ vs IND: ಅಕ್ಟೋಬರ್‌ನಲ್ಲಿ ಟೀಮ್ ಇಂಡಿಯಾ ನ್ಯೂಝಿಲ್ಯಾಂಡ್ ವಿರುದ್ಧ 3 ಟೆಸ್ಟ್ ಪಂದ್ಯಗಳನ್ನು ಆಡಲಿದೆ.
9 / 9
IND vs AUS: 2024 ರ ಅಂತ್ಯದಲ್ಲಿ ಆಸ್ಟ್ರೇಲಿಯಾ ತಂಡವು 5 ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತಕ್ಕೆ ಬರಲಿದೆ.
Published On - 3:03 pm, Tue, 4 July 23