AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಶಾನ್ ಕಿಶನ್​ಗೆ ಅನ್ಯಾಯವಾಗುತ್ತಿದೆ’; ಆಯ್ಕೆ ಮಂಡಳಿ ನಡೆಗೆ ಜಡೇಜಾ ಅಸಮಾಧಾನ..!

Team India: ಕೇವಲ ಮೂರು ಪಂದ್ಯಗಳನ್ನು ಆಡಿದ ನಂತರ ಇಶಾನ್ ಅವರಿಗೆ ವಿಶ್ರಾಂತಿಯ ಅಗತ್ಯವಿದೆಯೇ? ಅವರು ವಿಶ್ವಕಪ್‌ನಲ್ಲಿ ಹೆಚ್ಚು ಪಂದ್ಯಗಳನ್ನು ಆಡಲಿಲ್ಲ. ವಿಶ್ವಕಪ್‌ನಲ್ಲಿ ಆಡಲು ಅರ್ಹರಾಗಿದ್ದ ಕಿಶನ್ ಅವರಿಗೆ ಮೊದಲ ಕೆಲವು ಪಂದ್ಯಗಳಲ್ಲಿ ಆಡುವ ಹನ್ನೊಂದರಲ್ಲಿ ಸ್ಥಾನ ನೀಡಲಾಯಿತು. ನಂತರ ಅವರನ್ನು ತಂಡದಿಂದ ಹೊರಗಿಡಲಾಯಿತು ಎಂದು ಜಡೇಜಾ ಆಕ್ರೋಶ ಹೊರಹಾಕಿದ್ದಾರೆ.

ಪೃಥ್ವಿಶಂಕರ
|

Updated on: Dec 05, 2023 | 1:28 PM

Share
ಟೀಂ ಇಂಡಿಯಾದ ಯುವ ವಿಕೆಟ್​ಕೀಪರ್ ಬ್ಯಾಟರ್ ಇಶಾನ್ ಕಿಶನ್​ಗೆ ಆಯ್ಕೆ ಮಂಡಳಿಯಿಂದ ಅನ್ಯಾಯವಾಗುತ್ತಿದೆ ಎಂದು ತಂಡದ ಮಾಜಿ ಆಟಗಾರ ಅಜೇಯ್ ಜಡೇಜಾ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

1 / 7
ವಾಸ್ತವವಾಗಿ ಏಕದಿನ ವಿಶ್ವಕಪ್​ಗೆ ಭಾರತ ತಂಡದಲ್ಲಿ ಆಯ್ಕೆಯಾಗಿದ್ದ ಇಶಾನ್ ಕಿಶನ್​ಗೆ ಮೊದಲ ಕೆಲವು ಪಂದ್ಯಗಳಲ್ಲಿ ಆಡುವ ಅವಕಾಶ ನೀಡಲಾಯಿತು. ಆ ನಂತರ ಅವರನ್ನು ಆಡುವ ಹನ್ನೊಂದರ ಬಳಗದಿಂದ ಕೈಬಿಡಲಾಯಿತು. ಇದಾದ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೂ ಕಿಶನ್ ಅವರನ್ನು ಆಯ್ಕೆ ಮಾಡಲಾಯಿತು. ಆದರೆ ಇಲ್ಲಿಯೂ ಮೊದಲ 3 ಪಂದ್ಯಗಳನ್ನು ಆಡಿದ ನಂತರ ಅವರನ್ನು ತಂಡದಿಂದ ಕೈಬಿಡಲಾಯಿತು.

2 / 7
ಆಯ್ಕೆ ಮಂಡಳಿಯ ಈ ನಡೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವಿರೋದ ವ್ಯಕ್ತವಾಗುತ್ತಿದ್ದು, ಇದಕ್ಕೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ಕೂಡ ಧ್ವನಿಗೂಡಿಸಿದ್ದಾರೆ. ಸ್ಪೋರ್ಟ್ಸ್ ಸಂವಾದದಲ್ಲಿ ಈ ಬಗ್ಗೆ ಅಸಮಾಧಾನ ಹೊರಹಾಕಿರುವ ಜಡೇಜಾ, ‘ ಆಯ್ಕೆ ಮಂಡಳಿಯ ಈ ನಡೆ ಸರಿ ಇಲ್ಲ. ವಿಶ್ವಕಪ್ ನಂತೆಯೇ ಆಸೀಸ್ ವಿರುದ್ಧದ ಸರಣಿಯಲ್ಲಿ ಮೂರು ಪಂದ್ಯಗಳನ್ನು ಆಡಿದ್ದ ನಂತರ ಇಶಾನ್ ಕಿಶನ್ ಅವರನ್ನು ತಂಡದಿಂದ ಕೈಬಿಡಲಾಯಿತು.

