ತೂಫಾನ್ ಸೆಂಚುರಿ ಸಿಡಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ ಮಾರ್ಕ್ರಾಮ್
TV9 Web | Updated By: ಝಾಹಿರ್ ಯೂಸುಫ್
Updated on:
Oct 07, 2023 | 6:42 PM
Aiden Markram Century: ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪರ ಕ್ವಿಂಟನ್ ಡಿಕಾಕ್ (100), ರಾಸ್ಸಿ ವಂಡರ್ ಡಸ್ಸೆನ್ (108) ಶತಕ ಸಿಡಿಸಿದ್ದರು. ಇದಾದ ಬಳಿಕ ಕಣಕ್ಕಿಳಿದ ಐಡೆನ್ ಮಾರ್ಕ್ರಾಮ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.
1 / 7
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸಿ ಸೌತ್ ಆಫ್ರಿಕಾ ಬ್ಯಾಟರ್ ಐಡೆನ್ ಮಾರ್ಕ್ರಾಮ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಏಕದಿನ ವಿಶ್ವಕಪ್ನಲ್ಲಿ ಇದುವರೆಗೆ ಯಾರೂ ಮಾಡಿರದ ದಾಖಲೆ ಎಂಬುದು ವಿಶೇಷ.
2 / 7
ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪರ ಕ್ವಿಂಟನ್ ಡಿಕಾಕ್ (100), ರಾಸ್ಸಿ ವಂಡರ್ ಡಸ್ಸೆನ್ (108) ಭರ್ಜರಿ ಶತಕ ಸಿಡಿಸಿದ್ದರು. ಇದಾದ ಬಳಿಕ ಕಣಕ್ಕಿಳಿದ ಐಡೆನ್ ಮಾರ್ಕ್ರಾಮ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.
3 / 7
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಐಡೆನ್ ಮಾರ್ಕ್ರಾಮ್ 3 ಸಿಕ್ಸ್ ಹಾಗೂ 14 ಫೋರ್ಗಳೊಂದಿಗೆ ಕೇವಲ 49 ಎಸೆತಗಳಲ್ಲಿ ಶತಕ ಪೂರೈಸಿದರು.
4 / 7
ಇದರೊಂದಿಗೆ ಏಕದಿನ ವಿಶ್ವಕಪ್ನಲ್ಲಿ 50 ಕ್ಕಿಂತ ಕಡಿಮೆ ಬಾಲ್ಗಳಲ್ಲಿ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಏಕದಿನ ವಿಶ್ವಕಪ್ನಲ್ಲಿ ಅತೀ ವೇಗದ ಸೆಂಚುರಿ ಬಾರಿಸಿದ ವಿಶ್ವ ದಾಖಲೆಯನ್ನು ಕೂಡ ಐಡೆನ್ ಮಾರ್ಕ್ರಾಮ್ ತಮ್ಮದಾಗಿಸಿಕೊಂಡಿದ್ದಾರೆ.
5 / 7
ಇದಕ್ಕೂ ಮುನ್ನ ಈ ದಾಖಲೆ ಐರ್ಲೆಂಡ್ನ ಕೆವಿನ್ ಒ'ಬ್ರೇನ್ ಹೆಸರಿನಲ್ಲಿತ್ತು. 2011 ರಲ್ಲಿ ಇಂಗ್ಲೆಂಡ್ ವಿರುದ್ಧ ಕೆವಿನ್ ಕೇವಲ 50 ಎಸೆತಗಳಲ್ಲಿ ಶತಕ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.
6 / 7
ಇದೀಗ ಕೇವಲ 49 ಎಸೆತಗಳಲ್ಲಿ ಸಿಡಿಲಬ್ಬರದ ಸೆಂಚುರಿ ಸಿಡಿಸುವ ಮೂಲಕ ಐಡೆನ್ ಮಾರ್ಕ್ರಾಮ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇನ್ನು ಈ ಪಂದ್ಯದಲ್ಲಿ 54 ಎಸೆತಗಳನ್ನು ಎದುರಿಸಿದ ಮಾರ್ಕ್ರಾಮ್ 106 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
7 / 7
ಇನ್ನು ಈ ಪಂದ್ಯದಲ್ಲಿ ಕ್ವಿಂಟನ್ ಡಿಕಾಕ್ (100), ರಾಸ್ಸಿ ವಂಡರ್ ಡಸ್ಸೆನ್ (108) ಹಾಗೂ ಐಡೆನ್ ಮಾರ್ಕ್ರಾಮ್ (106) ಅವರ ಶತಕದ ನೆರವಿನಿಂದ ಸೌತ್ ಆಫ್ರಿಕಾ ತಂಡವು 5 ವಿಕೆಟ್ ನಷ್ಟಕ್ಕೆ 428 ರನ್ ಕಲೆಹಾಕಿದೆ. ಇದು ಕೂಡ ಏಕದಿನ ವಿಶ್ವಕಪ್ನಲ್ಲಿ ಮೂಡಬಂದ ಗರಿಷ್ಠ ಸ್ಕೋರ್ ಎಂಬುದು ವಿಶೇಷ.
Published On - 6:12 pm, Sat, 7 October 23