‘ಇಶಾನ್ ಕಿಶನ್ಗೆ ಅನ್ಯಾಯವಾಗುತ್ತಿದೆ’; ಆಯ್ಕೆ ಮಂಡಳಿ ನಡೆಗೆ ಜಡೇಜಾ ಅಸಮಾಧಾನ..!
Team India: ಕೇವಲ ಮೂರು ಪಂದ್ಯಗಳನ್ನು ಆಡಿದ ನಂತರ ಇಶಾನ್ ಅವರಿಗೆ ವಿಶ್ರಾಂತಿಯ ಅಗತ್ಯವಿದೆಯೇ? ಅವರು ವಿಶ್ವಕಪ್‌ನಲ್ಲಿ ಹೆಚ್ಚು ಪಂದ್ಯಗಳನ್ನು ಆಡಲಿಲ್ಲ. ವಿಶ್ವಕಪ್‌ನಲ್ಲಿ ಆಡಲು ಅರ್ಹರಾಗಿದ್ದ ಕಿಶನ್ ಅವರಿಗೆ ಮೊದಲ ಕೆಲವು ಪಂದ್ಯಗಳಲ್ಲಿ ಆಡುವ ಹನ್ನೊಂದರಲ್ಲಿ ಸ್ಥಾನ ನೀಡಲಾಯಿತು. ನಂತರ ಅವರನ್ನು ತಂಡದಿಂದ ಹೊರಗಿಡಲಾಯಿತು ಎಂದು ಜಡೇಜಾ ಆಕ್ರೋಶ ಹೊರಹಾಕಿದ್ದಾರೆ.
1 / 7
ಟೀಂ ಇಂಡಿಯಾದ ಯುವ ವಿಕೆಟ್ಕೀಪರ್ ಬ್ಯಾಟರ್ ಇಶಾನ್ ಕಿಶನ್ಗೆ ಆಯ್ಕೆ ಮಂಡಳಿಯಿಂದ ಅನ್ಯಾಯವಾಗುತ್ತಿದೆ ಎಂದು ತಂಡದ ಮಾಜಿ ಆಟಗಾರ ಅಜೇಯ್ ಜಡೇಜಾ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
2 / 7
ವಾಸ್ತವವಾಗಿ ಏಕದಿನ ವಿಶ್ವಕಪ್ಗೆ ಭಾರತ ತಂಡದಲ್ಲಿ ಆಯ್ಕೆಯಾಗಿದ್ದ ಇಶಾನ್ ಕಿಶನ್ಗೆ ಮೊದಲ ಕೆಲವು ಪಂದ್ಯಗಳಲ್ಲಿ ಆಡುವ ಅವಕಾಶ ನೀಡಲಾಯಿತು. ಆ ನಂತರ ಅವರನ್ನು ಆಡುವ ಹನ್ನೊಂದರ ಬಳಗದಿಂದ ಕೈಬಿಡಲಾಯಿತು. ಇದಾದ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೂ ಕಿಶನ್ ಅವರನ್ನು ಆಯ್ಕೆ ಮಾಡಲಾಯಿತು. ಆದರೆ ಇಲ್ಲಿಯೂ ಮೊದಲ 3 ಪಂದ್ಯಗಳನ್ನು ಆಡಿದ ನಂತರ ಅವರನ್ನು ತಂಡದಿಂದ ಕೈಬಿಡಲಾಯಿತು.
3 / 7
ಆಯ್ಕೆ ಮಂಡಳಿಯ ಈ ನಡೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವಿರೋದ ವ್ಯಕ್ತವಾಗುತ್ತಿದ್ದು, ಇದಕ್ಕೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ಕೂಡ ಧ್ವನಿಗೂಡಿಸಿದ್ದಾರೆ. ಸ್ಪೋರ್ಟ್ಸ್ ಸಂವಾದದಲ್ಲಿ ಈ ಬಗ್ಗೆ ಅಸಮಾಧಾನ ಹೊರಹಾಕಿರುವ ಜಡೇಜಾ, ‘ ಆಯ್ಕೆ ಮಂಡಳಿಯ ಈ ನಡೆ ಸರಿ ಇಲ್ಲ. ವಿಶ್ವಕಪ್ ನಂತೆಯೇ ಆಸೀಸ್ ವಿರುದ್ಧದ ಸರಣಿಯಲ್ಲಿ ಮೂರು ಪಂದ್ಯಗಳನ್ನು ಆಡಿದ್ದ ನಂತರ ಇಶಾನ್ ಕಿಶನ್ ಅವರನ್ನು ತಂಡದಿಂದ ಕೈಬಿಡಲಾಯಿತು.
