- Kannada News Photo gallery Cricket photos Ahead of T20 World Cup 2022 Indian team visits beautiful Rottnest Island
T20 World Cup: ಆಸೀಸ್ ದ್ವೀಪದಲ್ಲಿ ರೋಹಿತ್ ಪಡೆ; ಅಪರೂಪದ ಪ್ರಾಣಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಕೊಹ್ಲಿ
T20 World Cup: ರಾಟ್ನೆಸ್ಟ್ ದ್ವೀಪಕ್ಕೆ ಭೇಟಿ ನೀಡಿದ್ದ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಪರೂಪದ ಜಾತಿಯ ಕ್ವೊಕಾ ಪ್ರಾಣಿಯೊಂದಿಗೆ ಫೋಟೋವನ್ನು ಕ್ಲಿಕ್ಕಿಸಿಕೊಂಡಿದ್ದಾರೆ.
Updated on:Oct 12, 2022 | 5:40 PM

ಟಿ20 ವಿಶ್ವಕಪ್‌ಗಾಗಿ ಈಗಾಗಲೇ ಟೀಂ ಇಂಡಿಯಾ ಆಟಗಾರರ ಆಸ್ಟ್ರೇಲಿಯ ತಲುಪಿದ್ದು, ಅಭ್ಯಾಸ ಪಂದ್ಯಗಳನ್ನು ಆಡುತ್ತಿದೆ. ಈಗ ಮಿನಿ ಸಮರ ಆರಂಭವಾಗಲು ಕೆಲವೇ ದಿನಗಳು ಬಾಕಿ ಉಳಿದಿದ್ದು, ಟೀಂ ಇಂಡಿಯಾ ಆಟಗಾರರು ಒತ್ತಡದಿಂದ ದೂರವಿರಲು ನಾನಾ ತರಹದ ಕಸರತ್ತು ಮಾಡುತ್ತಿದ್ದಾರೆ.

ಅಭ್ಯಾಸ ಪಂದ್ಯಗಳನ್ನು ಆಡಿ ಮುಗಿಸಿರುವ ಟೀಂ ಇಂಡಿಯಾ ಪಾಕಿಸ್ತಾನ ವಿರುದ್ಧ ತನ್ನ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ. ಆದರೆ ಆ ಪಂದ್ಯಕ್ಕೆ ಇನ್ನು ಸಾಕಷ್ಟು ಸಮಯವಿದ್ದು, ಈ ವಿರಾಮದ ಸಮಯದಲ್ಲಿ ಟೀಂ ಇಂಡಿಯಾ ಆಟಗಾರರು ವಿಶ್ರಾಂತಿಗಾಗಿ ಆಸ್ಟ್ರೇಲಿಯಾದ ರಾಟ್ನೆಸ್ಟ್ ದ್ವೀಪಕ್ಕೆ ಭೇಟಿ ನೀಡಿದ್ದಾರೆ.

ರೊಟ್ನೆಸ್ಟ್ ದ್ವೀಪವನ್ನು ವಿಶ್ವದ ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದೆಂದು ಪರಿಗಣಿಸಲಾಗಿದ್ದು, ಈ ದ್ವೀಪಕ್ಕೆ ಟೀಂ ಇಂಡಿಯಾ ಆಟಗಾರರು ಸೇರಿದಂತೆ ಸಹಾಯಕ ಸಿಬ್ಬಂದಿಯೂ ಸಹ ಭೇಟಿ ನೀಡಿ ಮೋಜು ಮಸ್ತಿ ಮಾಡಿದ್ದಾರೆ.

ರಾಟ್ನೆಸ್ಟ್ ದ್ವೀಪಕ್ಕೆ ಭೇಟಿ ನೀಡಿದ್ದ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಪರೂಪದ ಜಾತಿಯ ಕ್ವೊಕಾ ಪ್ರಾಣಿಯೊಂದಿಗೆ ಫೋಟೋವನ್ನು ಕ್ಲಿಕ್ಕಿಸಿಕೊಂಡಿದ್ದಾರೆ.

ರೋಟ್ನೆಸ್ಟ್ ದ್ವೀಪವು ಪರ್ತ್ ಕರಾವಳಿಯಿಂದ ಕೇವಲ 19 ಕಿಲೋಮೀಟರ್ ದೂರದಲ್ಲಿದ್ದು, ಈ ದ್ವೀಪವನ್ನು ಸಮುದ್ರದ ಸ್ವರ್ಗವೆಂದು ಪರಿಗಣಿಸಲಾಗಿದೆ. ಜೊತೆಗೆ ಈ ದ್ವೀಪದ ಇತಿಹಾಸವು ಸುಮಾರು 50,000 ವರ್ಷಗಳಷ್ಟು ಹಳೆಯದು ಎಂದು ಹೇಳಲಾಗುತ್ತದೆ.

ಟಿ20 ವಿಶ್ವಕಪ್ಗೆ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
Published On - 5:40 pm, Wed, 12 October 22
