AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ajinkya Rahane: ಬ್ಯಾಕ್ ಟು ಬ್ಯಾಕ್ 4 ಅರ್ಧಶತಕ ಸಿಡಿಸಿದ ರಹಾನೆ

Ajinkya Rahane: ಅಜಿಂಕ್ಯ ರಹಾನೆ ಟೀಮ್ ಇಂಡಿಯಾದಿಂದ ಹೊರಬಿದ್ದು ಒಂದು ವರ್ಷ ಕಳೆದಿದೆ. ಭಾರತದ ಪರ 85 ಟೆಸ್ಟ್ ಪಂದ್ಯಗಳನ್ನಾಡಿರುವ ರಹಾನೆ 12 ಶತಕಗಳು ಹಾಗೂ 26 ಅರ್ಧಶತಕಗಳೊಂದಿಗೆ ಒಟ್ಟು 5077 ರನ್ ಕಲೆಹಾಕಿದ್ದಾರೆ. ಇದಾಗ್ಯೂ ಅವರನ್ನು ಮುಂಬರುವ ದುಲೀಪ್ ಟ್ರೋಫಿ ಟೂರ್ನಿಗೆ ಆಯ್ಕೆ ಮಾಡಲಾಗಿಲ್ಲ.

ಝಾಹಿರ್ ಯೂಸುಫ್
|

Updated on: Aug 18, 2024 | 11:23 AM

Share
ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಒನ್ ಡೇ ಕಪ್ ಟೂರ್ನಿಯಲ್ಲಿ ಅಜಿಂಕ್ಯ ರಹಾನೆ ಸತತ ನಾಲ್ಕು ಅರ್ಧಶತಕಗಳನ್ನು ಬಾರಿಸಿ ಅಬ್ಬರಿಸಿದ್ದಾರೆ. ಈ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಹ್ಯಾಂಪ್‌ಶೈರ್ ವಿರುದ್ಧ 70 ರನ್ ಸಿಡಿಸುವ ಮೂಲಕ ರಹಾನೆ ಲೀಸೆಸ್ಟರ್‌ಶೈರ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

1 / 5
ಇದಕ್ಕೂ ಮುನ್ನ ನಾಟಿಂಗ್​ಹ್ಯಾಮ್​ಶೈರ್ ವಿರುದ್ಧದ ಪಂದ್ಯದಲ್ಲಿ ಅಜಿಂಕ್ಯ ರಹಾನೆ 71 ರನ್​ಗಳ ಇನಿಂಗ್ಸ್ ಆಡಿದ್ದರು. ಹಾಗೆಯೇ ಸಸೆಕ್ಸ್ ವಿರುದ್ಧದ ಪಂದ್ಯದಲ್ಲಿ 68 ರನ್ ಸಿಡಿಸಿದ್ದರು. ಇನ್ನು ಗ್ಲೌಸೆಸ್ಟರ್‌ಶೈರ್ ವಿರುದ್ಧದ ಪಂದ್ಯದಲ್ಲಿ 62 ರನ್ ಬಾರಿಸಿ ಮಿಂಚಿದ್ದರು. ಇದೀಗ ಹ್ಯಾಂಪ್‌ಶೈರ್ ವಿರುದ್ಧ 70 ರನ್ ಬಾರಿಸಿದ್ದಾರೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ನಾಲ್ಕು ಅರ್ಧಶತಕಗಳ ಸಾಧನೆ ಮಾಡಿದ್ದಾರೆ.

2 / 5
ಟೀಮ್ ಇಂಡಿಯಾ ಟೆಸ್ಟ್ ತಂಡದ ಖಾಯಂ ಸದಸ್ಯರಾಗಿದ್ದ ಅಜಿಂಕ್ಯ ರಹಾನೆ ಅವರನ್ನು ಇದೀಗ ಆಯ್ಕೆಗೆ ಪರಿಗಣಿಸಲಾಗುತ್ತಿಲ್ಲ. ಅವರು ಕೊನೆಯ ಬಾರಿಗೆ ಭಾರತದ ಪರ ಆಡಿದ್ದು 2023 ರಲ್ಲಿ. ಹೀಗಾಗಿಯೇ ರಹಾನೆ ಇದೀಗ ಇಂಗ್ಲೆಂಡ್​ನಲ್ಲಿ ಕೌಂಟಿ ಕ್ರಿಕೆಟ್ ಆಡುತ್ತಿದ್ದಾರೆ.

3 / 5
ಇನ್ನು ಅಜಿಂಕ್ಯ ರಹಾನೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವುದು ಅಂದುಕೊಂಡಷ್ಟು ಸುಲಭವಲ್ಲ. ಏಕೆಂದರೆ ದುಲೀಪ್ ಟ್ರೋಫಿ ಟೂರ್ನಿಗೆ ಪ್ರಕಟಿಸಲಾದ ನಾಲ್ಕು ತಂಡಗಳಲ್ಲೂ ರಹಾನೆ ಅವರಿಗೆ ಸ್ಥಾನ ನೀಡಲಾಗಿಲ್ಲ. ಅಂದರೆ ಬಿಸಿಸಿಐ ಆಯ್ಕೆ ಸಮಿತಿಯು ಯುವ ಆಟಗಾರರ ಆಯ್ಕೆಗೆ ಒಲವು ತೋರಿರುವುದು ಸ್ಪಷ್ಟ. ಹೀಗಾಗಿ 36 ವರ್ಷದ ಅಜಿಂಕ್ಯ ರಹಾನೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಸಾಧ್ಯತೆ ಕ್ಷೀಣ ಎನ್ನಬಹುದು.

4 / 5
ಅಜಿಂಕ್ಯ ರಹಾನೆ ಟೀಮ್ ಇಂಡಿಯಾ ಪರ ಈವರೆಗೆ 85 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 144 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು ಒಟ್ಟು 5077 ರನ್ ಕಲೆಹಾಕಿದ್ದಾರೆ. ಇದೇ ವೇಳೆ 12 ಶತಕಗಳು ಹಾಗೂ 26 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಆದರೆ ಕಳೆದ ವರ್ಷ ತಂಡದಿಂದ ಹೊರಬಿದ್ದ ಬಳಿಕ ಅವರನ್ನು ಟೀಮ್ ಇಂಡಿಯಾದ ಆಯ್ಕೆಗೆ ಪರಿಗಣಿಸಲಾಗಿಲ್ಲ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗುವ ಸಾಧ್ಯತೆಯಿಲ್ಲ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮಗುವಿಗೆ ಜನ್ಮ ನೀಡಿದೆ ಎಂದ 70ರ ಅಜ್ಜಿ: ಬಯಲಾಯಿತು ಸತ್ಯ

ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ

ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ

ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ

ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು

ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?

ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ

ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!

ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!