4 / 7
ಕೇವಲ ಮೂರು ಪಂದ್ಯಗಳನ್ನು ಆಡಿದ ನಂತರ ಇಶಾನ್ ಅವರಿಗೆ ವಿಶ್ರಾಂತಿಯ ಅಗತ್ಯವಿದೆಯೇ? ಅವರು ವಿಶ್ವಕಪ್‌ನಲ್ಲಿ ಹೆಚ್ಚು ಪಂದ್ಯಗಳನ್ನು ಆಡಲಿಲ್ಲ. ವಿಶ್ವಕಪ್‌ನಲ್ಲಿ ಆಡಲು ಅರ್ಹರಾಗಿದ್ದ ಕಿಶನ್ ಅವರಿಗೆ ಮೊದಲ ಕೆಲವು ಪಂದ್ಯಗಳಲ್ಲಿ ಆಡುವ ಹನ್ನೊಂದರಲ್ಲಿ ಸ್ಥಾನ ನೀಡಲಾಯಿತು. ನಂತರ ಅವರನ್ನು ತಂಡದಿಂದ ಹೊರಗಿಡಲಾಯಿತು.
5 / 7
‘ನೀವೇ ಹೇಳಿ ಎಷ್ಟು ಭಾರತೀಯ ಆಟಗಾರರು ದ್ವಿಶತಕ ಬಾರಿಸಿದ್ದಾರೆ? ಆದರೆ ಕಿಶನ್ ಈ ಕೆಲಸವನ್ನು ಮಾಡಿದ್ದಾರೆ. ಇಶಾನ್ ತಂಡಕ್ಕಾಗಿ ಆಡಲು ಯಾವಾಗಲೂ ಸಿದ್ಧರಾಗುತ್ತಾರೆ. ಆದರೆ ಅವರನ್ನು ಪದೇ ಪದೇ ನಿರ್ಲಕ್ಷಿಸಲಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಅವರು ಎಷ್ಟು ಪಂದ್ಯಗಳನ್ನು ಆಡಿದ್ದಾರೆ? ಭಾರತೀಯ ಕ್ರಿಕೆಟ್‌ನ ಈ ಸಮಸ್ಯೆ ಇಂದಿನದಲ್ಲ, ಇದು ತುಂಬಾ ಹಳೆಯದು’ ಎಂದು ಜಡೇಜಾ ಹೇಳಿದ್ದಾರೆ.
6 / 7
ವಾಸ್ತವವಾಗಿ ಆಸೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಕಿಶನ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಆದರೆ, ಮೊದಲ ಪಂದ್ಯದಲ್ಲಿ ಕಿಶನ್ 39 ಎಸೆತಗಳಲ್ಲಿ 58 ರನ್‌ಗಳ ಆಕರ್ಷಕ ಇನ್ನಿಂಗ್ಸ್ ಆಡುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿದರು. ಇದಾದ ಬಳಿಕ ತಿರುವನಂತಪುರದಲ್ಲಿ ನಡೆದ ಎರಡನೇ ಟಿ20ಯಲ್ಲಿ 32 ಎಸೆತಗಳಲ್ಲಿ 52 ರನ್‌ಗಳ ಅದ್ಭುತ ಇನ್ನಿಂಗ್ಸ್ ಕೂಡ ಆಡಿದ್ದರು. ಆದರೂ ಅವರನ್ನು ತಂಡದಿಂದ ಕೈಬಿಡಲಾಯಿತು.
7 / 7
ಈ ಬಗ್ಗೆಯೂ ಅಸಮಾಧಾನಗೊಂಡಿರುವ ಜಡೇಜಾ, ‘ಮೂರನೇ ಪಂದ್ಯದಲ್ಲಿ ಡಕ್‌ಗೆ ಔಟಾದ ನಂತರ ಕಿಶನ್ರನ್ನು ತಂಡದಿಂದ ಕೈಬಿಟ್ಟಿದ್ದಾರೆ. ನೀವು ಯಾರಿಗಾದರೂ ನಿರಂತರ ಅವಕಾಶಗಳನ್ನು ನೀಡದಿದ್ದರೆ, ಅವರು ದೊಡ್ಡ ಪಂದ್ಯಾವಳಿಯ ಭಾಗವಾಗಬಹುದೇ ಅಥವಾ ಇಲ್ಲವೇ ಎಂದು ನಿಮಗೆ ಹೇಗೆ ತಿಳಿಯುತ್ತದೆ. ಭಾರತ ತಂಡದ ಈ ನಿರ್ಧಾರ ಸಂಪೂರ್ಣ ತಪ್ಪು’ ಎಂದು ಜಡೇಜಾ ಹೇಳಿದ್ದಾರೆ.