3 / 7
ಕೇವಲ ಮೂರು ಪಂದ್ಯಗಳನ್ನು ಆಡಿದ ನಂತರ ಇಶಾನ್ ಅವರಿಗೆ ವಿಶ್ರಾಂತಿಯ ಅಗತ್ಯವಿದೆಯೇ? ಅವರು ವಿಶ್ವಕಪ್‌ನಲ್ಲಿ ಹೆಚ್ಚು ಪಂದ್ಯಗಳನ್ನು ಆಡಲಿಲ್ಲ. ವಿಶ್ವಕಪ್‌ನಲ್ಲಿ ಆಡಲು ಅರ್ಹರಾಗಿದ್ದ ಕಿಶನ್ ಅವರಿಗೆ ಮೊದಲ ಕೆಲವು ಪಂದ್ಯಗಳಲ್ಲಿ ಆಡುವ ಹನ್ನೊಂದರಲ್ಲಿ ಸ್ಥಾನ ನೀಡಲಾಯಿತು. ನಂತರ ಅವರನ್ನು ತಂಡದಿಂದ ಹೊರಗಿಡಲಾಯಿತು.

4 / 7
‘ನೀವೇ ಹೇಳಿ ಎಷ್ಟು ಭಾರತೀಯ ಆಟಗಾರರು ದ್ವಿಶತಕ ಬಾರಿಸಿದ್ದಾರೆ? ಆದರೆ ಕಿಶನ್ ಈ ಕೆಲಸವನ್ನು ಮಾಡಿದ್ದಾರೆ.  ಇಶಾನ್ ತಂಡಕ್ಕಾಗಿ ಆಡಲು ಯಾವಾಗಲೂ ಸಿದ್ಧರಾಗುತ್ತಾರೆ. ಆದರೆ ಅವರನ್ನು ಪದೇ ಪದೇ ನಿರ್ಲಕ್ಷಿಸಲಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಅವರು ಎಷ್ಟು ಪಂದ್ಯಗಳನ್ನು ಆಡಿದ್ದಾರೆ? ಭಾರತೀಯ ಕ್ರಿಕೆಟ್‌ನ ಈ ಸಮಸ್ಯೆ ಇಂದಿನದಲ್ಲ, ಇದು ತುಂಬಾ ಹಳೆಯದು’ ಎಂದು ಜಡೇಜಾ ಹೇಳಿದ್ದಾರೆ.

5 / 7
ವಾಸ್ತವವಾಗಿ ಆಸೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಕಿಶನ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಆದರೆ, ಮೊದಲ ಪಂದ್ಯದಲ್ಲಿ ಕಿಶನ್ 39 ಎಸೆತಗಳಲ್ಲಿ 58 ರನ್‌ಗಳ ಆಕರ್ಷಕ ಇನ್ನಿಂಗ್ಸ್ ಆಡುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿದರು. ಇದಾದ ಬಳಿಕ ತಿರುವನಂತಪುರದಲ್ಲಿ ನಡೆದ ಎರಡನೇ ಟಿ20ಯಲ್ಲಿ 32 ಎಸೆತಗಳಲ್ಲಿ 52 ರನ್‌ಗಳ ಅದ್ಭುತ ಇನ್ನಿಂಗ್ಸ್‌ ಕೂಡ ಆಡಿದ್ದರು. ಆದರೂ ಅವರನ್ನು ತಂಡದಿಂದ ಕೈಬಿಡಲಾಯಿತು.

6 / 7
ಈ ಬಗ್ಗೆಯೂ ಅಸಮಾಧಾನಗೊಂಡಿರುವ ಜಡೇಜಾ, ‘ಮೂರನೇ ಪಂದ್ಯದಲ್ಲಿ ಡಕ್‌ಗೆ ಔಟಾದ ನಂತರ ಕಿಶನ್​ರನ್ನು ತಂಡದಿಂದ ಕೈಬಿಟ್ಟಿದ್ದಾರೆ. ನೀವು ಯಾರಿಗಾದರೂ ನಿರಂತರ ಅವಕಾಶಗಳನ್ನು ನೀಡದಿದ್ದರೆ, ಅವರು ದೊಡ್ಡ ಪಂದ್ಯಾವಳಿಯ ಭಾಗವಾಗಬಹುದೇ ಅಥವಾ ಇಲ್ಲವೇ ಎಂದು ನಿಮಗೆ ಹೇಗೆ ತಿಳಿಯುತ್ತದೆ. ಭಾರತ ತಂಡದ ಈ ನಿರ್ಧಾರ ಸಂಪೂರ್ಣ ತಪ್ಪು’ ಎಂದು ಜಡೇಜಾ ಹೇಳಿದ್ದಾರೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ

ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ

ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