
ನ್ಯೂಝಿಲೆಂಡ್ ತಂಡದ ಸ್ಪಿನ್ನರ್ ಎಜಾಝ್ ಪಟೇಲ್ ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ವಾಂಖೆಡೆ ಸ್ಟೇಡಿಯಂನಲ್ಲಿ ಬರೋಬ್ಬರಿ 25 ವಿಕೆಟ್ಗಳನ್ನು ಕಬಳಿಸುವ ಮೂಲಕ. ಈ ವಿಕೆಟ್ಗಳೊಂದಿಗೆ ಭಾರತದ ಪಿಚ್ವೊಂದರಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿದೇಶಿ ಬೌಲರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ತಂಡದ ಮಾಜಿ ನಾಯನ ಇಯಾನ್ ಬಾಥಮ್ ಹೆಸರಿನಲ್ಲಿತ್ತು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2 ಟೆಸ್ಟ್ ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದ ಬಾಥಮ್ ಒಟ್ಟು 22 ವಿಕೆಟ್ ಕಬಳಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಎಜಾಝ್ ಪಟೇಲ್ ಅಳಿಸಿ ಹಾಕಿದ್ದಾರೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 4 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ ಎಜಾಝ್ ಪಟೇಲ್ ಒಟ್ಟು 25 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಭಾರತದ ಪಿಚ್ವೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿದೇಶಿ ಬೌಲರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಅಂದಹಾಗೆ 2021 ರಲ್ಲಿ ಇದೇ ಮೈದಾನದಲ್ಲಿ ಎಜಾಝ್ ಪಟೇಲ್ ಇತಿಹಾಸ ನಿರ್ಮಿಸಿದ್ದರು. ಮೂರು ವರ್ಷಗಳ ಹಿಂದೆ ವಾಂಖೆಡೆಯಲ್ಲಿ ನಡೆದ ಟೆಸ್ಟ್ನಲ್ಲಿ ಭಾರತದ 10 ಬ್ಯಾಟರ್ಗಳನ್ನು ಔಟ್ ಮಾಡಿ, ಒಂದೇ ಇನಿಂಗ್ಸ್ನಲ್ಲಿ ಹತ್ತು ವಿಕೆಟ್ ಪಡೆದ ವಿಶ್ವದ ಮೂರನೇ ಬೌಲರ್ ಎನಿಸಿಕೊಂಡಿದ್ದರು. ಇದಕ್ಕೂ ಮುನ್ನ ಜಿಮ್ ಲೇಕರ್ (1956) ಮತ್ತು ಅನಿಲ್ ಕುಂಬ್ಳೆ (1999) ಮಾತ್ರ ಈ ಸಾಧನೆ ಮಾಡಿದ್ದರು. 2021 ರಲ್ಲಿ 10 ವಿಕೆಟ್ ಉರುಳಿಸಿ ಎಜಾಝ್ ಪಟೇಲ್ ಈ ಸಾಧನೆಯನ್ನು ಪುನರಾವರ್ತಿಸಿದ್ದರು.

ಇದೀಗ ಮತ್ತೆ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 5 ವಿಕೆಟ್ ಕಬಳಿಸಿದ ಎಜಾಝ್ ಪಟೇಲ್, ದ್ವಿತೀಯ ಇನಿಂಗ್ಸ್ನಲ್ಲಿ 6 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಭಾರತದ ಪಿಚ್ವೊಂದರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿದೇಶಿ ಬೌಲರ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.