AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಏಷ್ಯಾಕಪ್​ಗೆ ಬಲಿಷ್ಠ ಪ್ಲೇಯಿಂಗ್ 11 ಪ್ರಕಟಿಸಿದ ಅಜಿಂಕ್ಯ ರಹಾನೆ

Ajinkya Rahane's Asia Cup 2025 Playing XI: 2025ರ ಏಷ್ಯಾಕಪ್‌ಗೆ ಬಿಸಿಸಿಐ ತನ್ನ ತಂಡವನ್ನು ಪ್ರಕಟಿಸಿದ ಬೆನ್ನಲ್ಲೇ, ಮಾಜಿ ನಾಯಕ ಅಜಿಂಕ್ಯ ರಹಾನೆ ತಮ್ಮ ಆಡುವ ಹನ್ನೊಂದರ ತಂಡವನ್ನು ಘೋಷಿಸಿದ್ದಾರೆ. ಗಿಲ್ ಮತ್ತು ಅಭಿಷೇಕ್ ಶರ್ಮಾ ಆರಂಭಿಕರಾಗಿದ್ದು, ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಕ್ರಮವಾಗಿ 4 ಮತ್ತು 5ನೇ ಸ್ಥಾನದಲ್ಲಿದ್ದಾರೆ. ಜಿತೇಶ್ ಶರ್ಮಾ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದಾರೆ. ಬೌಲಿಂಗ್‌ನಲ್ಲಿ ಬುಮ್ರಾ, ಅರ್ಶ್‌ದೀಪ್ ಮತ್ತು ಕುಲ್ದೀಪ್ ಪ್ರಮುಖ ಆಟಗಾರರು. ರಹಾನೆ ಸಂಜು ಸ್ಯಾಮ್ಸನ್ ಅವರ ಅನುಪಸ್ಥಿತಿಯನ್ನು ವಿಷಾದಿಸಿದ್ದಾರೆ.

ಪೃಥ್ವಿಶಂಕರ
|

Updated on:Sep 04, 2025 | 5:42 PM

Share
2025 ರ ಏಷ್ಯಾಕಪ್​ಗೆ ಆತಿಥೇಯ ಬಿಸಿಸಿಐ ತನ್ನ ತಂಡವನ್ನು ಪ್ರಕಟಿಸಿದೆ. ಈ 20 ಜನರ ತಂಡದಲ್ಲಿ ಬಲಿಷ್ಠ ಆಟಗಾರರ ಪಡೆಯೇ ಸೇರಿದೆ. ಹೀಗಾಗಿ ಯಾವ 11 ಆಟಗಾರರು ಕಣಕ್ಕಿಳಿಯುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಈ ನಡುವೆ ಭಾರತ ತಂಡದಿಂದ ಹೊರಗುಳಿದಿರುವ ಮಾಜಿ ನಾಯಕ ಅಜಿಂಕ್ಯ ರಹಾನೆ ಈ ಏಷ್ಯನ್ ಕಪ್​ಗೆ ತನ್ನ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದಾರೆ.

1 / 6
ರಹಾನೆ ತಮ್ಮ ಪ್ಲೇಯಿಂಗ್ 11 ನಲ್ಲಿ ಶುಭ್​ಮನ್ ಗಿಲ್ ಮತ್ತು ಅಭಿಷೇಕ್ ಶರ್ಮಾ ಅವರನ್ನು ಆರಂಭಿಕ ಆಟಗಾರರನ್ನಾಗಿ ಆಯ್ಕೆ ಮಾಡಿದ್ದಾರೆ. 3 ನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಅವರನ್ನು ಕಣಕ್ಕಿಳಿಸಿದ್ದಾರೆ. ಹಾಗೆಯೇ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ 4 ನೇ ಕ್ರಮಾಂಕದಲ್ಲಿ ಮತ್ತು ಮಾಜಿ ಉಪನಾಯಕ ಮತ್ತು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ 5 ನೇ ಕ್ರಮಾಂಕದಲ್ಲಿ ಸ್ಥಾನ ನೀಡಿದ್ದಾರೆ.

2 / 6
6 ನೇ ಕ್ರಮಾಂಕದಲ್ಲಿ ರಹಾನೆ, ಕಮ್‌ಬ್ಯಾಕ್ ಮ್ಯಾನ್ ಜಿತೇಶ್ ಶರ್ಮಾ ಅವರನ್ನು ವಿಕೆಟ್ ಕೀಪಿಂಗ್ ಆಯ್ಕೆಯಾಗಿ ಆಯ್ಕೆ ಮಾಡಿದ್ದಾರೆ. ಜಿತೇಶ್ 2025 ರ ಐಪಿಎಲ್‌ನಲ್ಲಿ ಫಿನಿಷರ್ ಆಗಿ ಉತ್ತಮವಾಗಿ ಆಡಿದ್ದರು. ಆದ್ದರಿಂದ ಅವರು ಸಂಜು ಬದಲು ಜಿತೇಶ್​ಗೆ ಮಣೆಹಾಕಿದ್ದಾರೆ. 7 ನೇ ಕ್ರಮಾಂಕದಲ್ಲಿ ಮತ್ತೊಬ್ಬ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರಿಗೆ ಅವಕಾಶ ಸಿಕ್ಕಿದೆ.

3 / 6
ಸಂಜುರನ್ನು ತಂಡದಿಂದ ಹೊರಗಿಟ್ಟಿದ್ದರೂ ಅವರನ್ನು ಹೊಗಳಿರುವ ರಹಾನೆ, ‘ಈಗ ಗಿಲ್ ತಂಡಕ್ಕೆ ಮರಳಿದ್ದಾರೆ. ಅವರು ಅಭಿಷೇಕ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಆಡುತ್ತಾರೆ ಎಂದು ನಾನು ಭಾವಿಸುತ್ತೇನೆ. ವೈಯಕ್ತಿಕವಾಗಿ, ಸಂಜು ಸ್ಯಾಮ್ಸನ್ ಅವರನ್ನು ತಂಡದಲ್ಲಿ ನೋಡಲು ನಾನು ಬಯಸುತ್ತೇನೆ ಏಕೆಂದರೆ ಅವರು ಉತ್ತಮ ಪ್ರದರ್ಶನ ನೀಡಿದ್ದಾರೆ. ಆದರೆ ನನ್ನ ಅಭಿಪ್ರಾಯದಲ್ಲಿ, ಬಹುಶಃ ಸಂಜು ಸ್ಯಾಮ್ಸನ್ ಹೊರಗುಳಿಯಬೇಕಾಗಬಹುದು ಎಂದಿದ್ದಾರೆ.

4 / 6
ಇನ್ನು ಬೌಲಿಂಗ್‌ನಲ್ಲಿ ರಹಾನೆ, ಜಸ್ಪ್ರೀತ್ ಬುಮ್ರಾ ಮತ್ತು ಅರ್ಶ್‌ದೀಪ್ ಸಿಂಗ್ ಅವರನ್ನು ತಮ್ಮ ನೆಚ್ಚಿನ ವೇಗದ ಬೌಲರ್‌ಗಳಾಗಿ ಆಯ್ಕೆ ಮಾಡಿದ್ದಾರೆ. ‘ಈ ಏಷ್ಯಾಕಪ್‌ನಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಅರ್ಶ್‌ದೀಪ್ ಸಿಂಗ್ ಒಟ್ಟಿಗೆ ಬೌಲಿಂಗ್ ಮಾಡುವುದನ್ನು ನಾನು ನೋಡಲು ಬಯಸುತ್ತೇನೆ ಎಂದು ರಹಾನೆ ಹೇಳಿದ್ದಾರೆ. ಸ್ಪಿನ್ನರ್​ಗಳ ಖೋಟಾದಲ್ಲಿ ಕುಲ್ದೀಪ್ ಯಾದವ್​ಗೆ ಅವಕಾಶ ನೀಡಿರುವ ರಹಾನೆ, ವರುಣ್ ಚಕ್ರವರ್ತಿ ಅಥವಾ ಹರ್ಷಿತ್ ರಾಣಾ ಈ ಇಬ್ಬರಲ್ಲಿ ಒಬ್ಬರಿಗೆ ಅವಕಾಶ ಸಿಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

5 / 6
ರಹಾನೆ ನಾಯಕತ್ವದ ಭಾರತ ತಂಡ: ಶುಭ್​ಮನ್ ಗಿಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಜಿತೇಶ್ ಶರ್ಮಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಶ್​ದೀಪ್ ಸಿಂಗ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ / ಹರ್ಷಿತ್ ರಾಣಾ.

6 / 6

Published On - 4:43 pm, Thu, 21 August 25

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟಿ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